Bengaluru: ಕೆಎಸ್‌ಆರ್‌ಟಿಸಿಯಿಂದ ದಸರಾಗೆ 2000 ಹೆಚ್ಚುವರಿ ಬಸ್ ಸಂಚಾರ
ರಾಜ್ಯದ ಪ್ರವಾಸಿ ತಾಣಗಳಿಗೆ ತೆರಳಲು 660 ವಿಶೇಷ ಬಸ್ ಸೇವೆ
Team Udayavani, Oct 5, 2024, 4:22 PM IST
ಬೆಂಗಳೂರು: ಕೆಎಸ್‌ಆರ್‌ಟಿಸಿ ದಸರಾ ಹಬ್ಬದ ಅಂಗವಾಗಿ ಅ. 9ರಿಂದ 12ರವರೆಗೆ ರಾಜ್ಯ ಹಾಗೂ ಅ.13ರಿಂದ 14ರ ವರೆಗೆ ಹೊರ ರಾಜ್ಯದ ಹಲವು ಸ್ಥಳಗಳಿಗೆ ಹೆಚ್ಚುವರಿಯಾಗಿ 2000 ಬಸ್‌ಗಳನ್ನು ನಿಗದಿಮಾಡಿದೆ.
ಪ್ರಸ್ತುತ ಸಾರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಸ್‌ಗಳ ಜತೆಯಾಗಿ ಹೆಚ್ಚುವರಿ ಬಸ್ ಕಾರ್ಯನಿರ್ವಹಿಸಲಿದೆ. ಮೈಸೂರು ದಸರಾ ಅಂಗವಾಗಿ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸಲು 400 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 660 ದಸರಾ ವಿಶೇಷ ವಾಹನಗಳನ್ನು ನಿಯೋಜಿಸಿದೆ.
ದಸರಾ ರಜೆ ಪ್ರಯುಕ್ತ 2000ಕ್ಕೂ ಹೆಚ್ಚು ವಿಶೇಷ ಬಸ್: ಸಾರ್ವಜನಿಕರ ಅನುಕೂಲಕ್ಕಾಗಿ ಅ.9ರಿಂದ ಅ.12ರವರೆಗೆ ಬೆಂಗಳೂರಿನಿಂದ ವಿವಿಧ ಭಾಗಗಳನ್ನು ಸಂಪರ್ಕಿಸಲು 2000ಕ್ಕೂ ಹೆಚ್ಚು ವಿಶೇಷ ಬಸ್ ನಿಗದಿ ಮಾಡಿದೆ.
ವಿಶೇಷ ಪ್ಯಾಕೇಜ್ ಸೌಲಭ್ಯ: ಬೆಂಗಳೂರು- ಮೈಸೂರಿಗೆ 260 ಹೆಚ್ಚುವರಿ ವಾಹನಗಳ ಜತೆಗೆ ಮೈಸೂರಿನ ಸುತ್ತಲಿನ ಪ್ರವಾಸಿ ತಾಣಗಳಿಗೆ 400 ಹೆಚ್ಚುವರಿ ವಾಹನ ಸೌಲಭ್ಯ ಕಲ್ಪಿಸಲಾಗಿದೆ. ಇದರೊಂದಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ “ಫ್ಲೇಯ್ ಬಸ್” ಮೂಲಕ ನೇರ ಸಾರಿಗೆ ಸೌಲಭ್ಯವೂ ಇರಲಿದೆ. ಇ-ಟಿಕೆಟ್ ಬುಕಿಂಗ್‌ನ್ನು https://www.ksrtc.karnataka.gov.in/ ವೆಬ್‌ಸೈಟ್ ಮೂಲಕ ಕಾಯ್ದಿರಿಸಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಶೇ.5 ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇ.10 ರಷ್ಟು ರಿಯಾಯಿತಿ ಇರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
Bengaluru; ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು
ತಂದೆ, ಮಗು ಸಾವು: ಬೆಸ್ಕಾಂ ಎಂಜಿನಿಯರ್ ವಿರುದ್ಧದ ಕೇಸು ರದ್ದತಿಗೆ ಹೈಕೋರ್ಟ್ ನಕಾರ
Arrested: ರಾಜಸ್ಥಾನದಿಂದ ಫ್ಲೈಟ್‌ನಲ್ಲಿ ಬಂದು ಕಾರು ಕದಿಯುತ್ತಿದ್ದವನ ಸೆರೆ; ಆರೋಪಿ ಬಂಧನ
Bengaluru: ಅತಿ ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ: ಫುಡ್ ಡೆಲಿವರಿ ಬಾಯ್ ಸಾವು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.