Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
ಮೇಲ್ಮನವಿ ಸಲ್ಲಿಸಲು ಗೃಹ ಸಚಿವಾಲಯದಿಂದ ಅನುಮತಿ
Team Udayavani, Nov 16, 2024, 3:09 PM IST
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ 2ನೇ ಆರೋಪಿ ನಟ ದರ್ಶನ್‌ಗೆ ಹೈಕೋರ್ಟ್ ನಿಂದ ನೀಡಿರುವ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಸರ್ವೋಚ್ಚ ನ್ಯಾಯಾಲಯ ದಲ್ಲಿ ಮೇಲ್ಮನವಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸುಪ್ರಿಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಹಲವು ಪ್ರಕ್ರಿಯೆಗಳಿವೆ. ಶೀಘ್ರ ಮೇಲ್ಮನವಿ ಸಲ್ಲಿಸಲು ತಯಾರಿ ನಡೆಯುತ್ತಿದೆ. ಮಧ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿರುವ ದರ್ಶನ್‌ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆಗಳಿವೆ.
ಬೆನ್ನು ನೋವಿಗೆ ಸರ್ಜರಿ ಮಾಡಿಸಿಕೊಳ್ಳಲು ಜಾಮೀನು ಪಡೆದುಕೊಂಡಿದ್ದರು. ಆದರೆ ಜೈಲಿನಿಂದ ಹೊರ ಬಂದು ಇಷ್ಟು ದಿನ ಕಳೆದರೂ ಸರ್ಜ ರಿಗೆ ದಿನಾಂಕ ನಿಗದಿಯಾಗಿಲ್ಲ.
ದರ್ಶನ್ ಅವರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರದ ಅನುಮತಿಯ ಅಗತ್ಯವಿದೆ. ಇತ್ತೀಚೆಗೆ ಗೃಹ ಸಚಿವಾಲಯದಿಂದ ಅನುಮತಿ ಸಿಕ್ಕಿದೆ. ಸರ್ಕಾರದ ಅನುಮತಿ ಸಿಕ್ಕ ಬೆನ್ನಲ್ಲೇ ಮೇಲ್ಮನವಿ ಅರ್ಜಿ ಸಿದ್ಧಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ
Theft Case: ರಿಯಲ್ ಎಸ್ಟೇಟ್ ಉದ್ಯಮಿ ಮನೆಗೆ ನುಗ್ಗಿ 50 ಲಕ್ಷ ಮೌಲ್ಯದ ಚಿನ್ನ ಕಳವು
Bengaluru: ಮದ್ಯಪಾನ, ಅತಿ ವೇಗದ ಚಾಲನೆ: 689 ಕೇಸ್, 1.33 ಲಕ್ಷ ರೂ. ದಂಡ
Bengaluru: ಪತ್ನಿ ಮೇಲಿನ ಕೋಪಕ್ಕೆ 4.5 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ
ಮಾಲಿನ್ಯ ನಿಯಂತ್ರಣ ಮಂಡಳಿ ನೇಮಕಕ್ಕೆ ವಿದ್ಯಾರ್ಹತೆ ಸಡಿಲ: ಹೈಕೋರ್ಟ್‌ಗೆ ಅರ್ಜಿ
MUST WATCH
ಹೊಸ ಸೇರ್ಪಡೆ
ರಾಷ್ಟ್ರಾದ್ಯಂತ ಶೈಕ್ಷಣಿಕ ಪಠ್ಯಗಳ ಪೂರೈಕೆಗೆ ಫ್ಲಿಪ್ ಕಾರ್ಟ್ ಮತ್ತು NCERT ಒಪ್ಪಂದ
Karkala: ಹೆದ್ದಾರಿಯಲ್ಲಿ ದಾರಿ ತಪ್ಪಿಸುವ ಡೈವರ್ಶನ್‌ಗಳು!
Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.