ಕೋವಿಡ್ 19 ಸೋಂಕಿಗೆ ಎಎಸ್‌ಐ ಬಲಿ
Team Udayavani, Jun 17, 2020, 6:14 AM IST
ಬೆಂಗಳೂರು: ನಗರದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ 19 ಮಹಾಮಾರಿಗೆ ಪೊಲೀಸ್ ಅಧಿಕಾರಿಯೊಬ್ಬರು ಬಲಿಯಾಗಿದ್ದು, ಇದು ಇತರೆ ಅಧಿಕಾರಿ-ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ವಿಶ್ವೇಶ್ವರಪುರ (ವಿವಿಪುರ) ಸಂಚಾರ ಠಾಣೆ ಎಎಸ್‌ಐ (60) ಭಾನುವಾರ ಮೃತಪಟ್ಟಿದ್ದರು. ಬಳಿಕ ಅವರ ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೋವಿಡ್ 19 ಇರುವುದು ಸೋಮವಾರ ದೃಢಪಟ್ಟಿದೆ.
ಸುಂಕದಕಟ್ಟೆ ನಿವಾಸಿಯಾದ ಎಎಸ್‌ಐ ಈ ತಿಂಗಳು ನಿವೃತ್ತರಾಗಬೇಕಿತ್ತು. ಎಎಸ್‌ಐ ಹೃದಯರೋಗ, ರಕ್ತದೊತ್ತಡ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕೆಲ ದಿನಗಳಿಂದ ರಜೆ ಮೇಲೆ ಕಳುಹಿಸಲಾಗಿತ್ತು. ಆದರೆ, ಭಾನುವಾರ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನ್ವಯ ಮೃತರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿದ್ದು ಬಳಿಕ ಸೋಂಕು ತಗುಲಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಮತ್ತೂಬ್ಬ ಎಎಸ್‌ಐಗೂ ಸೋಂಕು: ಇದೇ ವೇಳೆ ಅದೇ ಪೊಲೀಸ್ ಠಾಣೆಯ ಮತ್ತೂಬ್ಬ ಎಎಸ್‌ಐಗೂ ಸೋಂಕು ದೃಢಪಟ್ಟಿದೆ. ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಸುಮಾರು 50ಕ್ಕೂ ಅಧಿಕ ಮಂದಿ ಪೊಲೀಸ್ ಅಧಿಕಾರಿ-ಸಿಬ್ಬಂದಿಯನ್ನು ಖಾಸಗಿ ಹೋಟೆಲ್ ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
ಪೊಲೀಸ್ ಠಾಣೆ ಸೀಲ್‌ಡೌನ್: ಮತ್ತೂಬ್ಬ ಎಎಸ್‌ಐಗೂ ಕೋವಿಡ್ 19 ದೃಢಪಟ್ಟ ಹಿನ್ನೆಲೆಯಲ್ಲಿ ಇಡೀ ಪೊಲೀಸ್ ಠಾಣೆಯನ್ನು ಸೀಲ್‌ಡೌನ್ ಮಾಡಲಾಗಿದೆ. ಪೊಲೀಸ್ ಠಾಣೆಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲು ಸೂಚಿಸಲಾಗಿದ್ದು, ಯಾವುದೇ ಕಡತ ಮುಟ್ಟದ್ದಂತೆ ಸಿಬ್ಬಂದಿಗೆ ಸೂಚಿಸಲಾಗಿ ದೆ. ಹೀಗಾಗಿ ತಾತ್ಕಾಲಿಕವಾಗಿ ಠಾಣೆಯ ಕಾರ್ಯಾಚರಣೆಯನ್ನು ಹೊರಭಾಗದಲ್ಲಿ ಎಲ್ಲ ಆರೋಗ್ಯ ಸುರಕ್ಷತಾ ಕ್ರಮಗಳ ಜತೆ ನಿರ್ವಹಿಸಲಾಗುತ್ತಿ ದೆ. ಅಗತ್ಯಬಿದ್ದಲ್ಲಿ ಜಯನಗರ ಅಥವಾ ಬಸವನಗುಡಿ ಸಂಚಾರ ಠಾಣೆಗೆ ಕಾರ್ಯವನ್ನು ವರ್ಗಾವಣೆ ಮಾಡಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
14 ಮಂದಿ, 12 ಠಾಣೆ ಸೀಲ್ ಡೌನ್: ಕಳೆದ ಒಂದೂವರೆ ತಿಂಗಳಲ್ಲಿ ಸಂಚಾರ ಠಾಣೆ ಸೇರಿ 12 ಪೊಲೀಸ್ ಠಾಣೆ ಸೀಲ್‌ಡೌನ್ ಮಾಡಲಾಗಿತ್ತು. ಜೀವನ್ ಭೀಮಾನಗರ, ಜೆ.ಜೆ.ನಗರ, ವಿವಿಪುರ, ಹೆಣ್ಣೂರು, ಜಯನಗರ, ಚಾಮರಾಜಪೇಟೆ, ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಸೋಲದೇವನಹಳ್ಳಿ, ಸಿ.ಟಿ.ಮಾರುಕಟ್ಟೆ, ಬೈಯಪ್ಪನಹಳ್ಳಿ, ಪುಲಕೇಶಿ ನಗರ ಸಂಚಾರ ಹಾಗೂ ಬೆಂಗಳೂರು ಗ್ರಾಮಾಂತರ ಹೆಬ್ಬಗೋಡಿ ಠಾಣೆಗಳನ್ನು ಸುಮಾರು 48 ಗಂಟೆಗಳ ಕಾಲ ಸೀಲ್‌ಡೌನ್ ಮಾಡಲಾಗಿತ್ತು.
