Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್ ?
ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದ ಘಟನೆ ದೂರು ದಾಖಲಿಸಿದ ಮಹಿಳೆ ; ಪೊಲೀಸರಿಂದ ತನಿಖೆ
Team Udayavani, Nov 8, 2024, 10:07 AM IST
ಬೆಂಗಳೂರು: ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರ ಜತೆ ಮದ್ಯದ ಅಮಲಿನಲ್ಲಿ ವೈದ್ಯ ಹಾಗೂ ಪುರುಷ ನರ್ಸ್ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಈ ಬಗ್ಗೆ ವಸಂತಪುರದ ಮಾರುತಿ ಲೇಔಟ್ ನಿವಾಸಿ ಸ್ನೇಹಾ ಭಟ್ ನೀಡಿದ ದೂರಿನ ಮೇರೆಗೆ ಪ್ರಗತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವೈದ್ಯ ಪ್ರದೀಪ್ ಮತ್ತು ಬ್ರದರ್ ಮಹೇಂದ್ರ ವಿರುದ್ಧ ಗಂಭೀರ ಸ್ವರೂಪವಲ್ಲದ ಪ್ರಕರಣವನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಆರೋಪವೇನು?: ನ.3ರಂದು ಸ್ನೇಹಭಟ್ ಅನಾರೋಗ್ಯ ನಿಮಿತ್ತ ವಸಂತಪುರ ಮುಖ್ಯರಸ್ತೆಯಲ್ಲಿರುವ ಪ್ರಗತಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತೆರಳಿದ್ದರು. ಈ ವೇಳೆ ತಮ್ಮ ಕರ್ತವ್ಯ ಮುಗಿದಿದ್ದರೂ ವೈದ್ಯ ಪ್ರದೀಪ್ ಮತ್ತು ಬ್ರದರ್ ಮಹೇಂದ್ರ ಕರ್ತವ್ಯ ನಿರ್ವಹಿಸುತ್ತಿದ್ದರು. ಮದ್ಯದ ಅಮಲಿನಲ್ಲಿದ್ದ ಇಬ್ಬರು ಸ್ನೇಹಾ ಭಟ್ ಕೈಗೆ ಇಂಜೆಕ್ಷನ್ ನೀಡುವಾಗ ನಾಲ್ಕೈದು ಕಡೆಗೆ ಚುಚ್ಚಿದ್ದಾರೆ.
ಅದನ್ನು ಪ್ರಶ್ನಿಸಿದ್ದಕ್ಕೆ ದೂರುದಾರ ಮಹಿಳೆ ಜತೆ ಇಬ್ಬರು ಅಸಭ್ಯವಾಗಿ ವರ್ತಿಸಿ, ಮಾತನಾಡಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಇಬ್ಬರು ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಗೆ ಒಳಪಡಿಸುವುದಾಗಿ ಪೊಲೀಸರು ಮಾಹಿತಿ ನೀಡಿದರು.
ಸಂಬಂಧಿಕರಿಂದ ಸಿಬ್ಬಂದಿಗೆ ತರಾಟೆ: ಮದ್ಯದ ಅಮಲಿನಲ್ಲಿದ್ದ ವೈದ್ಯ ಹಾಗೂ ಬ್ರದರ್ ವಿರುದ್ಧ ದೂರುದಾರೆ ಸ್ನೇಹಭಟ್ ಸಂಬಂಧಿಕರು ಆಸ್ಪತ್ರೆಯಲ್ಲೇ ಇಬ್ಬರನ್ನೂ ತರಾಟೆ ತೆಗೆದುಕೊಂಡಿದ್ದಾರೆ. ಸಂಬಂಧಿಗಳ ಆಕ್ರೋಶ ಹೆಚ್ಚಾಗುತ್ತಿದ್ದಂತೆ ವೈದ್ಯ ಸೇರಿ ಇಬ್ಬರೂ ಅಲ್ಲಿಂದ ಪರಾರಿಯಾಗಿದ್ದಾರೆ. ಮದ್ಯ ಸೇವಿಸಿ ಚಿಕಿತ್ಸೆ ನೀಡಿದ ವೈದ್ಯ ಮತ್ತು ಸಿಬ್ಬಂದಿ ವಿರುದ್ಧ ಕ್ರಮ ಆಗಬೇಕೆಂದು ರೋಗಿ ಹಾಗೂ ಸಂಬಂಧಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್, 38 ಪ್ರಶ್ನೆ!
Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.