Bengaluru: ವ್ಹೀಲಿಂಗ್ ಮಾಡುತ್ತಿದ್ದ 44 ಯುವಕರು ವಶಕ್ಕೆ
ಏರ್ ಪೋರ್ಟ್ ರಸ್ತೆಯಲ್ಲಿ ಪೊಲೀಸರಿಂದ ಕಾರ್ಯಾಚರಣೆ ; ವಿವಿಧ ಠಾಣೆಗಳಲ್ಲಿ 33 ಕೇಸ್ ದಾಖಲು
Team Udayavani, Aug 17, 2024, 12:26 PM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ದ್ವಿಚಕ್ರವಾಹನ ವ್ಹೀಲಿಂಗ್ ನಡೆಸಿ ಪುಂಡಾಟ ಮೆರೆಯುತ್ತಿದ್ದ 44 ಯುವಕರನ್ನು ವಶಕ್ಕೆ ಪಡೆದ ಉತ್ತರ ವಿಭಾಗದ ಸಂಚಾರ ವಿಭಾಗದ ಪೊಲೀಸರು 33 ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆಯಲ್ಲಿ 9, ಯಲಹಂಕ ಠಾಣೆಯಲ್ಲಿ 6 ಮತ್ತು ಹೆಬ್ಟಾಳ ಠಾಣೆಯಲ್ಲಿ 18 ಪ್ರಕರಣಗಳು ದಾಖಲಾಗಿವೆ.
ಯಲಹಂಕದ ಚಿಕ್ಕಜಾಲ ಬಳಿಯ ಏರ್‌ಪೋರ್ಟ್ ರಸ್ತೆಯಲ್ಲಿ ಗುರುವಾರ ಸಂಜೆ 5 ಗಂಟೆ ಬಳಿಕ ಪುಂಡರ ಗ್ಯಾಂಗ್ ದ್ವಿಚಕ್ರವಾಹನ ವ್ಹೀಲಿಂಗ್ ನಡೆಸುತ್ತಿತ್ತು. ವಿಮಾನ ನಿಲ್ದಾಣದ ಕಡೆಯಿಂದ ಬೆಂಗಳೂರಿನತ್ತ ಬರುವ ವಾಹನ ಸವಾರರು ಇತ್ತೀಚೆಗೆ ಪುಂಡರ ಬೈಕ್ ವ್ಹೀಲಿಂಗ್ ದೃಶ್ಯವನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ವೇಳೆ ಯುವಕನೊಬ್ಬ ಅಶ್ಲೀಲವಾಗಿ ಕಾರಿನಲ್ಲಿದ್ದವರಿಗೆ ಬೆದರಿಸಿದ್ದ.
ಈ ದೃಶ್ಯವನ್ನು ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣ ಗಳಲ್ಲಿ ಹಂಚಿಕೊಂಡಿದ್ದರು. ಈ ದೃಶ್ಯ ವೈರಲ್ ಆಗು ತ್ತಿದ್ದಂತೆ ಎಚ್ಚೆತ್ತುಕೊಂಡ ಉತ್ತರ ವಿಭಾಗದ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ 33 ಪ್ರಕರಣ ದಾಖಲಿಸಿಕೊಂಡು, 44 ಯುವಕರನ್ನು ವಶಕ್ಕೆ ಪಡೆದ ಈ ರೀತಿ ಮಾಡದಂತೆ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.