Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
ಕೆಂಗೇರಿ ಉಪನಗರದಲ್ಲಿ ಹೃದಯವಿದ್ರಾವಕ ಘಟನೆ ; ವ್ಯಕ್ತಿಯ ನೆರವಿಗೆ ಬಾರದ ದಾರಿಹೋಕರು
Team Udayavani, Nov 29, 2024, 2:32 PM IST
ಬೆಂಗಳೂರು: ಅಪರಿಚಿತ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಸೆಕ್ಯುರಿಟಿ ಗಾರ್ಡ್ ಮೃತಪಟ್ಟಿರುವ ಘಟನೆ ಕೆಂಗೇರಿ ಉಪನಗರ ಮುಖ್ಯರಸ್ತೆಯಲ್ಲಿ ನಡೆದಿದೆ.
ಶಿವಯೋಗಿ (52) ಮೃತ ದುರ್ದೈವಿ.
ಗದಗ ಜಿಲ್ಲೆ ಮೂಲದ ಶಿವಯೋಗಿ ಕುಟುಂಬ ಸದಸ್ಯರೊಂದಿಗೆ ಸುಮಾರು 25 ವರ್ಷಗಳಿಂದ ಕೆಂಗೇರಿ ಉಪನಗರದ ಬಳಿಯ ಕೃಷ್ಣನಗರದಲ್ಲಿ ವಾಸವಾಗಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಕಚೇರಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು.
ಕೆಂಗೇರಿ ಉಪನಗರ ಮುಖ್ಯರಸ್ತೆಯ ಹೊಯ್ಸಳ ಸರ್ಕಲ್ ಸಮೀಪ ಮಂಗಳವಾರ ಸಂಜೆ ರಸ್ತೆ ದಾಟುತ್ತಿದ್ದ ಶಿವಯೋಗಿಗೆ ಬೈಕ್ ಡಿಕ್ಕಿ ಹೊಡೆದಿತ್ತು. ಅದರಿಂದ ಅವರ ಕೈ-ಕಾಲುಗಳಿಗೆ ಪೆಟ್ಟಾಗಿತ್ತು ಮತ್ತು ತಲೆಯ ಒಳ ಭಾಗದಲ್ಲಿ ರಕ್ತಸ್ರಾವವಾಗಿತ್ತು. ನಂತರ ಸ್ಥಳೀಯರು ಅವರಿಗೆ ನೀರು ಕುಡಿಸಿ, ರಸ್ತೆ ಬದಿಯಲ್ಲಿ ಕೂರಿಸಿ ಹೋಗಿದ್ದರು. ನಿತ್ರಾಣಗೊಂಡಿದ್ದ ಶಿವಯೋಗಿ ರಸ್ತೆ ಬದಿಯ ಮರದ ಬಳಿ ಹೋಗಿ ಮಲಗಿದ್ದರು. ರಾತ್ರಿಯಿಡೀ ಅಲ್ಲಿಯೇ ಕಳೆದಿದ್ದ ಅವರು ಬೆಳಗಾಗುವಷ್ಟರಲ್ಲಿ ಮೃತಪಟ್ಟಿದ್ದಾರೆ. ಸ್ಥಳೀಯರು ಶಿವಯೋಗಿ ಮೃತಪಟ್ಟಿರುವುದನ್ನು ಗಮನಿಸಿ ಬುಧವಾರ ಬೆಳಗ್ಗೆ ಠಾಣೆಗೆ ಮಾಹಿತಿ ನೀಡಿದರು ಎಂದು ಪೊಲೀಸರು ಹೇಳಿದರು.
ಆಸ್ಪತ್ರೆಗೆ ದಾಖಲಿಸದ ದಾರಿಹೋಕರು:
ಶಿವಯೋಗಿ ಅವರನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರೆ ಅವರು ಬದುಕುಳಿಯುವ ಸಾಧ್ಯತೆ ಇತ್ತು. ಆದರೆ, ಬೈಕ್ ಸವಾರ ಅಪಘಾತದ ನಂತರ ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ. ಮತ್ತೂಂದೆಡೆ ಸ್ಥಳೀಯರು ಶಿವಯೋಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿಲ್ಲ. ಅಪಘಾತಕ್ಕೆ ಕಾರಣನಾದ ಬೈಕ್ ಸವಾರನ ಪತ್ತೆ ಕಾರ್ಯ ಮುಂದುವರಿದಿದೆ. ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿಯನ್ನು ಪರಿಶೀಲಿಸಲಾಗುತ್ತಿದೆ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಿದ್ದೇನು?
ಸಂಜೆ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ
ತೀವ್ರ ಗಾಯಗೊಂಡು ರಕ್ತಸ್ರಾವಗೊಂಡಿದ್ದ ಸೆಕ್ಯುರಿಟಿ
ನಿತ್ರಾಣಗೊಂಡು ರಸ್ತೆ ಬದಿಯ ಮರದಡಿ ಮಲಗಿದ ಗಾಯಾಳು
ಇಡೀ ರಾತ್ರಿ ರಸ್ತೆಯಲ್ಲೇ ನರಳಾಡಿದ ಪಾದಚಾರಿ, ಬೆಳಗಾಗುವಷ್ಟರಲ್ಲಿ ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ
Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ
Atul Subhash: ಟೆಕಿ ಅತುಲ್ ಪತ್ನಿ ಬೇಲ್ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.