ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ
Team Udayavani, Jun 28, 2020, 6:06 AM IST
ಬೆಂಗಳೂರು: ಕೋವಿಡ್ 19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯೊಳಗಾಗಿ ಸೋಂಕಿತರ ಚಿಕಿತ್ಸೆಗಾಗಿ ಕನಿಷ್ಠ ಹತ್ತು ಸಾವಿರ ಹಾಸಿಗೆಗಳ ವ್ಯವಸ್ಥೆ ಮಾಡುವ ಕಾರ್ಯ ಪ್ರಗತಿಯಲ್ಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲದೆ, ಬಿಡಿಎ, ವಸತಿ ಇಲಾಖೆ ಮತ್ತು ಖಾಸಗಿ ನಿರ್ಮಾಣ ಸಂಸ್ಥೆ ಗಳು ನಿರ್ಮಿಸಿರುವ ವಸತಿ ಸಮುಚ್ಚಯಗಳು, ಸರ್ಕಾರಿ ಮತ್ತು ಖಾಸಗಿ ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ ಗಳು, ಹಾಸ್ಟೆಲ್‌ಗಳು ಮತ್ತು ಬೃಹತ್ ವಾಣಿಜ್ಯ ಸಮುತ್ಛಯಗಳನ್ನು ಕೋವಿಡ್ ಚಿಕಿತ್ಸೆ ಉದ್ದೇಶಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಇವುಗಳನ್ನು ಸೌಲಭ್ಯಗಳ ಆಧಾರದ ಮೇಲೆ ಕೋವಿಡ್ ಚಿಕಿತ್ಸಾ ಆಸ್ಪತ್ರೆ ಮತ್ತು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಪರಿವತಿಸಲಾಗುವು ದು ಎಂದರು. ಬೆಂಗಳೂರು ನಗರದಾದ್ಯಂತ ಚಿಕಿತ್ಸೆಗೆ ಅಗತ್ಯವಿರುವ ಸರ್ಕಾರಿ ಮತ್ತು ಖಾಸಗಿ ಪ್ರದೇಶ ಗಳನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದ್ದು ಸೋಮವಾರ ಸಂಜೆ ವೇಳೆಗೆ ಖಚಿತ ಮಾಹಿತಿ ಲಭ್ಯವಾಗಲಿದೆ ಎಂದು ತಿಳಿಸಿದರು.
ಪರಿಶೀಲನೆ: ಕೋವಿಡ್ ಕೇರ್ ಸೆಂಟರ್‌ಗಳಿಗೆ ಹೆಚ್ಚಿನ ಸೌಲಭ್ಯ ಅಗತ್ಯವಿಲ್ಲ. ಹೀಗಾಗಿ ಬಿಡಿಎ, ವಸತಿ ಇಲಾಖೆ ನಿರ್ಮಿಸಿ ಸಿದ್ಧಗೊಂಡಿರುವ ಬಹುಮಹಡಿ ವಸತಿ ಸಮುಚ್ಚಯಗಳನ್ನು ಬಳಸಲಾಗುವುದು. ಬಿಡಿಎ ಬಳಿ 1700 ಫ್ಲಾಟ್ ಗಳಿವೆ. ಅವುಗಳಲ್ಲಿ ಬಳಕೆಗೆ ಲಭ್ಯವಿರುವ ನಿಖರ ಸಂಖ್ಯೆಯನ್ನು ಸೋಮವಾರ ತಿಳಿಸುವುದಾಗಿ ಬಿಡಿಎ ಆಯುಕ್ತ ಮಹದೇವ್ ತಿಳಿಸಿದ್ದಾರೆ.
ಸ್ವತ್ಛತೆಗೆ ಖಾಸಗಿ ಕಂಪನಿಗಳ ನೆರವು ಮತು ಸುರಕ್ಷತೆಗೆ ರಾಜ್ಯ ಮೀಸಲು ಪೊಲೀಸ್, ನಗರ ಸಶಸ್ತ್ರ ಮೀಸಲು ಪಡೆಗಳ ಲ್ಲದೆ, ಗೃಹ ರಕ್ಷಕ ದಳದ ನೆರವು ಪಡೆಯ ಲಾಗುವುದು ಎಂದರು. ಸಂವಾದದಲ್ಲಿ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವೈದ್ಯಕೀಯ ಶಿಕ್ಷಣ ಇಲಾಖೆ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್, ಲತಾಕುಮಾರಿ, ಶ್ರೀನಿವಾಸ್, ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಗಿರೀಶ್ ಉಪಸ್ಥಿತರಿದ್ದರು.
ಶೇ. 50 ಹಾಸಿಗೆಗಳು ಮೀಸಲು: ವೆಂಟಿಲೇಟರ್, ಹೈ ಪ್ಲೊ ಆಕ್ಸಿಜನ್ ಮತ್ತು ಇತರೆ ಅಗತ್ಯ ಸೌಲಭ್ಯ ಗಳಿರುವ ಕಡೆ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು. ನಗರದಲ್ಲಿ ಕಳೆದ ಒಂದು ವಾರದಿಂದ ಈಚೆಗೆ ಸೋಂಕಿತರ ಪೈಕಿ ಶೇ. 30- 50 ರೋಗದ ಲಕ್ಷಣ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸೋಂಕಿತರ ಲಕ್ಷಣ ಆಧರಿಸಿ ಲಘು ಮಧ್ಯಮ ಮತ್ತು ತೀವ್ರ ಸ್ವರೂಪ ಎಂದು ವಿಂಗಡಿಸಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಖಾಸಗಿ ಆಸ್ಪತ್ರೆ; ಕ್ರಮ: ರಾಜ್ಯದಲ್ಲಿ ಕೋವಿಡ್ 19 ಸೋಂಕು ಹೆಚ್ಚಾಗುತ್ತಿದ್ದು ಕೆಲವು ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುತ್ತಿರುವುದರಿಂದ ಎನ್ ಡಿಆರ್‌ಎಫ್ ನಿಯಮ ಪ್ರಕಾರ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಿಳಿಸಿದ್ದಾರೆ. ಈ.ಕುರಿತು ಆದೇಶ ಹೊರಡಿಸಿರುವ ಅವರು, ಕರ್ನಾಟಕ ಖಾಸಗಿ ಆಸ್ಪತ್ರೆಗಳ ತೆರೆಯುವ ಕಾಯ್ದೆ 2017 ರಂತೆ ಖಾಸಗಿ ಆಸ್ಪತ್ರೆಗಳು ಇಂಥ ಸಂದರ್ಭದಲ್ಲಿ ಸರ್ಕಾರದ ಸೂಚನೆಯಂತೆ ಕಾರ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.