ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೊಂದು ಆ್ಯಂಬುಲೆನ್ಸ್
Team Udayavani, Feb 2, 2021, 4:28 PM IST
ಬೆಂಗಳೂರು: ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆರೋಗ್ಯ ಕೇಂದ್ರ ಮತ್ತು ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಹೊಸ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು, ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಒಂದರಂತೆ ಆ್ಯಂಬುಲೆನ್ಸ್ ಒದಗಿಸಲು ಯೋಜನೆ ಸಿದ್ಧಪಡಿಸುತ್ತಿರುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದರು.
ಜೆಡಿಎಸ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಪ್ರಶ್ನೆಗೆ, ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಹೆಚ್ಚಿನ ಅನುದಾನ ಬರುತ್ತಿದೆ. ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ. ಇದಕ್ಕಾಗಿ ವಿಶ್ವ ಆರೋಗ್ಯ ಸಂಸ್ಥೆ ಅಥವಾ ಏಷ್ಯಾ ಆರೋಗ್ಯ ಅಭಿವೃದ್ಧಿ ಬ್ಯಾಂಕ್ ಮೂಲಕ ಸಾಲ ಪಡೆಯುವ ಬಗ್ಗೆಯೂ ಯೋಚನೆ ಮಾಡುತ್ತಿದ್ದೇವೆ ಎಂದರು. ತುರ್ತು ಸೇವೆ ನೀಡಲು 108 ಆ್ಯಂಬುಲೆನ್ಸ್ಗಳು ಸೇವೆ ಸಲ್ಲಿಸುತ್ತಿವೆ. ಇದರ ಜತೆಗೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೃದ್ರೋಗ, ತುರ್ತು ಸೇವೆ, ಟೆಲಿ ಮೆಡಿಷಿನ್, ಟೆಲಿ ಐಸಿಯು ಒಳಗೊಂಡ 11 ಸೇವೆ ಒದಗಿಸುವ ಸುಸಜ್ಜಿತ ಆ್ಯಂಬುಲೆನ್ಸ್ಗಳು ಬರಲಿವೆ ಎಂದು ಹೇಳಿದರು.
ಇದನ್ನೂ ಓದಿ:4.18 ಲಕ್ಷ ಬೋಗಸ್ ಪಿಂಚಣಿ ಪ್ರಕರಣ ಪತ್ತೆ
ವೈದ್ಯಕೀಯ ಕಾಲೇಜುಗಳಲ್ಲಿ ಕ್ಯಾನ್ಸರ್ ಕೇಂದ್ರ: ಕ್ಯಾನ್ಸರ್ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಪ್ರತ್ಯೇಕ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ ಎಂದು ಬಿಜೆಪಿ ಸದಸ್ಯ ಅ. ದೇವೇಗೌಡರ ಪ್ರಶ್ನೆಗೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.