Crime: ಅತ್ಯಾಚಾರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ
Team Udayavani, Nov 23, 2023, 3:54 PM IST
ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿ 2ನೇ ತ್ವರಿತಗತಿ ವಿಶೇಷ ನ್ಯಾಯಾಲಯ ಆದೇಶಿಸಿದೆ.
ರಾಜಗೋಪಾಲನಗರ ನಿವಾಸಿ ಸಿದ್ದರಾಜು (24) ಶಿಕ್ಷೆಗೊಳಗಾದವ.
ರಾಜಗೋಪಾಲನಗರ ಠಾಣೆ ವ್ಯಾಪ್ತಿಯ ಬಡಾವಣೆಯೊಂದರಲ್ಲಿ 2019ರ ನ.28ರಂದು 17 ವರ್ಷದ ಯುವತಿ ನಾಪತ್ತೆಯಾಗಿದ್ದಳು. ಈ ಸಂಬಂಧ ಪ್ರಕರಣ ದಾಖಲಾಗಿತ್ತು.
ಆದರೆ, ಡಿ.11ರಂದು ಯುವತಿ ಮನೆಗೆ ಬಂದಿದ್ದು, ಬಳಿಕ ಪೋಷಕರ ಜತೆ ಪೊಲೀಸ್ ಠಾಣೆಗೆ ಬಂದು ತನ್ನ ಮೇಲಿನ ದೌರ್ಜನ್ಯದ ಕುರಿತು ದೂರು ನೀಡಿದ್ದಳು. ಈ ಸಂಬಂಧ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಬಳಿಕ ಅಂದಿನ ಠಾಣಾಧಿಕಾರಿ ದಿನೇಶ್ ಪಾಟೀಲ್, ಆರೋಪಿ ಸಿದ್ದರಾಜುನನ್ನು ಬಂಧಿಸಿ, ಕೃತ್ಯಕ್ಕೆ ಸಂಬಂಧಿಸಿದ ಸಾಕ್ಷ್ಯ ಸಂಗ್ರಹಿಸಿ, ಕೋರ್ಟ್ಗೆ ಆರೋಪಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ ಕೋರ್ಟ್ ಅಪರಾಧಿಗೆ 20 ವರ್ಷದ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ಇದೇ ವೇಳೆ ಸಂತ್ರಸ್ತೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ. ಪರಿಹಾರ ನೀಡುವಂತೆಯೂ ಆದೇಶಿಸಿದೆ. ಸರ್ಕಾರಿ ವಕೀಲರಾಗಿ ಎ.ವಿ.ಮಧು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.