Bangalore: ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಕೆಲ ದಿನಗಳಿಂದ ಮಂಕಾಗಿದ್ದ ಎಂಜಿನಿಯರ್ ವಿದ್ಯಾರ್ಥಿ | ಇದ್ದ ಒಬ್ಬ ಮಗನನ್ನು ಕಳೆದುಕೊಂಡು ಪೋಷಕರು ಕಂಗಾಲು
Team Udayavani, Jan 5, 2024, 8:09 AM IST
ಬೆಂಗಳೂರು: ಪ್ರಥಮ ವರ್ಷದ ಎಂಜಿನಿಯರ್ ವಿದ್ಯಾರ್ಥಿಯೊಬ್ಬ ಡಬಲ್ ಬ್ಯಾರಲ್ ಬಂದೂಕಿ ನಿಂದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಪೀಣ್ಯ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮುಕ್ಕೋಡ್ಲು ಗ್ರಾಮದ ಕೆ.ಡಿ.ತಿಮ್ಮಯ್ಯ ಎಂಬವರ ಪುತ್ರ ವಿಶು ಉತ್ತಪ್ಪ(19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಮೃತ ವಿಶು ಉತ್ತಪ್ಪ ತಂದೆ ಕೆ.ಡಿ.ತಿಮ್ಮಯ್ಯ ಕುಟುಂಬ ಸಮೇತ ಏಳು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದು, ನೈಸ್ ರಸ್ತೆಯ ಟೋಲ್ ನಲ್ಲಿ ಸಂಗ್ರಹವಾದ ಹಣವನ್ನು ಬ್ಯಾಂಕ್‌ಗೆ ಜಮೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಇವರಿಗೆ ವಿಶು ಉತ್ತಪ್ಪ ಒಬ್ಬನೇ ಮಗ. ಈತ ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಜಿನಿಯರ್ ವ್ಯಾಸಂಗ ಮಾಡುತ್ತಿದ್ದ. ತಿಮ್ಮಯ್ಯ ಪರವಾನಗಿ ಹೊಂದಿದ್ದ ಡಬಲ್ ಬ್ಯಾರಲ್ ಬಂದೂಕು ಹೊಂದಿದ್ದು, ಕೆಲಸ ಮಾಡುವ ಸ್ಥಳಕ್ಕೆ ಬಂದೂಕು ಅಗತ್ಯವಿಲ್ಲವಾದರಿಂದ ಮನೆಯಲ್ಲೇ ಇಟ್ಟು ಹೋಗುತ್ತಿದ್ದರು.
ಸಾವಿಗೂ ಮುನ್ನ ಸಾರಿ ಎಂದು ಅಮ್ಮನಿಗೆ ಕರೆ: ಕೆಲ ದಿನಗಳಿಂದ ವಿಶು ಉತ್ತಪ್ಪ ಅಷ್ಟಾಗಿ ಸಕ್ರಿಯವಾಗಿರಲಿಲ್ಲ. ಮನೆಯಲ್ಲೇ ಮಂಕಾಗಿದ್ದ. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಹೇಳಲಾಗಿದೆ. ಈ ಮಧ್ಯೆ ಬುಧವಾರ ಮಧ್ಯಾಹ್ನ ತಿಮ್ಮಯ್ಯ ದಂಪತಿ ಸಾಮಾಗ್ರಿ ತರಲು ಹೊರಗಡೆ ಹೋಗಿದ್ದಾರೆ. ಕೆಲ ಸಮಯದ ಬಳಿಕ ತಾಯಿಗೆ ಕರೆ ಮಾಡಿ ಕ್ಷಮಿಸಿ ಎಂದು ಕರೆ ಮಾಡಿದ್ದಾನೆ. ಆಗ ತಾಯಿ, ಯಾವ ವಿಚಾರಕ್ಕೆ ಕ್ಷಮೆ ಕೇಳುವೆ ಎಂದು ಸಮಾಧಾನಪಡಿಸಿದ್ದಾರೆ.
ಅಪ್ಪನಿಗೂ ಕರೆ: ಆ ನಂತರ ತಂದೆಗೆ ಕರೆ ಮಾಡಿ, “ನಾನು ಇನ್ಮುಂದೆ ಯಾವುದೇ ತಪ್ಪು ಮಾಡುವುದಿಲ್ಲ’ ಎಂದು ಹೇಳಿ, ಕರೆ ಸ್ಥಗಿತಗೊಳಿಸಿದ್ದಾನೆ. ಆ ಬಳಿಕ ಡಬಲ್ ಬ್ಯಾರಲ್ ಬಂದೂಕಿನಿಂದ ಎಡಭಾಗದ ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಗನ ಮಾತಿನಿಂದ ಅನುಮಾನಗೊಂಡ ಪೋಷಕರು ಕೂಡಲೇ ಮನೆಗೆ ವಾಪಸ್ ಬಂದಿದ್ದಾರೆ. ಅಷ್ಟರಲ್ಲಿ ಪುತ್ರ ವಿಶು ಉತ್ತಪ್ಪ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಕೂಡಲೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ ಎಂದು ಪೋಷಕರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಇನ್ನು ಕಳೆದ ನಾಲ್ಕೈದು ದಿನಗಳಿಂದ ಪುತ್ರ ವಿಶು ಮೌನವಾಗಿದ್ದ ಎಂದು ತಂದೆ ತಿಮ್ಮಯ್ಯ ತಿಳಿಸಿದ್ದಾರೆ. ಕಾಲೇಜಿನ ಬಗ್ಗೆಯೂ ತಂದೆಗೆ ಯಾವುದೇ ಅನುಮಾನ ಇಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಎಂದು ಹೇಳಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು. ಈ ಸಂಬಂಧ ಪೀಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಫೆ.21ರಂದು ತೆರೆಗೆ ಬರಲಿದೆ ʼವಿಷ್ಣು ಪ್ರಿಯಾʼ
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
Cosmetic surgery:ಸೌಂದರ್ಯವರ್ಧಕ ಶಸ್ತ್ರಚಿಕಿತ್ಸೆ ಮತ್ತು ಭಾರತೀಯ ಜನಸಮುದಾಯದ ಮೇಲೆ ಪರಿಣಾಮ
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.