Bengaluru: ಲಂಚ ಆರೋಪ: ಆಹಾರ, ಗುಣಮಟ್ಟ ಇಲಾಖೆಯ ಅಧಿಕಾರಿ ಅಮಾನತು
Team Udayavani, Aug 24, 2024, 3:18 PM IST
ಬೆಂಗಳೂರು: ಆಹಾರ ವಸ್ತುಗಳ ಸುರಕ್ಷತೆ ಹಾಗೂ ಗುಣಮಟ್ಟವನ್ನು ತಪಾಸಣೆ ಮಾಡುವ ನೆಪದಲ್ಲಿ, ಉದ್ಯಮಿಗಳಿಗೆ ಹಣ ನೀಡುವಂತೆ ಬೇಡಿಕೆಯಿಟ್ಟ ಆರೋಪದಡಿ ಆಹಾರ ಮತ್ತು ಗುಣಮಟ್ಟ ಇಲಾಖೆಯಲ್ಲಿ ಅಂಕಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸುರೇಶ್ ಎಚ್. ಅವರನ್ನು ಇಲಾಖಾ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ. ನದೀಮ್ ಅಹ್ಮದ್ ಆದೇಶ ಹೊರಡಿಸಿದ್ದಾರೆ.
ಆಹಾರ ಮತ್ತು ಗುಣಮಟ್ಟ ಇಲಾಖೆಯ ಬಿಬಿಎಂಪಿ ದಕ್ಷಿಣ ವಲಯದ ಅಂಕಿತಾಧಿಕಾರಿಯಾಗಿದ್ದ ಡಾ. ಸುರೇಶ್ ಎಚ್. ಕಳೆದ 6 ತಿಂಗಳಿನಿಂದ ಮಾಸಿಕ ವರದಿ ಸಲ್ಲಿಸದೇ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ್ದರು.
ಜತೆಗೆ ಆಹಾರ ತಪಾಸಣೆ ವೇಳೆ ಉದ್ಯಮಿಗಳಲ್ಲಿ ಹಣದ ಬೇಡಿಕೆ ಇಟ್ಟಿರುವ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಇಲಾಖಾ ವಿಚಾರಣೆಯನ್ನು ಬಾಕಿಯಿಟ್ಟು, ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.