Bangalore Crime: ಒಂಟಿ ಆಗಿದ್ದ ವೇಳೆ ಕುತ್ತಿಗೆ ಬಿಗಿದು ಗೃಹಿಣಿ ಕೊಲೆ

ಪರಿಚಯಸ್ಥರೇ ಕೃತ್ಯ ಎಸಗಿರುವ ಅನುಮಾನ | ಎಲೆಕ್ಟ್ರಾನಿಕ್‌ ಸಿಟಿ ಠಾಣೆಯಲ್ಲಿ ಕೇಸು ದಾಖಲು

Team Udayavani, Jan 5, 2024, 8:34 AM IST

3-bng-crime

ಬೆಂಗಳೂರು: ಒಂಟಿಯಾಗಿದ್ದ ಮಹಿಳೆಯ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆಕೆಯ ಕುತ್ತಿಗೆ ಹಿಸುಕಿ ಕೊಲೆಗೈದು ಪರಾರಿಯಾಗಿರುವ ಘಟನೆ ಎಲೆಕ್ಟ್ರಾನಿಕ್‌ ಸಿಟಿ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಪ್ರಭಾಕರ್‌ರೆಡ್ಡಿ ಲೇಔಟ್‌ ನಿವಾಸಿ ನೀಲಂ(30) ಕೊಲೆಯಾದ ಮಹಿಳೆ.

ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಈ ಸಂಬಂಧ ನೀಲಂ ಪತಿ ಪ್ರದ್ಯುನ್ಮ ಎಂಬವರು ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಉತ್ತರ ಪ್ರದೇಶ ಮೂಲದ ಪ್ರದ್ಯುನ್ಮ 11 ವರ್ಷಗಳ ಹಿಂದೆ ಬೆಂಗ ಳೂರಿಗೆ ಬಂದಿದ್ದು, ಬೆಟ್ಟದಾ ಸನಪುರ ಸಮೀಪದ ಪ್ರಭಾಕರ್‌ರೆಡ್ಡಿ ಲೇಔಟ್‌ ನಲ್ಲಿ ಪತ್ನಿ ನೀಲಂ ಹಾಗೂ ಇಬ್ಬರು ಗಂಡು ಮಕ್ಕಳ ಜತೆ ವಾಸವಾಗಿದ್ದಾರೆ. ಮನೆ ಸಮೀಪದಲ್ಲೇ ಹಾರ್ಡ್‌ವೇರ್‌ ಮಳಿಗೆ ಹೊಂದಿದ್ದು, ಅದನ್ನು ನೀಲಂ ಸಹೋದರ ನೋಡಿಕೊಳ್ಳುತ್ತಿದ್ದಾರೆ. ಜತೆಗೆ ಪ್ರದ್ಯುನ್ಮ ಪೇಟಿಂಗ್‌ ಗುತ್ತಿಗೆದಾರರು ಆಗಿದ್ದಾರೆ. ಗುರುವಾರ ಬೆಳಗ್ಗೆ ಎಂದಿನಂತೆ ಪ್ರದ್ಯುನ್ಮ ಕೆಲಸಕ್ಕೆ ಹೋಗಿದ್ದು, ಮಕ್ಕಳು ಶಾಲೆಗೆ ಹೋಗಿದ್ದಾರೆ. ಮನೆಯಲ್ಲಿ ನೀಲಂ ಒಬ್ಬರೇ ಇದ್ದರು. ಅಪರಾಹ್ನ 12 ಗಂಟೆಗೆ ಮನೆಗೆ ನುಗ್ಗಿರುವ ದುಷ್ಕರ್ಮಿಗಳು, ಮನೆಯ ಪ್ರಾಂಗಣದಲ್ಲೇ ನೀಲಂ ಕುತ್ತಿಗೆ ಬಿಗಿದು ಪರಾರಿಯಾಗಿದ್ದಾರೆ. ಮಕ್ಕಳು ಸಂಜೆ ಶಾಲೆಗೆ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ತಂದೆಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ.

ಈ ವೇಳೆ ಮನೆಯಲ್ಲಿ ಚಿನ್ನಾಭರಣ, ನಗದು ಅಥವಾ ಬೇರೆ ಯಾವುದೇ ವಸ್ತುಗಳು ಕಳ್ಳತನವಾಗಿಲ್ಲ. ಹೀಗಾಗಿ ಪರಿಚಯಸ್ಥರೇ ಬಂದು ಕೊಲೆಗೈದಿರುವ ಸಾಧ್ಯತೆಯಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ಮನೆಗೆ ಮುಂಬಾಗಿಲು ಅಲ್ಲದೆ, ಕಬ್ಬಿಣದಿಂದ ಮಾಡಿರುವ ಡೋರ್‌ ಕೂಡ ಇದೆ. ಪತಿ ಮತ್ತು ಮಕ್ಕಳು ಹೊರಗಡೆ ತೆರಳಿದಾಗ, ಅದನ್ನು ನೀಲಂ ನಿತ್ಯ ಲಾಕ್‌ ಮಾಡಿಕೊಳ್ಳುತ್ತಿದ್ದರು. ಆದರೆ, ಈ ಡೋರ್‌ ತೆರೆದವರು ಯಾರು? ನೀಲಂ ಅವರೇ ತೆರೆದಿದ್ದರಾ? ಆಕೆಯ ಪತಿ ಅಥವಾ ಸಹೋದರಾ ತೆರೆದಿದ್ದರಾ? ಎಂಬುದು ಸೇರಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ನೀಡಿದ್ದಾರೆ. ಎಲೆಕ್ಟ್ರಾನಿಕ್‌ ಸಿಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.