ಬೆಂಗಳೂರು ನಗರ: ಪ್ರಾಥಮಿಕ ಆರೋಗ್ಯ ಸೇವೆ ಸುಧಾರಿಸಲು ಸಚಿವ ಸುಧಾಕರ್ ಮಹತ್ವದ ಹೆಜ್ಜೆ
ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ ಆರೋಗ್ಯ ಕೇಂದ್ರಗಳು ಮತ್ತೆ ಆರೋಗ್ಯ ಇಲಾಖೆಯ ಸುಪರ್ದಿಗೆ
Team Udayavani, May 6, 2022, 6:55 PM IST
ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸುಪರ್ದಿಗೆ ನೀಡಲಾಗಿದೆ. ಆಡಳಿತಾತ್ಮಕ ಮತ್ತು ಆರ್ಥಿಕ ನಿಯಂತ್ರವಣವನ್ನು ಹೊಂದಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು, ಸಮುದಾಯ ಕೇಂದ್ರಗಳನ್ನು ಈಗ ಸರ್ಕಾರವೇ ನೇರವಾಗಿ ನಡೆಸಲು ತೀರ್ಮಾನಿಸಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಒಟ್ಟು 51 ಸರ್ಕಾರಿ ಆಸ್ಪತ್ರೆಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿದೆ. ನಗರ ಆರೋಗ್ಯ ಅಭಿಯಾನದಡಿ ಪಟ್ಟಿ ಮಾಡಿದ 35 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪಟ್ಟಿ ಮಾಡದ 14 ನಗರ ಪ್ರಾಥಮಿಕ ಕೇಂದ್ರಗಳು ಹಾಗೂ 2 ಸಮುದಾಯ ಆರೋಗ್ಯ ಕೇಂದ್ರಗಳು ಇನ್ನು ಮುಂದೆ ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರಲಿದೆ.
ಬಿಬಿಎಂಪಿ ನೇಮಿಸಿರುವ ಸಿಬಂಧಿಗಳು, ಪಿಠೋಪಕರಣಗಳು ಮತ್ತು ಸಲಕರಣೆಗಳು ಕೂಡ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೇರಿಕೊಳ್ಳಲಿದೆ. ಸರ್ಕಾರದ ಎಲ್ಲಾ ಸೌಲಭ್ಯಗಳು ರಾಜ್ಯದಾದ್ಯಂತ ಒಂದೇ ರೀತಿ ಸಿಗಬೇಕು ಅನ್ನುವ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳ ನಿರ್ವಹಣೆ ಒಂದೇ ರೀತಿ ನಡೆಯಬೇಕು. ಸರ್ಕಾರದ ಸೌಲಭ್ಯಗಳು ನಗರದ ಪ್ರದೇಶವಾಗಿರಲಿ, ಅಥವಾ ಹಳ್ಳಿಯೇ ಆಗಿರಲಿ, ಎಲ್ಲರಿಗೂ ಒಂದೇ ರೀತಿಯಲ್ಲಿ ಇರಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ ಸಮರ್ಪಕವಾಗಿ ಅನುಷ್ಠಾನ ಮಾಡಲು ಇದು ನೆರವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.