Bengaluru: ಮಾರ್ಗಸೂಚಿ ಪಾಲಿಸದ ಪಿಜಿಗಳಿಗೆ ಪಾಲಿಕೆ ಬೀಗ

ನಗರದಲ್ಲಿ 2320 ಅನಧಿಕೃತ ಪೇಯಿಂಗ್‌ ಗೆಸ್ಟ್‌ಗಳ ಗುರುತು ; ಮಾರ್ಗಸೂಚಿ ಪಾಲಿಸದ ಪಿಜಿಗಳ ವಿರುದ್ಧ ಬಿಬಿಎಂಪಿ ಕಾರ್ಯಾಚರಣೆ

Team Udayavani, Oct 11, 2024, 4:23 PM IST

15-pg

ಬೆಂಗಳೂರು: ಬಿಬಿಎಂಪಿ ಮಾರ್ಗಸೂಚಿ ಪಾಲಿಸದ ಸುಮಾರು 2,320 ಅನಧಿಕೃತ ಪಿಜಿಗಳನ್ನು ಮುಚ್ಚುವ ಕಾರ್ಯ ನಡೆಯಲಿದೆ ಎಂದು ಪಾಲಿಕೆ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್‌ ವಿಕಾಸ್‌ ಕಿಶೋರ್‌ ಹೇಳಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ ಪಿಜಿಗಳಿಗೆ ಭೇಟಿ ನೀಡಿ ಪಾಲಿಕೆ ಮಾರ್ಗ ಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. 2320 ಅನಧಿಕೃತ ಪಿಜಿಗಳಿದ್ದು, ಅವುಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

2193 ಅಧಿಕೃತ ಪಿಜಿಗಳು:ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2193 ಅಧಿಕೃತ ಪಿಜಿಗಳಿವೆ. ಈ ಪೈಕಿ 1578 ಪಿಜಿಗಳು ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದು, 615 ಪಿ.ಜಿ.ಗಳು ನಿಯಮ ಪಾಲಿಸುತ್ತಿಲ್ಲ. ಮಾರ್ಗಸೂಚಿ ಪಾಲಿಸದ 1011 ಅಧಿಕೃತ ಪಿಜಿಗಳಿಗೆ ನೋಟಿಸ್‌ ನೀಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 2320 ಅನಧಿಕೃತ ಪಿಜಿಗಳಿವೆ. ಇದರಲ್ಲಿ 1674 ಪಿ.ಜಿ.ಗಳು ಮಾರ್ಗಸೂಚಿ ಪಾಲಿಸುತ್ತಿದ್ದು, 646 ಪಿಜಿಗಳು ಪಾಲಿಸುತ್ತಿಲ್ಲ. ಇದು ವರೆಗೆ ನಿಯಮ ಮೀರಿದ 2320 ಅಧಿಕೃತ ಪಿಜಿಗಳಿಗೆ ನೋಟಿಸ್‌ ನೀಡಲಾಗಿದೆ.

ಪಾಲಿಕೆಯಿಂದ ಉದ್ದಿಮೆ ಪರವಾನಗಿ ಪಡೆಯದೆ ಅನಧಿಕೃತವಾಗಿ ನಡೆಸುತ್ತಿರುವ ಹಾಗೂ ಮಾರ್ಗಸೂಚಿ ಗಳನ್ನು ಪಾಲಿಸದ ಪಿಜಿ ಉದ್ದಿಮೆಗಳಿಗೆ 2 ರಿಂದ 3 ಬಾರಿ ನೋಟಿಸ್‌ ನೀಡಲಾಗಿದೆ. ಆದರೂ ನಿಯಮ ಪಾಲಿಸಿಲ್ಲ. ಈ ಸಂಬಂಧ ಪಿಜಿಗಳನ್ನು ಬಿಬಿಎಂಪಿ ಕಾಯ್ದೆ 2020ರ ಸೆಕ್ಷನ್‌ 305 ಮತ್ತು 308ರಡಿಯಲ್ಲಿ ತಕ್ಷಣದಿಂದ ಮುಚ್ಚುವ ಕೆಲಸ ಮಾಡಲಾಗುತ್ತಿದೆ. ಅದರಂತೆ 1 ಅಧಿಕೃತ ಪಿಜಿ ಹಾಗೂ 20 ಅನಧಿಕೃತ ಸೇರಿ 21 ಪಿಜಿಗಳನ್ನು ಮುಚ್ಚಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಪಿ.ಜಿ.ಗಳಿಗೆ ಬಿಬಿಎಂಪಿಯ ಮಾರ್ಗಸೂಚಿಗಳೇನು?

 ಪೇಯಿಂಗ್‌ ಗೆಸ್ಟ್‌ಗಳ ಪ್ರವೇಶ, ನಿರ್ಗಮನ ಮತ್ತು ಆವರಣಗಳ ಸುತ್ತಮುತ್ತಲೂ ನಡೆಯುವ ಘಟನೆಗಳನ್ನು ಚಿತ್ರೀಕರಿಸುವ ಸಿಸಿ ಕ್ಯಾಮೆರಾ ಅಳವಡಿಸಿ, ಫೋಟೇಜ್‌ ಗಳನ್ನು 30 ದಿನಗಳ ಬ್ಯಾಕಪ್‌ ಇರುವಂತೆ ಅಳವಡಿಸುವುದು.

 ವಾಸಕ್ಕೆ ಸಂಬಂಧಿತ ಕಟ್ಟಡದ ನಿಯಮಗಳ ಪ್ರಕಾರ, ಪ್ರತಿಯೊಬ್ಬ ನಿವಾಸಿಯು ತಲಾ 70 ಚದರ ಅಡಿಗಳಿಗಿಂತ ಕನಿಷ್ಠ ಜಾಗವನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳ ಬೇಕು. ಕಟ್ಟಡದಲ್ಲಿ ಒದಗಿಸಲಾದ /ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು.

 ಪೇಯಿಂಗ್‌ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವತ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಬೇಕು.

 ಪೇಯಿಂಗ್‌ ಗೆಸ್ಟ್‌ ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರಬೇಕು.

 ಪೇಯಿಂಗ್‌ ಗೆಸ್ಟ್‌ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 3 ತಿಂಗಳ ಅವಧಿಯೊಳಗೆ ಲೈಸೆ ನ್ಸ್‌ ಪಡೆಯಬೇಕು.

 ಉದ್ದಿಮೆದಾರರು/ ಮಾಲಿಕರು ಪೇಯಿಂಗ್‌ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಠ ಪಕ್ಷ ಒಬ್ಬ ಸಿಬ್ಬಂದಿಯನ್ನಾ ದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸಬೇಕು.

 ಪಿಜಿ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಗಿ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲಿಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರ ಪಡೆದಿರಬೇಕು.

 ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್‌ ಗೆಸ್ಟ್‌ ಕಟ್ಟಡಗಳಲ್ಲಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆ 1533 ಮತ್ತು ಪೊಲೀಸ್‌ ಇಲಾಖೆಯ ಸಹಾಯವಾಣಿ ಸಂಖ್ಯೆ 101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರಬೇಕು.

 ಪಿಜಿ ಮಾಲಿಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಿಸಲು ಕ್ರಮವಹಿಸಬೇಕು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Arrest

Mangaluru: ಹೊಸ ವರ್ಷ ಪಾರ್ಟಿಗೆ ಡ್ರಗ್ಸ್‌: ಮೂವರ ಬಂಧನ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.