Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ
Team Udayavani, Oct 18, 2024, 2:48 PM IST
ಬೆಂಗಳೂರು: ಆನ್‌ಲೈನ್ ಜೂಜಾಟದಲ್ಲಿ ಕಳೆದುಕೊಂಡಿದ್ದ ಲಕ್ಷಾಂತರ ರೂ.ಅನ್ನು ಹೊಂದಿಸಲು ಮನೆ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಳ್ಳಂದೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬೆಳ್ಳಂದೂರು ನಿವಾಸಿ ಭಾವೇಶ್(30) ಬಂಧಿತ. ಆರೋಪಿಯಿಂದ 22 ಲಕ್ಷ ರೂ. ಮೌಲ್ಯದ 322 ಗ್ರಾಂ ಚಿನ್ನಾಭರಣ ಹಾಗೂ 71 ಗ್ರಾಂ ನಕಲಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಗುಜರಾತ್ ಮೂಲದ ಭಾವೇಶ್, ಕೆಲ ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಸಹೋದರನ ಫ್ಲೈವುಡ್ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಆನ್‌ಲೈನ್ ಜೂಜಾಟದಲ್ಲಿ ಲಕ್ಷಾಂತರ ರೂ. ಹೂಡಿಕೆ ಮಾಡಿ ಕಳೆದುಕೊಂಡಿದ್ದಾನೆ. ಅಲ್ಲದೆ, ಮನೆಯಲ್ಲಿದ್ದ ಹಣವನ್ನು ಜೂಜಾಟಕ್ಕೆ ಬಳಸಿಕೊಂಡಿದ್ದ. ಈ ಹಣ ಹೊಂದಿಸಲು ರಾತ್ರಿ ವೇಳೆ ಬೀಗ ಹಾಕಿದ ಮನೆಗಳ ಬಾಗಿಲು ಮೀಟಿ ಚಿನ್ನಾಭರಣ ಮತ್ತು ನಗದು ಕಳವು ಮಾಡುತ್ತಿದ್ದ. ಇತ್ತೀಚೆಗೆ ಕಸವನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರ ನಿವಾಸಿ ಬಿಟಿಎಂ ಲೇಔಟ್‌ನಲ್ಲಿರುವ ದೇವಸ್ಥಾನಕ್ಕೆ ಹೋಗಿದ್ದರು. ಆಗ ಆರೋಪಿ ಮನೆಯ ಮುಂಬಾಗಿಲು ಹೊಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದ. ಈ ಸಂಬಂಧ ಮನೆ ಮಾಲೀಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.