School Building Collapse: ತರಗತಿಗೂ ಮೊದಲೇ ಕುಸಿದ ಶಾಲಾ ಕಟ್ಟಡ

ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾದ 80 ವಿದ್ಯಾರ್ಥಿಗಳು

Team Udayavani, Nov 28, 2023, 8:16 AM IST

2-bng

ಬೆಂಗಳೂರು: ಶಿವಾಜಿನಗರದಲ್ಲಿ ಸೋಮವಾರ ಬೆಳಗ್ಗಿನ ಜಾವ ಬಿಬಿಎಂಪಿ ನರ್ಸರಿ ಶಾಲೆ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ಯಾವುದೇ ಅಪಾಯ ಸಂಭವಿಸಿಲ್ಲ. ಕುಕ್ಸ್‌ ರೋಡ್‌ನ‌ ಬಿ ಕ್ರಾಸ್‌ನಲ್ಲಿ ಈ ಘಟನೆ ನಡೆದಿದ್ದು, ಮಕ್ಕಳು ತರಗತಿಯಲ್ಲಿ ಇಲ್ಲದ ವೇಳೆ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಭಾರೀ ಅನಾಹುತ ತಪ್ಪಿದ್ದಂತಾಗಿದೆ. 80 ವರ್ಷ ಹಳೆಯ ಈ ನರ್ಸರಿ ಶಾಲೆಯಲ್ಲಿ 80ಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಶಾಲಾ ಕಟ್ಟಡ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಅಕ್ಕಪಕ್ಕದಲ್ಲಿ ನಿಲ್ಲಿಸಿದ ವಾಹನಗಳಿಗೆ ಹಾನಿಯಾಗಿದೆ. ಜತೆಗೆ ಕಾರುಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ. ಕೆಲವು ವಾಹನಗಳಿಗೆ ಭಾರೀ ಹಾನಿಯಾಗಿದೆ. ಅಕ್ಕಪಕ್ಕದ ಮನೆಗಳಿಗೂ ತೊಂದರೆ ಆಗಿದೆ. ಅನಿರೀಕ್ಷಿತ ಈ ಘಟನೆಯಿಂದ ಸ್ಥಳೀಯರು ಆತಂಕಗೊಂಡಿದ್ದರು. ಘಟನೆ ಅರಿತು ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಕ್ಕಳ ಆಟಿಕೆ ಸೇರಿ ಇನ್ನಿತರ ಶಾಲಾ ಪರಿಕರಗಳು ಅವಶೇಷದಡಿ ಸಿಲುಕಿದ್ದು ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಸಲಾಯಿತು. ಜಾಗ ಇದೆ ಎಂದು ಇಲ್ಲಿ ಆಟೋ ನಿಲ್ಲಿಸುತ್ತಿದ್ದೆ. ರಾತ್ರಿ 2 ಗಂಟೆಗೆ ಏಕಾಏಕಿ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಸಂಪೂರ್ಣ ಹಾನಿಗೊಳಗಾಗಿದೆ. ನಮ್ಮ ಕುಟುಂಬಕ್ಕೆ ಆಟೋನೇ ಆಧಾರವಾಗಿತ್ತು. ಈಗ ನಷ್ಟ ಯಾರು ಕಟ್ಟಿ ಕೊಡುತ್ತಾರೆ ಎಂದು ಚಾಲಕ ಅನೀಶ್‌ ಅಳಲು ತೋಡಿಕೊಂಡರು.

ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ:

ಘಟನೆ ಸಂಬಂಧ ನಿರ್ಲಕ್ಷ್ಯ ತೋರಿರುವ ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನರ್ಸರಿ ಶಾಲೆಯಲ್ಲಿ ಸುಮಾರು 70ರಿಂದ 80 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದರು. ಹಳೆಯ ಕಾಲದ ಈ ಕಟ್ಟಡ ಬೀಳುವ ಸ್ಥಿತಿಯಲ್ಲಿದ್ದರೂ ಸಹ ಇಲ್ಲೇ ಶಾಲೆ ನಡೆಸುತ್ತಿರುವುದು ಎಷ್ಟು ಸರಿ.

