Bengaluru Crime: ಅತಿಯಾಗಿ ಮೊಬೈಲ್ ಬಳಸಿದಕ್ಕೆ ಪ್ರೇಯಸಿ ಹತ್ಯೆ?
ಅಸ್ಸಾಂ ಮೂಲದ ಯುವತಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ; ಕೊಲೆಗೈದು ಮಧ್ಯಪ್ರದೇಶ, ಉತ್ತರಪ್ರದೇಶಕ್ಕೆ ತೆರಳಿ ಮರಳಿ ದೇವನಹಳ್ಳಿಗೆ ಬಂದಿದ್ದ ಆರೋಪಿ
Team Udayavani, Nov 30, 2024, 10:11 AM IST
ಬೆಂಗಳೂರು: ಕಳೆದ 4 ದಿನಗಳ ಹಿಂದೆ ಬೆಂಗಳೂರಿನ ಸರ್ವಿಸ್ ಅಪಾರ್ಟಮೆಂಟ್‌ನಲ್ಲಿ ಪ್ರೇಯಸಿ ಅಸ್ಸಾಂನ ಗುವಾಹಟಿ ಮೂಲದ ಮಾಯಾ ಗೊಗೋಯ್ (19) ಎಂಬಾಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಕೇರಳ ಮೂಲದ ಆರೋಪಿ ಆರವ್ ಹನೋಯ್‌ನನ್ನು ದೇವನಹಳ್ಳಿಯ ಬಳಿ ಇಂದಿರಾನಗರದ ಪೊಲೀಸರು ಬಂಧಿಸಿದ್ದಾರೆ. ವೈಯಕ್ತಿಕ ಕಾರಣದಿಂದ ಇಬ್ಬರ ನಡುವೆ ಜಗಳ ಉಂಟಾಗಿ ಆರೋಪಿ ಕೊಲೆ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ಅತಿಯಾಗಿ ಮೊಬೈಲ್ ಬಳಸಿದ್ದಕ್ಕೆ ಹತ್ಯೆ?: ಪ್ರೇಯಸಿ ಮಾಯಾ ಗೊಗೋಯ್ ಮೊಬೈಲ್‌ನಲ್ಲಿ ಹೆಚ್ಚಾಗಿ ಕಳೆಯುತ್ತಿದ್ದ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ ಎನ್ನಲಾಗುತ್ತಿದೆ. ಮಾಯಾ ತನ್ನೊಂದಿಗೆ ಹೆಚ್ಚು ಮಾತನಾಡದೇ ಅತೀಯಾದ ಮೊಬೈಲ್ ಬಳಕೆ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಿಯಕರ ಆರವ್ ಹನೋಯ್ ಆಕ್ರೋಶಗೊಂಡಿದ್ದ ಎನ್ನಲಾಗಿದೆ.
ನ.23 ರಂದು ಇಂದಿರಾನಗರ 2ನೇ ಹಂತದಲ್ಲಿರುವ ದಿ ರಾಯಲ್ ಲಿವಿಂಗ್ ಅಪಾರ್ಟ್‌ಮೆಂಟ್‌ಗೆ ಪ್ರೇಯಸಿ ಮಾಯಾಳನ್ನು ಆರೋಪಿ ಆರವ್ ಹನೋಯ್ ಕರೆ ತಂದಿದ್ದ. ಇದಾದ ಬಳಿಕ ವೈಯಕ್ತಿಕ ಕಾರಣಕ್ಕೆ ಇಬ್ಬರ ನಡುವೆ ಜಗಳವಾಗಿತ್ತು. ಇದರಿಂದ ಆಕ್ರೋಶಗೊಂಡ ಆರೋಪಿಯು ಆಕೆಯನ್ನು ಕೊಲೆ ಮಾಡಲೆಂದು ಆ್ಯಪ್‌ವೊಂದರ ಮೂಲಕ ಚಾಕು ಹಾಗೂ ಹಗ್ಗವನ್ನು ಆರ್ಡರ್ ಮಾಡಿಕೊಂಡು ತಾನಿದ್ದ ಅಪಾರ್ಟ್‌ಮೆಂಟ್‌ಗೆ ತರಿಸಿಕೊಂಡಿದ್ದ. ನಂತರ ಆಕೆಯನ್ನು ಕೊಲೆ ಮಾಡಿದ್ದ. ಬಳಿಕ ಮರು ದಿನ ಬೆಳಗ್ಗೆ ಕ್ಯಾಬ್ ಬುಕ್ ಮಾಡಿಕೊಂಡು ಅಪಾರ್ಟ್‌ಮೆಂಟ್‌ನಿಂದ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ತೆರಳಿ ಮೊಬೈಲ್ ಸ್ವಿಚ್ಡ್‌ಆಫ್ ಮಾಡಿಕೊಂಡಿದ್ದ. ಅಲ್ಲಿಂದ ರೈಲಿನಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ ಹಾಗೂ ವಾರಾಣಸಿಗೆ ಹೋಗಿದ್ದ.
