Bengaluru: ಪತ್ನಿ ಕಾಟಕ್ಕೆ ಬೇಸತ್ತು ಮನೆ ಬಿಟ್ಟು ಹೋಗಿದ್ದ ಟೆಕಿ ನೋಯ್ಡಾದಲ್ಲಿ ಪತ್ತೆ
Team Udayavani, Aug 17, 2024, 2:50 PM IST
ಬೆಂಗಳೂರು: ಪತ್ನಿಯ ಕಾಟಕ್ಕೆ ಬೇಸತ್ತು ಮನೆ ಬಿಟ್ಟು ಹೋಗಿದ್ದ ಸಾಫ್ಟ್ವೇರ್ ಎಂಜಿನಿಯರ್ ವಿಪಿನ್ ಗುಪ್ತಾ ಎಂಬುವರನ್ನು ಉತ್ತರ ಪ್ರದೇಶದ ನೋಯ್ಡಾದಲ್ಲಿ ಕೊಡಿಗೇಹಳ್ಳಿ ಠಾಣೆ ಪೊಲೀಸರು ಪತ್ತೆ ಹಚ್ಚಿದ್ದಾರೆ.
ಮಾನ್ಯತಾ ಟೆಕ್ಪಾರ್ಕ್ನಲ್ಲಿರುವ ಸಾಫ್ಟ್ವೇರ್ ಕಂಪನಿಯೊಂದರ ಉದ್ಯೋಗಿ ವಿಪಿನ್ ಗುಪ್ತಾ ಕೊಡಿಗೇಹಳ್ಳಿಯ ಟಾಟಾನಗರದಲ್ಲಿ ಪತ್ನಿಯೊಂದಿಗೆ ವಾಸಿಸುತ್ತಿದ್ದರು. ಕಳೆದ ಆ.4ರಂದು ಮಧ್ಯಾಹ್ನ ಮನೆಯಿಂದ ಹೋಗಿದ್ದ ಅವರು ಹಿಂತಿರುಗಿರಲಿಲ್ಲ. ಏಕಾಂಗಿಯಾಗಿ ಆಗಾಗ ವಿಪಿನ್ ಬೈಕ್ ರೈಡ್ ಹೋಗುವ ಹವ್ಯಾಸ ಹೊಂದಿದ್ದರಿಂದ ಮನೆಗೆ ಬರಬಹುದು ಎಂದು ಪತ್ನಿ ಸುಮ್ಮನಾಗಿದ್ದರು. ಆದರೆ, ಫೋನ್ ಸ್ವಿಚ್ಡ್ ಆಫ್ ಆಗಿದ್ದರಿಂದ ಆತಂಕಗೊಂಡು ಕೊಡಿಗೇಹಳ್ಳಿ ಠಾಣೆಗೆ ದೂರು ನೀಡಿದ್ದರು.
ಪೊಲೀಸರು ತನಿಖೆ ನಡೆಸಿದಾಗ ಪಿವಿನ್ ಮನೆಯಿಂದ ತನ್ನ ಬೈಕ್ನಲ್ಲೇ ತಿರುಪತಿಗೆ ತೆರಳಿದ್ದರು. ಅಲ್ಲಿ ಕೇಶಮುಂಡನ ಮಾಡಿಸಿಕೊಂಡು ನಂತರ ನೋಯ್ಡಾಗೆ ಹೋಗಿರುವುದು ಕಂಡು ಬಂದಿತ್ತು. ಇದೀಗ ಕೋಡಿಗೆಹಳ್ಳಿ ಪೊಲೀಸರು ನೋಯ್ಡಾಗೆ ತೆರಳಿ ವಿಪಿನ್ ಪತ್ತೆಹಚ್ಚಿ ನಗರಕ್ಕೆ ಕರೆತಂದಿದ್ದಾರೆ.
ಮನೆಯಲ್ಲಿ ಸಿಸಿ ಕ್ಯಾಮೆರಾ: ಪತ್ನಿ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾಳೆ. ನನ್ನನ್ನು ನಿಯಂತ್ರಿಸಲೆಂದೇ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿದ್ದಾಳೆ. ಆಕೆಯ ಮಾನಸಿಕ ಹಿಂಸೆಯಿಂದ ನೊಂದು ಮನೆ ಬಿಟ್ಟು ಬಂದಿರುವುದಾಗಿ ವಿಪಿನ್ ಪೊಲೀಸರ ಮುಂದೆ ಹೇಳಿದ್ದಾರೆ. ಮನೆಗೆ ಮಾತ್ರ ಹೋಗಲಾರೆ ಎಂದು ಆತ ಪೊಲೀಸರ ಮುಂದೆ ಅವಲತ್ತುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.