ಒಂದು ವೇಳೆ ಶಾಲಾ ಸಮಯದಲ್ಲಿ ಕುಟ್ಟಡ ಕುಸಿದು ಬಿದ್ದು ದೊಡ್ಡ ಅನಾಹುತ ಸಂಭವಿಸಿದ್ದರೆ ಅದಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ಶಾಲೆಯ ಬಗ್ಗೆ ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಪೋಷಕರು ಹಾಗೂ ಸ್ಥಳೀಯರು ಒತ್ತಾಯಿಸಿದ್ದಾರೆ.

ಶಾಲಾ ಕಟ್ಟಡ ಹಳೆಯದಾಗಿದೆ ಎಂದು ಹಲವು ಬಾರಿ ದೂರು ನೀಡಿದರೂ ಬಿಬಿಎಂಪಿ ಅಧಿಕಾರಿಗಳು ಮಾತ್ರ ಕ್ಯಾರೆ ಎಂದಿಲ್ಲ. ಬೆಳಗಿನ ಜಾವ ಕಟ್ಟಡ ಕುಸಿದಿದೆ. ಒಂದು ವೇಳೆ ಮಕ್ಕಳು ಇದ್ದಾಗ ಕಟ್ಟಡ ಕುಸಿದಿದ್ದರೆ ದುರಂತಕ್ಕೆ ಯಾರು ಹೊಣೆ ಎಂದು ಸ್ಥಳೀಯರು ಹಾಗೂ ಮಕ್ಕಳ ಪೋಷಕರು ಕಿಡಿಕಾಡಿದರು. ಬಿಬಿಎಂಪಿಗೆ ಸೇರಿದ ಇಂಗ್ಲಿಷ್‌ ಸ್ಕೂಲ್‌. ಈ ಸ್ಕೂಲ್‌ನಲ್ಲಿ ಒಟ್ಟು 90 ಮಕ್ಕಳು ಪ್ರವೇಶ ಪಡೆದುಕೊಂಡಿದ್ದರು. ಅದರೆ, 90 ಮಕ್ಕಳ ಪೈಕಿ 75 ಮಕ್ಕಳು ಮಾತ್ರ ಪ್ರತಿದಿನ ಶಾಲೆಗೆ ಬರುತ್ತಿದ್ದರು. ದೇವರ ದಯೆಯಿಂದ ಶಾಲಾ ಸಮಯದಲ್ಲಿ ಕಟ್ಟಡ ಬಿದ್ದಿಲ್ಲ ಎಂದು ಹೇಳಿದರು.

ಘಟನೆಗೆ ಪಾಲಿಕೆಯೇ ನೇರ ಹೊಣೆ

ಪಾಲಿಕೆಗೆ ಸೇರಿದ ನರ್ಸರಿ ಶಾಲಾ ಕಟ್ಟಡ ನೆಲಸಮವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಮಾಜಿ ಕಾರ್ಪೋರೇಟರ್‌ ಸಯ್ಯದ್‌ ಸುಜಾವುದ್ದೀನ್‌ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಈ ಶಾಲೆ ಕಟ್ಟಡಕ್ಕೆ 80 ವರ್ಷವಾಗಿದೆ. ಎರಡು ತಿಂಗಳ ಹಿಂದೆ ಶಾಸಕ ರಿಜ್ವಾನ್‌ ಅರ್ಷದ್‌ ಭೇಟಿ ನೀಡಿದ್ದರು. ಆಗ ಶಾಲೆ ಸ್ಥಳಾಂತರ ಮಾಡಲು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು. ಆದರೂ, ಶಿಕ್ಷಣ ಇಲಾಖೆ ವಿಭಾಗ ಕ್ರಮ ಕೈಗೊಂಡಿಲ್ಲ. ಈ ಘಟನೆಗೆ ಪಾಲಿಕೆಯೇ ನೇರ ಹೊಣೆ ಎಂದು ಆರೋಪಿಸಿದರು.

