Bengaluru: ಆಸ್ಪತ್ರೆಗಳಲ್ಲಿ ಅನ್ಯಭಾಷಿಕ ನರ್ಸ್‌ಗಳಿಗೆ ಕನ್ನಡ ಪಾಠ
ನರ್ಸಿಂಗ್ ಹೋಮ್‌ಗಳಲ್ಲಿ ಕನ್ನಡಿಗ ರೋಗಿಗಳಿಗೆ ಕಿರಿಕಿರಿ ತಪ್ಪಿಸಲು ಯೋಜನೆ
Team Udayavani, Dec 6, 2024, 3:51 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಮದರಸಾಗಳಲ್ಲಿ ಕನ್ನಡ ಕಲಿಕಾ ತರಗತಿ ಆಯೋಜಿಸುವ ನಿಟ್ಟಿನಲ್ಲಿ ಯೋಜನೆ ರೂಪಿಸಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಇದೀಗ ರಾಜಧಾನಿಯ ವಿವಿಧ ಆಸ್ಪತ್ರೆಯಲ್ಲಿರುವ ಕನ್ನಡೇತರ ದಾದಿಯರಿಗೆ “ಕನ್ನಡ ಕಲಿಕೆ’ಗೆ ಒಲವು ತೋರಿದೆ.
ಸಿಲಿಕಾನ್ ಸಿಟಿಯ ಹಲವು ಖಾಸಗಿ ಆಸ್ಪತ್ರೆಯಲ್ಲಿ ಹಿಂದಿ, ಮಲಯಾಳಂ ಸೇರಿದಂತೆ ಹಲವು ಭಾಷೆಗಳನ್ನು ಮಾತನಾಡುವವರು ನರ್ಸ್‌ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂತವರು ಆಸ್ಪತ್ರೆಗೆ ಭೇಟಿ ನೀಡುವ ಕನ್ನಡಿಗರೊಂದಿಗೆ ಸುಲಲಿತವಾಗಿ ಸಂವಹನ ನಡೆಸಲು ಅನುಕೂಲವಾಗಲಿ ಎಂಬ ಉದ್ದೇಶದಿಂದ “ಕನ್ನಡ ಕಲಿಕಾ’ ತರಗತಿಗಳನ್ನು ಆಯೋ ಜಿಸುತ್ತಿದೆ. ಅದರ ಪ್ರಾರಂಭಿಕ ಭಾಗವಾಗಿಯೇ ಕೇಂದ್ರ ಸರ್ಕಾರ ಸ್ವಾಮ್ಯದ ನಿಮ್ಹಾನ್ಸ್ ಆಸ್ಪತ್ರೆಯಲ್ಲಿರುವ ಕನ್ನಡೇತರ ಭಾಷೆಯ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ತರಗತಿಗಳನ್ನು ಆರಂಭಿಸಿದೆ.
150 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ: ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಹಿಂದಿ, ಮಲಯಾಲಂ ಸೇರಿದಂತೆ ಹಲವು ಭಾಷೆಯ ವಿದ್ಯಾರ್ಥಿಗಳು ನರ್ಸಿಂಗ್ ಕಲಿಕೆಯಲ್ಲಿ ತೊಡಗಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಅಲ್ಲಿರುವ ನರ್ಸಿಂಗ್ ವಿದ್ಯಾರ್ಥಿಗಳು ಕೂಡ ಕನ್ನಡ ಕಲಿಕೆಗೆ ಆಸಕ್ತಿ ತೋರಿದ್ದಾರೆ. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನಿಮ್ಹಾನ್ಸ್‌ನ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ಕನ್ನಡ ಕಲಿಕಾ ತರಗತಿಗಳನ್ನು ಪ್ರಾರಂಭಿಸಿದೆ. ಸುಮಾರು 150 ನರ್ಸಿಂಗ್ ವಿದ್ಯಾರ್ಥಿಗಳು ಕನ್ನಡ ಕಲಿಕೆಯಲ್ಲಿ ತೊಡಗಿದ್ದು, ಆಸಕ್ತಿಯಿಂದ ಕಲಿಯುತ್ತಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜಧಾನಿಯ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ನರ್ಸ್ ಗಳಿಗೆ ಮತ್ತು ವೈದ್ಯರಿಗೆ ಕನ್ನಡ ಭಾಷೆ ಬರುತ್ತಿಲ್ಲ. ಅಂತಹ ಆಸ್ಪತ್ರೆಗೆ ಆರೋಗ್ಯ ಸೇವೆ ಪಡೆಯಲು ಹೋದ ಕನ್ನಡಿಗರು ತೊಂದರೆ ಅನುಭವಿಸಿರುವ ಸನ್ನಿವೇಶಗಳಿವೆ. ಇತ್ತೀಚೆಗ ಕನ್ನಡದ ಹಿರಿಯ ಸಾಹಿತಿಯೊಬ್ಬರು ಅನಾರೋಗ್ಯದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ಕನ್ನಡ ಬಾರದ ದಾದಿಯರು ಮತ್ತು ವೈದ್ಯರು ಜತೆಗೆ ಸರಿಯಾಗಿ ಸಂಹವನ ನಡೆಸಲಾಗದೆ ತೊಂದರೆ ಅನುಭವಿಸಿದ್ದರು. ಜತೆಗೆ ಸಂವ ಹನ ನಡೆಸಲು ಸಾಧ್ಯವಾಗದೆ ಪರಿತಪಿಸಿದ ಸನ್ನಿವೇಶವನ್ನು ಪ್ರಾಧಿಕಾರದ ಗಮನಕ್ಕೂ ತಂದಿದ್ದಾರೆ. ಈ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನೇಮಕಾತಿ ಮಾಡುವಾಗ ಶೇ.60ರಷ್ಟಾದರೂ ಕನ್ನಡರಿಗೆ ಆದ್ಯತೆ ನೀಡಬೇಕು ಎಂದು ಪ್ರಾಧಿಕಾರವು ಸರ್ಕಾರಕ್ಕೆ ಒತ್ತಾಯ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕನ್ನಡ ಕಲಿಸಿ: ಪ್ರಾಧಿಕಾರಕ್ಕೆ ಕೇರಳ ನರ್ಸ್‌ಗಳಿಂದ ಬೇಡಿಕೆ
