“ಬದಲಾಗು ನೀನು’ ದೃಶ್ಯ ರೂಪಕಕ್ಕೆ ಮೆಚ್ಚುಗೆ

Team Udayavani, Jun 7, 2020, 5:40 AM IST

badalagu-neenu

ಬೆಂಗಳೂರು: ಕೋವಿಡ್‌ 19 ವಿರುದ್ಧದ ಹೋರಾಟದಲ್ಲಿ ನಿರತರಾಗಿರುವ ನಿಜವಾದ ಹೀರೊಗಳಿಗೆ ಕನ್ನಡ ಚಿತ್ರರಂಗ, ಕ್ರೀಡಾರಂಗದ ಪ್ರಮುಖರು ಗೌರವ ಸಲ್ಲಿಸುವ “ಬದಲಾಗು ನೀನು, ಬದಲಾಯಿಸು ನೀನು’ ದೃಶ್ಯ ರೂಪಕಕ್ಕೆ  ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸಚಿವ ಡಾ.ಕೆ.ಸುಧಾಕರ್‌ ಮಾರ್ಗದರ್ಶನದಲ್ಲಿ ಈ ದೃಶ್ಯ ರೂಪಕ ಸಿದ್ಧಪಡಿಸಲಾಗಿದೆ. ಯೂಟ್ಯೂಬ್‌ನಲ್ಲಿ ಅಪ್‌ಲೋಡ್‌ ಮಾಡಿದ 24 ಗಂಟೆಗಳಲ್ಲಿ ಸುಮಾರು ನಾಲ್ಕು ಲಕ್ಷಕ್ಕೂ ಆಧಿಕ ಮಂದಿ ವೀಕ್ಷಿಸಿದ್ದಾರೆ. ಅಂತೆಯೇ ಫೇಸ್‌ಬುಕ್‌, ಟ್ವಿಟ್ಟರ್‌, ಇನ್‌ಸ್ಟಾಗ್ರಾಂನಲ್ಲಿಯೂ ಲಕ್ಷಾಂತರ ಮಂದಿ ವೀಕ್ಷಿಸಿ ಲೈಕ್‌, ಶೇರ್‌ ಮಾಡಿದ್ದಾರೆ.

10 ನಿಮಿಷದ ವಿಡಿಯೋ ಇದಾಗಿದ್ದು, ಪವನ್‌ ಒಡೆಯರ್‌ ನಿರ್ದೇಶಿಸಿದ್ದಾರೆ. ಜಗತ್ತನ್ನು ಕಾಡುತ್ತಿರುವ ಕೋವಿಡ್‌ 19ದಿಂದ ಜನರನ್ನು ರಕ್ಷಿಸುತ್ತಿರುವ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತರು, ಪೊಲೀಸ್‌ ಸಿಬ್ಬಂದಿ,  ವಿಜ್ಞಾನಿಗಳು, ರೈತರು, ಪೌರ ಕಾರ್ಮಿಕರು, ಮಾಧ್ಯಮ ವರದಿಗಾರರನ್ನು ಸೇರಿದಂತೆ ಅನೇಕರನ್ನು ಸ್ಮರಿಸಿಸಲಾಗಿದೆ. ಖ್ಯಾತ ಕ್ರಿಕೆಟಿಗರಾದ ಅನಿಲ್‌ ಕುಂಬ್ಳೆ, ರಾಹುಲ್‌ ದ್ರಾವಿಡ್‌, ಕನ್ನಡ ಚಿತ್ರರಂಗದ ಖ್ಯಾತ ನಟರಾದ ಶಿವರಾಜ್‌ ಕುಮಾರ್‌,  ಪುನೀತ್‌ ರಾಜ್‌ಕುಮಾರ್‌, ರವಿಚಂದ್ರನ್‌, ಉಪೇಂದ್ರ, ದರ್ಶನ್‌, ರಮೇಶ್‌ ಅರವಿಂದ್‌, ಸುಮಲತಾ ಅಂಬರೀಶ್‌, ಯಶ್‌, ಗಣೇಶ್‌, ರಕ್ಷಿತ್‌ ಶೆಟ್ಟಿ, ಧ್ರುವ ಸರ್ಜಾ, ರವಿ ಶಂಕರ್‌ ಸೇರಿದಂತೆ ಅನೇಕರು ಕಾಣಿಸಿಕೊಂಡಿದ್ದಾರೆ.