ಉತ್ತರ ಭಾರತದಲ್ಲಿ ಖಾಕಿ ಶೋಧ: ಇತ್ತ ಆರೋಪಿಯ ಬಂಧನಕ್ಕೆ ಪೂರ್ವ ವಿಭಾಗದ ಪೊಲೀಸರು 2 ತಂಡ ರಚಿಸಿದ್ದರು. ಅಪಾರ್ಟ್‌ಮೆಂಟ್‌ನ ಸಿಸಿ ಕ್ಯಾಮೆರಾದಲ್ಲಿ ಆರೋಪಿ ಹಾಗೂ ಯುವತಿ ತಮ್ಮ ಹೆಸರು ನೋಂದಾಯಿಸಿ ಒಳಗೆ ಹೋಗಿರುವುದು ಸೆರೆಯಾಗಿತ್ತು. ಇದನ್ನು ಆಧರಿಸಿ ಆರೋಪಿಯ ಬೆನ್ನು ಬಿದ್ದ ಪೊಲೀಸರು ಕೇರಳ ಹಾಗೂ ಉತ್ತರ ಭಾರತದಲ್ಲಿ ಆತನಿಗಾಗಿ ಹುಡುಕಾಟ ನಡೆಸಿದ್ದರು. ಉತ್ತರ ಭಾರತದ ಹಲವು ನಗರಗಳನ್ನು ಸುತ್ತಿದ ಆರೋಪಿಯು ಶುಕ್ರವಾರ ದೇವನಹಳ್ಳಿ ಬಳಿ ಬಂದಿರುವ ಬಗ್ಗೆ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಕೂಡಲೇ ಆತನನ್ನು ದೇವನಹಳ್ಳಿ ಬಳಿ ಬಂಧಿಸಿದ್ದಾರೆ.
ಡೇಟಿಂಗ್ ಆ್ಯಪ್ ಮೂಲಕ ಪರಿಚಯ
ಕೇರಳ ಮೂಲದ ಆರೋಪಿ ಆರವ್ ಹನೋಯ್ 6 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಇಲ್ಲಿನ ಖಾಸಗಿ ಕಂಪನಿಯೊಂದರಲ್ಲಿ ಇಂಟರ್ನ್ಶಿಪ್ ಮಾಡುತ್ತಿದ್ದ. ತಿಂಗಳಿಗೆ 15 ಸಾವಿರ ರೂ. ವೇತನ ಪಡೆಯುತ್ತಿದ್ದ. ಹತ್ಯೆಯಾದ ಮಾಯಾ ಗೊಗೋಯ್ ಜಯನಗರ ಹಾಗೂ ಎಚ್‌ಎಸ್ ಆರ್ ಬಡಾವಣೆಯಲ್ಲಿರುವ ಕೌನ್ಸೆಲಿಂಗ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದಳು. 6 ತಿಂಗಳ ಹಿಂದೆ ಡೇಟಿಂಗ್ ಆ್ಯಪ್ ಮೂಲಕ ಇಬ್ಬರಿಗೂ ಪರಿಚಯವಾಗಿತ್ತು. ಇಬ್ಬರೂ ತಮ್ಮ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಆತ್ಮೀಯತೆ ಬೆಳೆದಿತ್ತು. ನಂತರ ಇಬ್ಬರು ನ.23ರಂದು ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಇನ್ನು ಕೊಲೆಯಾದ ಮಾಯಳ ಸಹೋದರಿ ಎಚ್‌ಎಸ್‌ಆರ್ ಬಡಾವಣೆಯಲ್ಲಿ ವಾಸವಿದ್ದು, ಶುಕ್ರವಾರ ಆಕೆಗೆ ಕರೆ ಮಾಡಿದ್ದ ಮಾಯಾ ಆಫೀಸ್ ಪಾರ್ಟಿ ಇದೆ. ರಾತ್ರಿ ಬರುವುದಿಲ್ಲ ಎಂದು ತಿಳಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
Namma Metro: ನಮ ಮೆಟ್ರೋದಲ್ಲಿ ಒಂದೇ ದಿನ 8.6 ಲಕ್ಷ ಜನ
Fraud Case: ಐಶ್ವರ್ಯಗೌಡ ಮನೆಯಲ್ಲಿ 29 ಕೆಜಿ ಬೆಳ್ಳಿ ಜಪ್ತಿ
Atul Subhash: ಟೆಕಿ ಅತುಲ್ ಪತ್ನಿ ಬೇಲ್ ಅರ್ಜಿ ನಾಡಿದ್ದು ಇತ್ಯರ್ಥಪಡಿಸಿ: ಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ
ಜ.26-30: ಅತ್ತೂರು ಸಂತ ಲಾರೆನ್ಸ್ ಬಸಿಲಿಕ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ
Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ
ನನ್ನ ನಾಯಿಗಳಿಗೆ ಕ್ರಾಸಿಂಗ್ ಮಾಡಿಸಬೇಕು.. ಸೋನು ನ್ಯೂ ಇಯರ್ ರೆಸಲ್ಯೂಷನ್ ಏನೇನು ಗೊತ್ತಾ?
450 ಕೋಟಿ ಚಿಟ್ ಫಂಡ್ ಹಗರಣ: ಶುಭಮನ್ ಗಿಲ್ ಸೇರಿ ನಾಲ್ವರಿಗೆ ಸಿಐಡಿ ಸಮನ್ಸ್ ಸಾಧ್ಯತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.