Bengaluru: ನೀರು ಹಾರಿದ್ದಕ್ಕೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿದ ಆಟೋ ಚಾಲಕ
ರಸ್ತೆಯಲ್ಲಿ ತೆರಳುವಾಗ ಆಕಸ್ಮಿಕವಾಗಿ ಆಟೋಗೆ ಹಾರಿದ್ದ ನೀರು
Team Udayavani, Jul 22, 2024, 8:56 AM IST
ಬೆಂಗಳೂರು: ಕ್ಯಾಬ್ ಹೋಗುವಾಗ ಆಟೋ ಮೇಲೆ ನೀರು ಹಾರಿತು ಎಂಬ ಕಾರಣಕ್ಕೆ ಕೆಲ ಕಿಡಿಗೇಡಿಗಳು ಕ್ಯಾಬ್ ತಡೆದು ಕಲ್ಲು ಎತ್ತಿಹಾಕಿ ಪುಂಡಾಟ ಮೆರೆದಿರುವ ಘಟನೆ ಜಾಲಹಳ್ಳಿಯ ಶೆಟ್ಟಿಹಳ್ಳಿ ಸಮೀಪದ ಮಲ್ಲಸಂದ್ರ ಮುಖ್ಯರಸ್ತೆಯಲ್ಲಿ ಭಾನುವಾರ ಸಂಜೆ ನಡೆದಿದೆ.
ಯಾದಗಿರಿ ಮೂಲದ ಮಲ್ಲಿಕಾರ್ಜುನ್ ಎಂಬವರ ಕ್ಯಾಬ್ ಘಟನೆಯಲ್ಲಿ ಜಖಂಗೊಂಡಿದೆ.
ಪೊಲೀಸರಿಗೆ ದೂರು ನೀಡಲು ಮಲ್ಲಿಕಾರ್ಜುನ್ ಹೆದರಿದ ಹಿನ್ನೆಲೆಯಲ್ಲಿ ಸಾರ್ವಜನಿಕರು ಕಿಡಿಗೇಡಿಗಳ ಪುಂಡಾಟದ ವಿಡಿಯೋವನ್ನು ಎಕ್ಸ್ ಖಾತೆಯಲ್ಲಿ ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಏನಿದು ಘಟನೆ?: ಚಾಲಕ ಮಲ್ಲಿಕಾರ್ಜುನ್ ತಮ್ಮ ಕಾರನ್ನು ಓಲಾ- ಊಬರ್‌ಗೆ ಆಟ್ಯಾಚ್ ಮಾಡಿಕೊಂಡು ಕೆಲಸ ಮಾಡುತ್ತಿದ್ದರು. ಭಾನುವಾರ ಸಂಜೆ ಕೆಲಸ ಮುಗಿಸಿಕೊಂಡು ತಮ್ಮ ಕ್ಯಾಬ್ ನಲ್ಲಿ ಮನೆ ಕಡೆಗೆ ಹೊರಟ್ಟಿದ್ದರು.
ಜಾಲಹಳ್ಳಿಯ ಅಯ್ಯಪ್ಪ ದೇವಸ್ಥಾನದ ಬಳಿ ಹೋಗುವಾಗ ರಸ್ತೆಯಲ್ಲಿನ ನೀರು ಆಟೋ ಮೇಲೆ ಹಾರಿದೆ. ಅಷ್ಟಕ್ಕೆ ಆಟೋ ಚಾಲಕ ಹಾಗೂ ಆತನ ಸ್ನೇಹಿತ ಕ್ಯಾಬ್ ತಡೆದು ಜಗಳ ಮಾಡಿದ್ದಾರೆ.
ಕ್ಯಾಬ್ ಚಾಲಕ ಮಲ್ಲಿಕಾರ್ಜುನ್ ಆಟೋ ತೊಳೆದು ಕೊಡುವುದಾಗಿ ಹೇಳಿದರೂ, ಕಿಡಿಗೇಡಿ ಗಳು ದಪ್ಪ ಕಲ್ಲು ಎತ್ತಿ ಕಾರಿನ ಮೇಲೆ ಹಲವು ಬಾರಿ ಹಾಕಿ ಪುಂಡಾಟ ಮೆರೆದಿದ್ದಾರೆ. ಅದರಿಂದ ಕಾರಿನ ಮುಂಭಾಗದ ಗಾಜು ಹಾಗೂ ಬಾನೆಟ್ ಹಾನಿಯಾಗಿದೆ.
ಈ ಘಟನೆಯನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Border Gavaskar Trophy: ಕಾಂಗರೂ ಚಾಲೆಂಜ್ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ
Kollywood: ʼಅಮರನ್ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.