ಬಿಡಿಎ ಕಚೇರಿ ಮೇಲೆ ಎಸಿಬಿ ದಿಢೀರ್‌ ದಾಳಿ

Team Udayavani, Nov 20, 2021, 12:52 PM IST

10acb

ಬೆಂಗಳೂರು: ಬಿಡಿಎ ನಿವೇಶನಗಳ ಹಂಚಿಕೆ ಹಾಗೂ ಮೃತ ಪಟ್ಟರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ವ್ಯಾಪಕ ಭ್ರಷ್ಟಾಚಾರ ಎಸಗುತ್ತಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

ಶನಿವಾರವೂ ಮುಂದುವರಿಯುವ ಸಾಧ್ಯತೆಯಿದೆ. ನಗರದ ವೈಯಾಲಿಕಾವಲ್‌ನಲ್ಲಿರುವ ಬಿಡಿಎ ಕಚೇರಿಯ ಮೇಲೆ ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್‌ ಮಾರ್ಗದರ್ಶನದಲ್ಲಿ ಮೂವರು ಎಸ್ಪಿಗಳಾದ ಅಬ್ದುಲ್‌ ಅಹ್ಮದ್‌, ಉಮಾ ಪ್ರಶಾಂತ್‌ ಮತ್ತು ಯತೀಶ್‌ ಚಂದ್ರ ನೇತೃತ್ವದ ಸುಮಾರು 80ಕ್ಕೂ ಅಧಿಕ ಮಂದಿಯ ನಾಲ್ಕು ತಂಡಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಮಧ್ಯಾಹ್ನ ಮೂರು ಗಂಟೆಯಿಂದ ರಾತ್ರಿ 9.30ರವರೆಗೆ ಕಚೇರಿಯನ್ನು ಬಂದ್‌ ಮಾಡಿ ಶೋಧಿಸಲಾಗಿದೆ.

ದಾಳಿ ಸಂದರ್ಭದಲ್ಲಿ ನೂರಾರು ಕೋಟಿ ರೂ. ಅವ್ಯವಹಾರದ ಕುರಿತಂತೆ ಮಾಹಿತಿ ಸಂಗ್ರಹಣೆ ಮತ್ತು ದಾಖಲೆಗಳ ಪರಿಶೀಲಿಸಲಾಗುತ್ತಿದೆ ಎಂದು ಎಸಿಬಿ ತಿಳಿಸಿದೆ. ಬಿಡಿಎ ಉಪ ಕಾರ್ಯದರ್ಶಿ ನವೀನ್‌ ಜೊಸೇಪ್‌ ಕಚೇರಿಯಲ್ಲಿ ಅಲ್ಪ ಪ್ರಮಾಣದಲ್ಲಿ ನಗದು, ದಾಖಲೆಗಳು ಸಿಕ್ಕಿವೆ ಎಂದು ಹೇಳಲಾಗಿದೆ.

ಚಾಲಕನೊಬ್ಬನ ಕಾರಿನಲ್ಲಿ ಬಿಡಿಎಗೆ ಸಂಬಂಧಿಸಿದ ಸೀಲ್‌ಗ‌ಳು, ದಾಖಲೆಗಳು ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ. ಬಿಡಿಎ ಭೂ ಸ್ವಾಧೀನ ವಿಭಾಗ ಮತ್ತು ಕಾರ್ಯದರ್ಶಿಗಳ ಕಚೇರಿ ಸೇರಿ ಎಲ್ಲಾ ವಿಭಾಗಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. ಬಿಡಿಎಯಿಂದ ಭೂ ಸ್ವಾಧೀನ ಮಾಡಿಕೊಂಡ ಜಾಗಕ್ಕೆ ಪರ್ಯಾಯವಾಗಿ ಪರಿಹಾರ ರೂಪದಲ್ಲಿ ನಿವೇಶನ ಹಂಚಿಕೆಯಲ್ಲಿ ಅಕ್ರಮ ಹಾಗೂ ಪರಿಹಾರದ ಹಣ ನೀಡುವಲ್ಲಿ ವಿಳಂಬ ಮಾಡುತ್ತಿದ್ದರು. ಜತೆಗೆ ಮೃತಪಟ್ಟವರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಿವೇಶನ ಹಂಚಿಕೆ ಮಾಡಿಕೊಂಡು ದೊಡ್ಡ ಮಟ್ಟದಲ್ಲಿ ಭ್ರಷ್ಟಾಚಾರ ಎಸಗುತ್ತಿದ್ದರು. ಅಲ್ಲದೆ, ಕೆಲ ಲೇಔಟ್‌ಗಳಲ್ಲಿ ಅರ್ಹತೆ ಇಲ್ಲದಿದ್ದರೂ ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಿದ್ದು, ಖಾಸಗಿ ಸಂಘದವರ ಜತೆಗೆ ಅಕ್ರಮವಾಗಿ ಲಾಭ ಪಡೆಯಲು ಅನುಕೂಲ ಮಾಡಿಕೊಟ್ಟಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಈ ಬಗ್ಗೆ ಕೆಲ ದಿನಗಳಿಂದ ಸಾರ್ವಜನಿಕರಿಂದ ಎಸಿಬಿಗೆ ದೂರುಗಳು ಬಂದಿದ್ದವು. ಅಲ್ಲದೇ ಬಿಡಿಎ ವಿವಿಧ ವಿಭಾಗದಲ್ಲಿ ಸಾಕಷ್ಟು ಅಕ್ರಮಗಳು ನಡೆದಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಈ ಸಂಬಂಧ ದಾಳಿ ನಡೆಸಿ ಇಡೀ ಕಚೇರಿಯನ್ನು ಪರಿಶೀಲಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ಸಂದರ್ಭದಲ್ಲಿ ಬಿಡಿಎ ಕಚೇರಿ ಮುಖ್ಯದ್ವಾರವನ್ನು ಬಂದ್‌ ಮಾಡಿದ ಎಸಿಬಿ ಸಿಬ್ಬಂದಿ, ಬಿಡಿಎಗೆ ಬಂದಿದ್ದ ಪ್ರತಿಯೊಬ್ಬ ಸಾರ್ವಜನಿಕರನ್ನು ಪರಿಶೀಲಿಸಿ, ವಿಚಾರಣೆ ನಡೆಸಿ ಹೊರಗಡೆ ಕಳುಹಿಸಲಾಯಿತು.

ಟಾಪ್ ನ್ಯೂಸ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.