(ಈ ಪೈಕಿ ಜೆ.ಜೆ.ನಗರ, ಹೆಬ್ಬಗೋಡಿ, ಜೆ.ಬಿ.ನಗರ, ಬೈಯಪ್ಪನ ಹಳ್ಳಿ, ಸಿಸಿಬಿ ಸೇರಿ ಕೆಲ ಠಾಣೆಗಳ ಸೀಲ್‌ಡೌನ್ ತೆರವುಗೊಳಿಸಲಾಗಿದೆ) ಈ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 14 ಮಂದಿಗೆ ಕೋವಿಡ್ 19 ದೃಢಪಟ್ಟಿದೆ. ಮೂವರು ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಚಿಕಿತ್ಸೆ ಮುಂದುವರಿಸಲಾಗಿದೆ.
ಪೊಲೀಸರಿಗೆ ಅಗತ್ಯ ಸೂಚನೆ: ಪೊಲೀಸರು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಸರ್, ಕೈಗವಸು ಬಳಸಬೇಕು. ಡಿಸಿಪಿಗಳು ಪೊಲೀಸ್ ವಸತಿ ಗೃಹಗಳಿಗೆ ಭೇಟಿ ನೀಡಿ ಸಿಬ್ಬಂದಿ ಹಾಗೂ ಕುಟುಂಬ ಸದಸ್ಯರಿಗೆ ಧೈರ್ಯ ನೀಡಬೇಕು ಎಂದು ಸೂಚಿಸಲಾಗಿದೆ. ಪೊಲೀಸರು ಬಹಳ ಅಪಾಯದ ಸಂದರ್ಭದಲ್ಲಿ ಕೆಲಸ ಮಾಡುತ್ತಿದ್ದೇವೆ. ಆದರೂ ಧೃತಿಗೆಡದೆ ಧೈರ್ಯದಿಂದ ಆರೋಗ್ಯ ಸುರಕ್ಷತಾ ಕ್ರಮಗಳ ಜತೆ ಕರ್ತವ್ಯ ನಿರ್ವಹಿಸಬೇಕು ಎಂದು ಮನವಿ ಮಾಡಿದ್ದೇನೆ ಎಂದು ಭಾಸ್ಕರ್ ರಾವ್ ಹೇಳಿದರು.
420ಕ್ಕೂ ಅಧಿಕ ಮಂದಿ ಕ್ವಾರಂಟೈನ್: ಲಾಕ್‌ಡೌನ್ ಸಡಿಲಿಕೆ ಬಳಿಕ ಜನದಟ್ಟಣೆ ಹೆಚ್ಚಾಗಿದೆ. ಅಂತಾರಾಜ್ಯ ಸಂಚಾರ ಕೂಡ ಅಧಿಕವಾಗಿದೆ. ಕಳೆದ ಎರಡೂವರೆ ತಿಂಗಳಲ್ಲಿ ಯಾವುದೇ ಪ್ರಕರಣಗಳು ಪತ್ತೆಯಾಗಿರಲಿಲ್ಲ. ಆದರೆ, ಲಾಕ್‌ಡೌನ್ ಸಡಿಲಿಕೆ ಬಳಿಕ ಆರೋಪಿಗಳ ಬಂಧನ, ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಕೆಲಸ, ಬೀಟ್ ಹೆಚ್ಚಳ ಮಾಡುತ್ತಿರುವುದರಿಂದ ಸೋಂಕು ತಗುಲುತ್ತಿದೆ. ಇದುವರೆಗೂ 13 ಮಂದಿಗೆ ಸೋಂಕು ದೃಢಪಟ್ಟಿದೆ. ಮೂವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 420ಕ್ಕೂ ಅಧಿಕ ಮಂದಿ ಕ್ವಾರಂಟೈನ್‌ನಲ್ಲಿ ಇದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.