ವಲಸೆ ಕಾರ್ಮಿಕರು ತವರಿಗೆ ತೆರಳಲು ವ್ಯವಸ್ಥೆ: ಮೇಯರ್
Team Udayavani, May 23, 2020, 4:46 AM IST
ಬೆಂಗಳೂರು: ವಲಸೆ ಕಾರ್ಮಿಕರು ಅವರ ಊರುಗಳಿಗೆ ತಲುಪುವ ನಿಟ್ಟಿನಲ್ಲಿ ಪಾಲಿಕೆ ಸಹಕಾರ ನೀಡುತ್ತಿದೆ ಎಂದು ಮೇಯರ್ ಎಂ. ಗೌತಮ್ ಕುಮಾರ್ ತಿಳಿಸಿದರು. ಬಿಬಿಎಂಪಿಯಿಂದ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿರುವ ಅರಮನೆ ಮೈದಾನಕ್ಕೆ ಮೇಯರ್ ಎಂ. ಗೌತಮ್‌ಕುಮಾರ್ ಅವರು ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶದಾದ್ಯಂತ ವಲಸೆ ಕಾರ್ಮಿಕರು ಅವರ ಊರುಗಳಿಗೆ ಹೋಗುವುದಕ್ಕೆ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ಚರ್ಚೆಯಾಗುತ್ತಿದೆ. ಬೆಂಗಳೂರಿನಲ್ಲಿರುವ ವಲಸೆ ಕಾರ್ಮಿಕರು ಅವರ ಊರುಗಳಿಗೆ ಹೋಗುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆಯಾಗದಂತೆ ಪಾಲಿಕೆ ವ್ಯವಸ್ಥೆ ಮಾಡಿದೆ ಎಂದರು. ಬಿಬಿಎಂಪಿಯಿಂದ ವಲಸೆ ಕಾರ್ಮಿಕರಿಗೆ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ, ಅರಮನೆ ಮೈದಾನದ ಟೆನ್ನಿಸ್ ಪೆವಿಲಿಯನ್, ಯಲಹಂಕದ ಮ್ಯಾನೊ³ ಕನ್ವೆನನ್ ಸೆಂಟರ್ ಹಾಗೂ ಮಹದೇವಪುರ ವಲಯದ ವೈಟ್ಫೀಲ್ಡ್ ವ್ಯಾಪ್ತಿಯಲ್ಲಿನ ಕೆಟಿಪಿಎಲ್‌ನಲ್ಲೂ ವಲಸೆ ಕಾರ್ಮಿಕರಿಗೆ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿದೆ ಎಂದರು.
ಒಡಿಶಾ, ,ಬಿಹಾರ, ಉತ್ತರ ಪ್ರದೇಶ, ತ್ರಿಪುರ ಸೇರಿದಂತೆ ವಿವಿಧ ರಾಜ್ಯಗಳ ವಲಸೆ ಕಾರ್ಮಿಕರು ಇಲ್ಲಿದ್ದು, ಇವರನ್ನು ಅವರ ಊರುಗಳಿಗೆ ರೈಲುಗಳ ಮೂಲಕ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗುತ್ತಿದೆ. ಕಾಲ್ನಡಿಗೆಯಲ್ಲಿ ಊರುಗಳಿಗೆ ತೆರಳುತ್ತಿದ್ದ ವಲಸೆ ಕಾರ್ಮಿಕರನ್ನು ಮನವೊಲಿಸಿ ಈ ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಇನ್ನು ಯಲಹಂಕದ ಮ್ಯಾನೊ ಕನ್ವೆಷನ್ ಸೆಂಟರ್ 350 ಜನ, ಅರಮನೆ ಮೈದಾನದ ಟೆನ್ನಿಸ್ ಪೆವಿಲಿಯನ್‌ನಲ್ಲಿ 400ಜನ ವಲಸೆ ಕಾರ್ಮಿಕರಿದ್ದು, ಇವರನ್ನು ಅವರ ಊರುಗಳಿಗೆ ಸಾಧ್ಯವಾದಷ್ಟು ಬೇಗ ಕಳುಹಿಸಿಕೊಡಲಾಗುವುದು ಎಂದು ಹೇಳಿದರು.
ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಒಟ್ಟು ಐದು ಸಾವಿರ ಜನ ವಲಸೆ ಕಾರ್ಮಿಕರಿಗೆ ಆಶ್ರಯ ವ್ಯವಸ್ಥೆ ಮಾಡಲಾಗಿತ್ತು. ಇದರಲ್ಲಿ 4,500 ಜನ ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡಲಾಗಿದೆ ಎಂದು ದಾಸರಹಳ್ಳಿ ವಲಯದ ಜಂಟಿ ಆಯುಕ್ತ ಕೆ. ನರಸಿಂಹ ಮೂರ್ತಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Kannada Rajyotsava: ಪಾಲಿಕೆ ಆಡಳಿತದಲ್ಲಿ ಸಂಪೂರ್ಣ ಕನ್ನಡ: ತುಷಾರ್
Bengaluru: ಅಕ್ರಮವಾಗಿ ಪಟಾಕಿ ಮಾರಾಟ; 2 ದಿನಗಳಲ್ಲಿ 56 ಕೇಸು ದಾಖಲು
Deepavali: ಐಟಿ ಸಿಟಿಯಲ್ಲಿ ಬೆಳಕಿನ ಹಬ್ಬದ ರಂಗು
Bengaluru: ಬ್ಯಾಗ್ ಪರಿಶೀಲನೆ ವೇಳೆ ವಿಮಾನ ನಿಲ್ದಾಣ ಸಿಬ್ಬಂದಿಗೆ ಬೆದರಿಕೆ: ಕೇಸ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.