ವಿಶೇಷವೆಂದರೆ ಈ ಕ್ರೀಡಾಪಟು ಮತ್ತು ನಟರು ತಮ್ಮನ್ನು  ಜನ ಗುರುತಿಸಿ ಕರೆಯುವ “ಶೀರ್ಷಿಕೆ’ಗಳನ್ನು ಕೋವಿಡ್‌ ಹೋರಾಟದಲ್ಲಿರುವ ನಿರತರಾಗಿರುವವರಿಗೆ ಅರ್ಪಿಸಿ ಅವರು “ನಮ್ಮ ಹೀರೊ’ ಎಂದಿದ್ದಾರೆ. ಜತೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ದನಿಗೂಡಿಸಿದ್ದಾರೆ. ಮುಖ್ಯವಾಗಿ ಸಾರ್ವಜನಿಕರು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು, ನಿರ್ವಹಿಸಬೇಕಾದ ಜವಾಬ್ದಾರಿಗಳು, ಎಚ್ಚರ ತಪ್ಪಿದರೆ ಆಗುವ ಅನಾಹುತಗಳನ್ನು ನಟರು ವಿಶಿಷ್ಟ ಡೈಲಾಗ್‌ಗಳ ಮೂಲಕ ಹೇಳಿದ್ದಾರೆ. ಈ ಡೈಲಾಗ್‌ಗಳನ್ನು ಸಾವಿರಾರು ಅಭಿಮಾನಿಗಳು ವಾಟ್ಸ್‌ಆ್ಯಪ್‌ ಸ್ಟೇಟಸ್‌ಗಳಿಗೆ ಅಪ್‌ಲೋಡ್‌ ಮಾಡಿದ್ದಾರೆ.

ಸಿಎಂ ಲೋಕಾರ್ಪಣೆ: ಈ ದೃಶ್ಯ ರೂಪಕವನ್ನು ಶುಕ್ರವಾರ ಗೃಹ ಕಚೇರಿ “ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಅದನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ವಾರಂಟೈನ್‌ ವೇಳೆ ಪರಿಕಲ್ಪನೆ ಮೂಡಿತು: ಸಚಿವ ಡಾ.ಕೆ.ಸುಧಾಕರ್‌ ಮಾತನಾಡಿ, ಕೋವಿಡ್‌ 19 ಸೋಂಕಿನ ಬಗ್ಗೆ ಜಾಗೃತಿ ಮೂಡಿಸಲು ವಿನೂತನ ಪ್ರಯತ್ನವಾಗಿ ದೃಶ್ಯ ರೂಪಕ ರೂಪಿಸಿದೆ. ನಾನು ಸ್ವಯಂ ಕ್ವಾರೆಂಟೈನ್‌ನಲ್ಲಿದ್ದ ವೇಳೆ  ಸರ್ಕಾರ ಕೈಗೊಳ್ಳುವ ಮುನ್ನೆಚ್ಚರಿಕೆ ಕ್ರಮಗಳ ಜತೆಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸವೂ ಆಗಬೇಕೆಂಬ ಚಿಂತನೆ ಮನದಲ್ಲಿ ಮೂಡಿತು. ಅದರಂತೆ ದೃಶ್ಯ ರೂಪಕ ರೂಪುಗೊಂಡಿದ್ದು, ಕೋವಿಡ್‌ 19 ಕುರಿತಂತೆ ಹಲವು  ಉಪಯುಕ್ತ ಸಲಹೆಗಳನ್ನು ಖ್ಯಾತನಾಮರು ನೀಡಿದ್ದಾರೆ. ಚಲನಚಿತ್ರ ಕಲಾವಿದರು, ಸಂಗೀತ ನಿರ್ದೇಶಕರು, ಕ್ರೀಡಾಪಟುಗಳು ಇದಕ್ಕೆ ದನಿಯಾಗಿದ್ದಾರೆ. ಇದಕ್ಕಾಗಿ ಸರ್ಕಾರದ ಪರವಾಗಿ ಅವರಿಗೆ ಧನ್ಯವಾದ ತಿಳಿಸಿದರು.

ಚಿತ್ರನಟ ಸುದೀಪ್‌ ಅವರನ್ನು ದೃಶ್ಯ ರೂಪ ಕಕ್ಕೆ ಜತೆಗೂಡಲು ಸಂಪರ್ಕಿಸಲು ಯತ್ನಿಸಿ ದೆವು. ಆದರೆ, ಅವರ ಸಂಪರ್ಕ ಲಭ್ಯವಾಗಲಿಲ್ಲ.
-ಡಾ.ಕೆ.ಸುಧಾಕರ್‌, ಆರೋಗ್ಯ ಸಚಿವ

ಟಾಪ್ ನ್ಯೂಸ್

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

Toxic Movie: ಫ್ಯಾನ್ಸ್‌ ನಶೆಯೇರಿಸಿದ ಯಶ್‌; ಹಾಲಿವುಡ್‌ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.