ಸೀಲ್‌ಡೌನ್ ಪ್ರದೇಶಕ್ಕೂ ಅಗತ್ಯ ವಸ್ತು ಪೂರೈಕೆ ಪಾಲಿಕೆ ಜವಾಬ್ದಾರಿ
Team Udayavani, Jun 26, 2020, 6:00 AM IST
ಬೆಂಗಳೂರು: “ಕಂಟೈನ್ಮೆಂಟ್ ವಲಯದ ಸೀಲ್‌ಡೌನ್ ಪ್ರದೇಶಗಳಲ್ಲಿ ಜನರಿಗೆ ಆಹಾರ ಪದಾರ್ಥ ಸೇರಿದಂತೆ ಅಗತ್ಯ ವಸ್ತುಗಳನ್ನು ಪೂರೈಸು ವುದು ಬಿಬಿಎಂಪಿಯ ಜವಾಬ್ದಾರಿ. ಇದರ ನಿರ್ವಹಣೆಯಲ್ಲಿ ವಿಫಲವಾದರೆ, ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗಲಿದೆ’ ಎಂದು ಹೈಕೋರ್ಟ್ ಎಚ್ಚರಿಸಿದೆ. ಅಗತ್ಯವಸ್ತುಗಳ ಪೂರೈಕೆ ಮಾಡದಿ ದ್ದರೆ, ಸಂವಿಧಾನದ ಕಲಂ 21ರ ಅನ್ವಯ ಮೂಲಭೂತ ಹಕ್ಕಗಳು ಉಲ್ಲಂಘನೆಯಾಗಲಿದೆ.
ಅದರಂತೆ ಬಾಧಿತರು ಬಿಬಿಎಂಪಿಯಿಂದ ಪರಿಹಾರ ಕೇಳುವ ಹಕ್ಕು ಪಡೆದಿರುತ್ತಾರೆ. ತೊಂದರೆಯಾದರೆ ದೂರು ನೀಡುವ ವ್ಯವಸ್ಥೆಯನ್ನೂ ಪಾಲಿಕೆಯೇ ಮಾಡಬೇಕು ಎಂದು ಸೂಚಿಸಿದೆ. ಈ ಕುರಿತು ಸಲ್ಲಿಸಲಾಗಿರುವ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ.ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಸೀಲ್ ಡೌನ್ ಪ್ರದೇಶಗಳಲ್ಲಿ ಅವಶ್ಯಕತೆ ಇರುವ ಜನರಿಗೆ ಅಗತ್ಯವಸ್ತುಗಳು ಪೂರೈಸುವುದು ಪಾಲಿಕೆ ಜವಾಬ್ದಾರಿ ಎಂದು ಸರ್ಕಾರ ಹೇಳಿದೆ.
ಈ ಬಗ್ಗೆ 2020ರ ಏಪ್ರಿಲ್ 19ರಂದು ಸ್ವತಃ ಬಿಬಿಎಂಪಿ ಆದೇಶ ಹೊರಡಿಸಿದೆ. ಈಗ ನಗರದಲ್ಲಿ ಸೀಲ್‌ಡೌನ್ ಆಗಿರುವ ಪ್ರದೇಶಗಳಲ್ಲಿ ಬಹುತೇಕ ಏರಿಯಾಗಳಲ್ಲಿ ಬಡವರು ವಾಸ ಮಾಡುತ್ತಿದ್ದಾರೆ. ಹಾಗಾಗಿ, ಈ ನಿಟ್ಟಿನಲ್ಲಿ ಬಿಬಿಎಂಪಿಗೆ ಸೂಕ್ತ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದರು. ಅದಕ್ಕೆ ಬಿಬಿಎಂಪಿ ಪರ ವಕೀಲರು, ನಗರದಲ್ಲಿ 400ಕ್ಕೂ ಹೆಚ್ಚು ಕಂಟೈನ್ಮೆಂಟ್ ವಲಯಗಳಿವೆ ಇಷ್ಟೊಂದು ದೊಡ್ಡ ಸಂಖ್ಯೆ ಪ್ರದೇಶಗಳಗೆ ರೇಷನ್ ಕಿಟ್ ವಿತರಣೆ ತುಂಬಾ ಕಷ್ಟದ ಕೆಲಸ. ಇದು ಬಿಬಿಎಂಪಿಯಿಂದ ಸಾಧ್ಯವಿಲ್ಲ.
ಸರ್ಕಾರ ಆಹಾರ ಧಾನ್ಯ ನೀಡಿದರೆ, ವಿತರಿಸಲು ಪಾಲಿಕೆ ಸಹಾಯ ಮಾಡಬಹುದು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತಾನೇ ಹೊರಡಿಸಿದ ಆದೇಶದ ಬಗ್ಗೆ ಪಾಲಿಕೆಗೆ ಸ್ಪಷ್ಟತೆ ಇಲ್ಲ. ಸೂಕ್ತ ನಿರ್ದೇಶನಗಳನ್ನು ನೀಡಬೇಕು’ ಎಂದು ಸೂಚಿಸಿ ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.