Bengaluru: ಬಿಯರ್ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ
ಹೊಸ ವರ್ಷಾಚರಣೆ ಪಾರ್ಟಿಯಲ್ಲಿ ಗೆಳೆಯನ ಹತ್ಯೆ
Team Udayavani, Jan 11, 2025, 12:01 PM IST
ಬೆಂಗಳೂರು: ಹೊಸ ವರ್ಷಾಚರಣೆ ವೇಳೆ ಸ್ನೇಹಿತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣರಾಗಿದ್ದ ಇಬ್ಬರು ಬಾಲಕರೂ ಸೇರಿದಂತೆ 7 ಆರೋಪಿಗಳು ಕೆ.ಪಿ.ಅಗ್ರಹಾರ ಠಾಣೆ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.
ಆಟೋ ಚಾಲಕ ಕುಶಾಲ್ (24) ಕೊಲೆಯಾದವರು. ಸಾಗರ್, ದಿಲೀಪ್, ಗಂಗಾಧರ್, ವಿಜಯ್, ಮಾದೇಶ್ ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರನ್ನು ಬಂಧಿಸಲಾಗಿದೆ.
ಕೊಲೆಯಾದ ಕುಶಾಲ್ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಡಿ.31ರಂದು ರಾತ್ರಿ ಭುವನೇಶ್ವರಿ ನಗರದ ಗಾಂಧಿ ಬ್ರಿಡ್ಜ್ ಸಮೀಪದಲ್ಲಿ ಮದ್ಯಪಾನ ಮಾಡಿದ್ದರು. ಆ ವೇಳೆ ಮದ್ಯದ ಅಮಲಿನಲ್ಲಿದ್ದ ಕುಶಾಲ್ ಆರೋಪಿಗಳ ಕೈಯಲ್ಲಿದ್ದ ಬಿಯರ್ ಬಾಟಲ್‌ಗಳನ್ನು ಪದೇ ಪದೆ ಕಸಿದುಕೊಳ್ಳಲು ಪ್ರಯತ್ನಿಸಿ ಕಿರಿ-ಕಿರಿ ಮಾಡುತ್ತಿದ್ದ. ಇದರಿಂದ ಆಕ್ರೋಶಗೊಂಡ ಇತರ ಆರೋಪಿಗಳು ಮಾರಕಾಸ್ತ್ರಗಳಿಂದ ಕುಶಾಲ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಹಲ್ಲೆಗೊಳಗಾದ ಕುಶಾಲ್ ಗಂಭೀರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆತನನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಕೆ.ಪಿ ಅಗ್ರಹಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. 8 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೇ ಕುಶಾಲ್ ಮೃತಪಟ್ಟಿದ್ದ. ಇದೀಗ ಇಬ್ಬರು ಬಾಲಕರ ಸಹಿತ ಒಟ್ಟು ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada: ಕನ್ನಡ ಎನೆ ಕುಣಿದಾಡುವುದೆನ್ನೆದೆ… ಕನ್ನಡ ಎನೆ ಕಿವಿ ನಿಮಿರುವುದು…
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
Hubli: ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳುವುದು ಖಚಿತ: ಜಗದೀಶ ಶೆಟ್ಟರ್
Shettar: ಪ್ರಧಾನಿ ಮೋದಿ ಭೇಟಿಯಾದ ಶೆಟ್ಟರ್; ಬೆಳಗಾವಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.