Bengaluru: ತಾಯಿಯನ್ನು ಹತ್ಯೆಗೈದು ಪೊಲೀಸರಿಗೆ ಶರಣಾದ 17 ರ ಪುತ್ರ!
ಸರಿಯಾದ ಊಟ ಇಲ್ಲ... ನೋಡಿಕೊಳ್ಳುತ್ತಿಲ್ಲ..ಎಂದು ಕೃತ್ಯ ಎಸಗಿರುವುದಾಗಿ ಹೇಳಿಕೆ...
Team Udayavani, Feb 2, 2024, 7:22 PM IST
ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳದಲ್ಲಿ 40 ವರ್ಷದ ಮಹಿಳೆಯನ್ನು ಆಕೆಯ ಅಪ್ರಾಪ್ತ ವಯಸ್ಕ ಮಗನೇ ಹತ್ಯೆಗೈದ ಘಟನೆ ಶುಕ್ರವಾರ (ಫೆ 2)ಬೆಳಗ್ಗೆ 7.30ರ ಸುಮಾರಿಗೆ ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಭೀಮಯ್ಯ ಲೇಔಟ್ನಲ್ಲಿ ನಡೆದಿದೆ.
ಪೊಲೀಸರ ಪ್ರಕಾರ, ಮುಳಬಾಗಿಲಿನಲ್ಲಿ ಡಿಪ್ಲೋಮಾ ವಿದ್ಯಾರ್ಥಿಯಾಗಿರುವ 17 ವರ್ಷದ ಬಾಲಕ ತನ್ನ ತಾಯಿ ನೇತ್ರಾ (40) ತಲೆಗೆ ರಾಡ್ನಿಂದ ಹೊಡೆದು ಹತ್ಯೆಗೈದು ನಂತರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಮನೆಯಲ್ಲಿ ಇಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
ತನ್ನ ತಾಯಿ ತನ್ನನ್ನು ಸರಿಯಾಗಿ ನೋಡಿಕೊಳ್ಳುತ್ತಿರಲಿಲ್ಲ, ಸರಿಯಾದ ಆಹಾರವನ್ನು ನೀಡುತ್ತಿರಲಿಲ್ಲ ಎಂದು ಬಾಲಕ ಪೊಲೀಸರಿಗೆ ತಿಳಿಸಿದ್ದಾನೆ. ಶುಕ್ರವಾರ ಬೆಳಗ್ಗೆ ಕಾಲೇಜಿಗೆ ತೆರಳುತ್ತಿದ್ದ ವೇಳೆ ತಾಯಿ ಗದರಿಸಿದ್ದು ಇಬ್ಬರ ನಡುವೆ ವಾಗ್ವಾದ ನಡೆದಿದ್ದು, ಕೋಪದ ಭರದಲ್ಲಿ ತಾಯಿಯ ತಲೆಗೆ ಲೋಹದ ರಾಡ್ ನಿಂದ ಹಲ್ಲೆ ನಡೆಸಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ಬಾಲಕನನ್ನು ವಶಕ್ಕೆ ಪಡೆದಿದ್ದೇವೆ. ಹುಡುಗನಿಗೆ ಒಬ್ಬಳು ಅಕ್ಕ ಇದ್ದಾಳೆ, ಅವಳು ಜಾರ್ಜಿಯಾದಲ್ಲಿ ವೈದ್ಯಕೀಯ ಶಿಕ್ಷಣವನ್ನು ಪಡೆಯುತ್ತಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.