Namma Metroದಲ್ಲಿ ಲೈಂಗಿಕ ಕಿರುಕುಳ: ಸಂತ್ರಸ್ತೆ ಗೆಳತಿಯಿಂದ ಎಕ್ಸ್ ನಲ್ಲಿ ಪೋಸ್ಟ್
Team Udayavani, Nov 23, 2023, 3:09 PM IST
ಬೆಂಗಳೂರು: ಮೆಟ್ರೋ ರೈಲಿನಲ್ಲಿ ತನ್ನ ಸ್ನೇಹಿತೆಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಸಂತ್ರಸ್ತೆ ಸ್ನೇಹಿತೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡು, ರಕ್ಷಣೆ ಕೋರಿದ್ದಾರೆ.
ಕೆಲ ದಿನಗಳ ಹಿಂದೆ ತನ್ನ ಸ್ನೇಹಿತೆ ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ಬೆಳಗ್ಗೆ 8.30ರ ಸುಮಾರಿಗೆ ಮೆಟ್ರೋದಲ್ಲಿ ಪ್ರಯಾಣಿಸಲೆಂದು ನಿಲ್ದಾಣಕ್ಕೆ ಬಂದಿದ್ದಾಳೆ. ಈ ವೇಳೆ ಭಾರೀ ಜನದಟ್ಟಣೆ ಇತ್ತು.
ರೈಲು ಏರುವಾಗಲೂ ಹಿಂದಿನಿಂದ ತಳ್ಳಾಟ ಜೋರಾಗಿತ್ತು. ಆದರೂ ಆಕೆ ರೈಲಿನ ಒಳಗೆ ಪ್ರವೇಶಿಸಿದ್ದಾಳೆ. ಈ ವೇಳೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಆಕೆಯ ಹಿಂದಿನ ಭಾಗವನ್ನು ಸ್ಪರ್ಶಿಸಿ ಕಿರುಕುಳ ನೀಡಲು ಆರಂಭಿಸಿದ್ದಾನೆ. ಮೊದಲಿಗೆ ಆಕೆ ಇದು ಜನರ ಒತ್ತಡದ ನಡುವೆ ಏನೋ ತಪ್ಪಾಗಿ ನಡೆಯುತ್ತಿರಬಹುದು ಎಂದು ಭಾವಿಸಿದ್ದಾಳೆ.
ಆದರೆ, ಕೆಲವೇ ಸೆಕೆಂಡುಗಳಲ್ಲಿ ಆಕೆಗೆ ಆತನ ದುಷ್ಟ ವರ್ತನೆ ಅರ್ಥವಾಗಿದೆ. ಆಕೆ ಆತನಿಂದ ತಪ್ಪಿಸಿಕೊಂಡು ಸ್ವಲ್ಪ ಮುಂದೆ ಹೋಗಿ ಬೇರೆಯವರ ಸಹಾಯ ಕೋರಿದ್ದಾರೆ. ಆದರೆ, ಯಾರೂ ಸಹಾಯಕ್ಕೆ ಬಂದಿಲ್ಲ ಎಂದು ಆಕೆಯ ಗೆಳತಿ ಬರೆದುಕೊಂಡಿದ್ದಾರೆ. ಈ ಬಗ್ಗೆ ನಗರ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ಕೂಡಲೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ತಿಳಿಸಿದ್ದಾರೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.