ನಿಯಮಗಳ ಜಾರಿಯಲ್ಲಿ ಬಿಬಿಎಂಪಿ ವಿಫಲ


Team Udayavani, Jul 10, 2020, 6:04 AM IST

iyama-bbmp

ಬೆಂಗಳೂರು: ಕಂಟೈನ್ಮೆಂಟ್‌ ವಲಯಗಳಲ್ಲಿ ಕೋವಿಡ್‌-19 ಮಾರ್ಗಸೂಚಿಗಳನ್ನು (ಎಸ್‌ಓಪಿ) ಕಟ್ಟುನಿಟ್ಟಾಗಿ ಪಾಲಿಸುವಲ್ಲಿ ಹಾಗೂ ಅಲ್ಲಿನ ಜನರಿಗೆ ಆಹಾರ ಪದಾರ್ಥಗಳನ್ನು ಪೂರೈಸುವಲ್ಲಿ ವಿಫಲವಾಗಿರುವ ಬಿಬಿಎಂಪಿಯನ್ನು  ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್‌, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವೇ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ.

ಕೋವಿಡ್‌-19 ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ  ಮುಖ್ಯ ನ್ಯಾ. ಎ.ಎಸ್‌. ಓಕ್‌ ಹಾಗೂ ನ್ಯಾ. ಅರವಿಂದ ಕುಮಾರ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರಿಗೆ ನ್ಯಾಯಪೀಠ ಪ್ರಶ್ನೆ-ಉತ್ತರ ರೂಪದಲ್ಲಿ ವಿವರಣೆ ಕೇಳಿತು.  ಬಿಬಿಎಂಪಿ ವಕೀಲರಿಂದ ಸಮಾಧಾನಕರ ಉತ್ತರ ಬಾರದೇ ಇರುವುದರಿಂದ ಕಂಟೈನ್ಮೆಂಟ್‌ ವಲಯಗಳಲ್ಲಿ ಮಾರ್ಗಸೂಚಿಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಹಾಗೂ ಕಂಟೈನ್ಮೆಂಟ್‌ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವವ ಪೈಕಿ  ಅಗತ್ಯವಿರುವವರಿಗೆ ಆಹಾರ ಪದಾರ್ಥಗಳನ್ನು ಪೂರೈಸಲು ಬಿಬಿಎಂಪಿ ತನ್ನ ಹೊಣೆಗಾರಿಕೆ ನಿರ್ವಹಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ.

ಅದ್ದರಿಂದ, ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ತನ್ನದೇ ಆಡಳಿತ ಯಂತ್ರವನ್ನು  ಬಳಸಿಕೊಂಡು ಕಂಟೈನ್ಮೆಂಟ್‌ ವಲಯಗಳಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮತ್ತು ಅಲ್ಲಿನ ಜನರಿಗೆ ಆಹಾರ ಪದಾರ್ಥ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿತು. ಇದಕ್ಕೂ  ಮೊದಲು ಬಿಬಿಎಂಪಿ ಪರ ವಕೀಲರು, ಕೋವಿಡ್‌ ಮಾರ್ಗಸೂಚಿಗಳ ನ್ನು ಪಾಲಿಸುವುದು ಪಾಲಿಕೆಯ ಹೊಣೆಗಾರಿಕೆಯಾಗಿದೆ.

ಆದರೆ, ಕಂಟೈನ್ಮೆಂಟ್‌ ವಲಯಗಳ ಮಾನದಂಡಗಳು ಬದಲಾಗಿವೆ. ನಗರದಲ್ಲಿ ಸದ್ಯ 3 ಸಾವಿರಕ್ಕೂ ಹೆಚ್ಚು  ಕಂಟೈನ್ಮೆಂಟ್‌ ವಲಯಗಳಿವೆ. ವಾರ್ಡ್‌ ಮಟ್ಟದಲ್ಲಿ ಮಾರ್ಗಸೂಚಿಗಳು ನಿರ್ವಹಣೆ ಆಗುತ್ತಿರುವುದರಿಂದ ವಾರ್ಡ್‌ಗಳನ್ನು ಗುರುತಿಸಿ, ಅಲ್ಲಿನ ಕಂಟೈನ್ಮೆಂಟ್‌ ಪ್ರದೇಶಗಳಲ್ಲಿ ಅಗತ್ಯವಿರುವ ವರು ಯಾರು ಎಂದು ಗುರುತಿಸುವುದು ವಾಲಿನ  ಕೆಲಸ. ಆದರೆ, ಕಂಟೈನ್ಮೆಂಟ್‌ ವಲಯಗಳಲ್ಲಿನ ಪಡಿತರ ಅಂಗಡಿಗಳು ತೆರೆದಿರುತ್ತವೆ.