ಬೆಂಗಳೂರಿನ ಕೆಲವು ಪ್ರದೇಶಗಳಲ್ಲಿ ಕೇರಳಿಗರು ಹೆಚ್ಚಿನ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಚಹಾ ಮಾರಾಟದಿಂದ ಉದ್ಯಮದ ವಲಯದಲ್ಲಿ ತೊಡಗಿ ಸಿಕೊಂಡಿದ್ದಾರೆ. ಜತೆಗೆ ಹಲವು ಖಾಸಗಿ ಆಸ್ಪತ್ರೆಗಳಲ್ಲಿ ನರ್ಸ್‌ಗಳಾಗಿ ಹಲ ವರು ಕಾರ್ಯ ನಿರ್ವಹಿಸುತ್ತಿದ್ದಾರೆ. ಭವಿಷ್ಯದ ದೃಷ್ಟಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇರಳಿಗರು ಕನ್ನಡ ಭಾಷೆ ಕಲಿಕೆಗೆ ಆಸಕ್ತಿ ಹೊಂದಿದ್ದು, ಕನ್ನಡ ಕಲಿಕಾ ತರಗತಿ ಆರಂಭಿಸುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮನವಿ ಮಾಡಿದ್ದಾರೆ ಎಂದು ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಈಗಾಗಲೇ ಮಾಗಡಿ ರಸ್ತೆಯ ಖಾಸಗಿ ನರ್ಸಿಂಗ್ ಹೋಮ್ ನಲ್ಲಿ 150 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ತರಗತಿಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು ಆಸಕ್ತಿಯಿಂದ ಕನ್ನಡ ಕಲಿಯು ತ್ತಿದ್ದಾರೆ. ಬೆಂಗಳೂರಿನ ಕೇರಳ ಸಮಾಜದವರು ಕೂಡ ಕನ್ನಡ ಕಲಿಕಾ ತರಗತಿಗಳನ್ನು ಮತ್ತಷ್ಟು ನಡೆಸುವಂತೆ ಮನವಿ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಲಯಾಳಂ ಮತ್ತು ಕನ್ನಡ ಭಾಷೆ ಬಲ್ಲ 25 ಮಂದಿಯನ್ನು ಆಯ್ಕೆ ಮಾಡಿ ಅವರಿಗೆ ಕನ್ನಡ ಕಲಿತಾ ತರಗತಿಗಳನ್ನು ನಡೆಸುವ ಬಗ್ಗೆ ತರಬೇತಿ ನೀಡಲಾಗಿದೆ. ಕೆಲವು ಖಾಸಗಿ ಬ್ಯಾಂಕ್‌ಗಳು ಕೂಡ ನಮ್ಮ ಸಂಸ್ಥೆಯ ಸಿಬ್ಬಂದಿಗೆ ಕನ್ನಡ ಕಲಿಕಾ ತರಗತಿ ಆರಂಭಿಸಿ ಎಂದು ಮನವಿ ಮಾಡಿವೆ ಎಂದು ತಿಳಿಸಿದ್ದಾರೆ.
ನಗರದ ಹಲವು ಖಾಸಗಿ ಆಸ್ಪತ್ರೆ ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾದಿಯರು ಕಾರ್ಯ ನಿರ್ವಹಿಸು ತ್ತಿದ್ದಾರೆ. ಅಂತಹ ಆಸ್ಪತ್ರೆಗಳಿಗೆ ಆರೋಗ್ಯ ಸೇವೆಗಾಗಿ ಭೇಟಿ ನೀಡುವ ಕನ್ನಡಿಗರ ಜತೆಗೆ ಸುಲಭವಾಗಿ ಸಂವಹನಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಪ್ರಾಧಿಕಾರವು ಕನ್ನಡ ಕಲಿಕಾ ಆಸಕ್ತಿ ಹೊಂದಿದ ನರ್ಸಿಂಗ್ ಹೋಮ್ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ತರಗತಿಗಳನ್ನು ಉಚಿತವಾಗಿ ನಡೆಸಲಿದೆ. ನಿಮ್ಹಾನ್ಸ್ ಆಸ್ಪತ್ರೆಯಲ್ಲಿರುವ ಕನ್ನಡೇತರ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕಾ ತರಗತಿ ಆರಂಭಿಸಲಾಗಿದೆ. ●ಡಾ.ಪುರುಷೋತ್ತಮ ಬಿಳಿಮಲೆ, ಅಧ್ಯಕ್ಷರು, ಕನ್ನಡ ಅಭಿವೃದ್ಧಿ ಪ್ರಾಧಿಕಾರ
■ ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.