ತಪ್ಪಿತಸ್ಥರ ವಿರುದ್ಧ ಕ್ರಮ: ಮಧು ಬಂಗಾರಪ್ಪ

ಬೆಂಗಳೂರು: ಶಿವಾಜಿನಗರದ ನರ್ಸರಿ ಶಾಲೆ ಕಟ್ಟಡ ಕುಸಿತ ಪ್ರಕರಣ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಕಾರಣದಿಂದ ಘಟನೆ ನಡೆದಿದೆ ಎಂದು ನನಗೆ ಮಾಹಿತಿ ಇಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಯಾರಿಗಾದರೂ ಅನಾಹುತವಾದಾಗ ಪರಿಹಾರ ನೀಡುತ್ತೇವೆ, ಇದುವೇ ಪರಿಹಾರ ಅಲ್ಲ. ಇಂತಹ ಸಂದರ್ಭ ಮರುಕಳಿಸದಂತೆ ನೋಡಿಕೊಳ್ಳಬೇಕು. ಸಾರ್ವಜನಿಕರ ಯಾವುದೇ ಕಟ್ಟಡವಾಗಲಿ ಜವಾಬ್ದಾರಿ ತೆಗೆದುಕೊಳ್ಳಬೇಕು. ಕಟ್ಟಡಗಳು ಶಿಥಿಲಗೊಂಡಿದ್ದರೆ ಪರ್ಯಾಯ ವ್ಯವಸ್ಥೆ ಮಾಡಬೇಕು. ಮಕ್ಕಳ ಸುರಕ್ಷತೆ ಬಗ್ಗೆ ಮೊದಲು ನೋಡಬೇಕು ನಂತರ ಶಿಕ್ಷಣ ಎಂದರು.

ಶಾಲಾ ಕಾಲೇಜು ಕಟ್ಟಡಗಳ ನಿರ್ಮಾಣವನ್ನ ಸರ್ಕಾರದಿಂದ ನಿಲ್ಲಿಸಲಾಗಿತ್ತು. ಕಟ್ಟಡ ಕಾಮಗಾರಿಗಳನ್ನು ಹೊಸ ಸರ್ಕಾರ ಬಂದ ತಕ್ಷಣ ನಿಲ್ಲಿಸಲಾಗಿತ್ತು. ಆದರೆ, ಇವಾಗ ಹಣ ಬಿಡುಗಡೆ ಮಾಡಲಾಗಿದೆ. ಇವಾಗ ಯಾವುದೇ ಸಮಸ್ಯೆ ಇಲ್ಲ, 8500 ಕಟ್ಟಡಗಳ ಕಾಮಗಾರಿ ಕೆಲಸ ಆರಂಭವಾಗಿದೆ. ಇಂತಹ ಹೇಳಿಕೆಗಳು ವಿರೋಧ ಪಕ್ಷಗಳಿಂದ ಬರುವುದು ಸಹಜ ಎಂದರು.

ಶಿವಾಜಿನಗರದ ಕ್ಷೇತ್ರದಲ್ಲಿ ಹಳೇ ಶಾಲಾ ಕಟ್ಟಡಗಳನ್ನು ಗುರುತಿಸಿದ್ದೇವೆ. ಈಗ ಕುಸಿದಿರುವ ಶಾಲಾ ಕಟ್ಟಡ ಸೇರಿ 3 ಶಾಲೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಹೊಸ ಕಟ್ಟಡ ನಿರ್ಮಾ ಣಕ್ಕೆ ಟೆಂಡರ್‌ ಕೂಡ ಕರೆದಿದ್ದೇವೆ. ಆದಷ್ಟು ಬೇಗ ಹೊಸ ಕಟ್ಟಡ ನಿರ್ಮಾಣ ಕೆಲಸ ಮಾಡುತ್ತೇವೆ. ● ರಿಜ್ವಾನ್‌ ಅರ್ಷದ್‌, ಶಿವಾಜಿನಗರ ಶಾಸಕ.

ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪಾಲಿಕೆಯ ನರ್ಸರಿ ಶಾಲಾ ಕಟ್ಟಡ ಕುಸಿದು ಬಿದ್ದಿದೆ. ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆ ನಡೆದ ಸ್ಥಳಕ್ಕೆ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜತೆಗೆ ಜೆಸಿಬಿ ಯಂತ್ರದ ಮೂಲಕ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಶೀಘ್ರದಲ್ಲೇ ನರ್ಸರಿ ಶಾಲೆಯ ಸ್ಥಳಾಂತರ ಕಾರ್ಯ ನಡೆಯಲಿದೆ. ● ಪ್ರೀತಿ ಗೆಹೆಲೋತ್‌, ಬಿಬಿಎಂಪಿ ವಿಶೇಷ ಆಯುಕ್ತರು ಶಿಕ್ಷಣ ವಿಭಾಗ.

ಟಾಪ್ ನ್ಯೂಸ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

Belagavi;ಕಾಂಗ್ರೆಸ್‌ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್‌ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.