ಅದಲ್ಲದೇ ಕಂಟೈನ್ಮೆಂಟ್‌ ಪ್ರದೇಶಗಳ ಜನರಿಗೆ ದಿನ ಬಳಕೆಯ ವಸ್ತುಗಳ ಖರೀದಿಗೆ ಹೋಗಿ-ಬರಲು ಅವಕಾಶವಿದೆ. ಮಾರ್ಗಸೂಚಿಗಳು ನಿಜ  ಅರ್ಥದಲ್ಲಿ ಜನರು ಪಾಲಿಸುತ್ತಿಲ್ಲ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಇದಕ್ಕೆ ಕೋಪಗೊಂಡ ನ್ಯಾಯಪೀಠ, ತನ್ನದೇ ಮಾರ್ಗಸೂಚಿಗಳನ್ನು ಅನುಷ್ಠಾನಕ್ಕೆ ತರಲು ಬಿಎಂಪಿಯಿಂದ ಆಗುತ್ತಿಲ್ಲ. ವಾರ್ಡ್‌ಗಳನ್ನು ಗುರುತಿಸಬೇಕು ಎಂದು  ವಕೀಲರು ಹೇಳುತ್ತಿದ್ದಾರೆ. ಇದೇರೀತಿಯಾದರೆ ಮುಂದಿನ ಪರಿಸ್ಥಿತಿ ಹೇಗೆ ಎಂದು ಬಿಬಿಎಂಪಿಗೆ ತಾಕೀತು ಮಾಡಿದ ಪಾಲಿಕೆ, ಸರ್ಕಾರ ಮಾರ್ಗಸೂಚಿಗಳನ್ನು ವಾರ್ಡ್‌ಗಳಿಗೆ ಪಾಲಿಸುವಂತೆ ಸೂಚಿಸಿತು.

900 ಕುಟುಂಬಗಳಿಗೆ ಆಹಾರ ಪೂರೈಸಿ: ವಾರ್ಡ್‌ಗಳಿರುವುದು ಬಿಬಿಎಂಪಿ ವ್ಯಾಪ್ತಿಯಲ್ಲಿಯೆ ಹೊರತು ವಿದೇಶದಲ್ಲಿ ಅಲ್ಲ. ಅರ್ಜಿದಾರರು ಕೊಟ್ಟಿರುವ 900 ಕುಟುಂಬಗಳಿಗೆ  ಈವರೆಗೆ ಆಹಾರ ಪದಾರ್ಥಕೊಟ್ಟಿಲ್ಲ. ಪ್ರತಿಯೊಂದಕ್ಕೂ  ಬಿಬಿಎಂಪಿ ನೆಪ ಹೇಳುವುದು, ಹೊಣೆಗಾರಿಕೆಯಿಂದ ಜಾರಿ ಕೊಳ್ಳುವುದು ಮಾಡುತ್ತಿದೆ. ಕಂಟೈನ್ಮೆಂಟ್‌ ವಲಯಗಳ ಜನರ ಹೊರಗಡೆ ಹೋಗಿ ಬರಲು ಅವಕಾಶವಿದೆ ಎಂದಾದರೆ, ಈಗಾಗಲೇ ಪಾಸಿಟಿವ್‌ ಪ್ರಕರಣಗಳು ನಗರದಲ್ಲಿ  ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ‌ಅನಾಹುತಕಾರಿ ಸ್ಥಿತಿ ನಿರ್ಮಾಣವಾಗಬಹುದು. ಆದ್ದರಿಂದ ಸರ್ಕಾರ ತಕ್ಷಣ ಕಾರ್ಯೋನ್ಮುಖವಾಗಬೇಕು. ಅರ್ಜಿದಾರರು ಕೊಟ್ಟಿರುವ 900 ಕುಟುಂಬಗಳನ್ನು ಗುರುತಿಸಿ ಅವರಿಗೆ ಆಹಾರ  ಪದಾರ್ಥಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿತು.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.