Bengaluru: ಕಾರಿನಲ್ಲಿದ್ದ 13 ಲಕ್ಷ ಮೌಲ್ಯದ ಚಿನ್ನ ಕದ್ದಿದ್ದ ಆರೋಪಿ ಬಂಧನ
ಸ್ಕೇಲ್‌ನಿಂದ ಕಾರಿನ ಬಾಗಿಲು ತೆರೆದು ಕೃತ್ಯ ; ಆರೋಪಿ ರಿಯಲ್ ಎಸ್ಟೇಟ್ ಏಜೆಂಟ್
Team Udayavani, Oct 26, 2024, 10:34 AM IST
ಬೆಂಗಳೂರು: ಕಾರಿನ ಬಾಗಿಲನ್ನು ಸ್ಕೇಲ್‌ನಿಂದ ಮೀಟಿ ಹಣ, ಚಿನ್ನಾಭರಣಗಳಿದ್ದ ಬ್ಯಾಗ್ ಲಪಟಾಯಿಸಿದ್ದ ರಿಯಲ್ ಎಸ್ಟೇಟ್ ಏಜೆಂಟ್ ನನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ವಾಸಿಫ್ ಬಂಧಿತ ಆರೋಪಿ. ಈತನಿಂದ 144 ಗ್ರಾಂ ಚಿನ್ನಾಭರಣ, 2 ಲಕ್ಷ ರೂ. ನಗದು ಹಾಗೂ 1 ಕಾರು ಸೇರಿದಂತೆ 13.75 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಹೆಣ್ಣೂರು ಪೊಲೀಸ್ ಠಾಣಾ ಸರಹದ್ದಿನ, ಕೊಕನೆಟ್ ಬೂಟ್‌ಲೇಔಟ್‌ನಲ್ಲಿ ವಾಸವಿರುವ ಮಹಿಳೆಯೊಬ್ಬರು ತನ್ನ ಪತಿಯ ಚಿಕಿತ್ಸೆಗಾಗಿ ತಂಗಿಯ ಮಗನ ಜೊತೆಯಲ್ಲಿ ಸೆ.19ರಂದು ಆಸ್ಪತ್ರೆಗೆ ಹೋಗಬೇಕಾಗಿತ್ತು. ಆಸ್ಪತ್ರೆಯ ಹತ್ತಿರದ ಒಂದು ಕಿರಿದಾದ ರಸ್ತೆಯಲ್ಲಿ ಕಾರನ್ನು ನಿಲ್ಲಿಸಿ, ತಂಗಿಯ ಮಗನ ಜೊತೆ ತುರ್ತಾಗಿ ಆಸ್ಪತ್ರೆಯ ಒಳಗೆ ಹೋಗಿದ್ದರು. ಹಣ, ಚಿನ್ನದ ಒಡವೆಗಳಿದ್ದ ಬ್ಯಾಗ್ ಅನ್ನು ಕಾರಿನಲ್ಲಿಯೇ ಬಿಟ್ಟು ಹೋಗಿದ್ದರು. ಆಸ್ಪತ್ರೆಯ ಒಳಗೆ ಹೋಗಿ ಬಂದು ನೋಡಿದಾಗ ಕಾರಿನಲ್ಲಿದ್ದ ಹಣ, ಒಡವೆ ಕಳವು ಆಗಿರುವುದು ಕಂಡು ಬಂದಿತ್ತು.
ಮಹಿಳೆಯು ಈ ಬಗ್ಗೆ ಬಾಣಸವಾಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಸ್ಕೇಲ್‌ನಿಂದ ಕಾರಿನ ಬಾಗಿಲು ತೆರೆದು ಕಳವು: ವಿಚಾರಣೆ ವೇಳೆ ಕಳವು ಮಾಡಿದ ಚಿನ್ನಾಭರಣ ಹಾಗೂ ನಗದು ಹಣವನ್ನು ತನ್ನ ಕಾರಿನಲ್ಲಿಟ್ಟಿರುವುದಾಗಿ ಆರೋಪಿ ತಿಳಿಸಿದ್ದ. ಈಜೀಪುರ ಮುಖ್ಯರಸ್ತೆಯಲ್ಲಿ ಆರೋಪಿಗೆ ಸಂಬಂಧಿಸಿದ ಕಾರಿನಿಂದ ಪೊಲೀಸರು 144 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ಹಣ ಹಾಗೂ ಆತನ ಕಾರನ್ನು ಜಪ್ತಿ ಮಾಡಿದ್ದಾರೆ. ಆರೋಪಿಯು ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಸ್ಕೇಲ್ ಬಳಸಿ ಕಾರಿನ ಲಾಕ್ ಓಪನ್ ಮಾಡಿ ಕಾರಿನ ಬಾಗಿಲು ತೆರೆದು ಅದರಲ್ಲಿದ್ದ ಚಿನ್ನಾಭರಣ ಕದ್ದು ಪರಾರಿಯಾಗಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.