Bengaluru: ಲಾಲ್‌ಬಾಗ್ ಪ್ರವೇಶ ಶುಲ್ಕ 50 ರೂಪಾಯಿಗೆ ಏರಿಕೆ
ಸಸ್ಯಕಾಶಿಯಲ್ಲಿ 6 ವರ್ಷಗಳ ನಂತರ ಶುಲ್ಕ ಹೆಚ್ಚಳ ; ಮಕ್ಕಳಿಗೆ 20 ರೂ. ಪ್ರವೇಶ ಶುಲ್ಕ
Team Udayavani, Nov 9, 2024, 4:05 PM IST
ಬೆಂಗಳೂರು: ತೋಟಗಾರಿಕೆ ಇಲಾಖೆಯು ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಸಾರ್ವಜನಿಕರ ಪ್ರವೇಶ ಶುಲ್ಕ ಹಾಗೂ ವಾಹನಗಳ ನಿಲುಗಡೆ ಶುಲ್ಕವನ್ನು ಹೆಚ್ಚಿಸಲಾ ಗಿದೆ. ಇದೀಗ, ವಯಸ್ಕರಿಗೆ 50 ರೂ. ಮತ್ತು ಮಕ್ಕಳಿಗೆ 20 ರೂ. ಪ್ರವೇಶ ದರವನ್ನು ನಿಗದಿಪಡಿಸಲಾಗಿದೆ.
2018ರಲ್ಲಿ ನಿಗದಿ ಪಡಿಸಿದ್ದ ದರವನ್ನು 6 ವರ್ಷಗಳ ನಂತರ ಏರಿಕೆ ಮಾಡಲಾಗಿದೆ. ಈ ಹಿಂದೆ ವಯಸ್ಕರರಿಗೆ ತಲಾ 30ರೂ. ಹಾಗೂ ಮಕ್ಕಳಿಗೆ 10 ರೂ. ಪ್ರವೇಶ ದರ ಇತ್ತು. ಇದನ್ನು ವಯಸ್ಕರಿಗೆ 50 ರೂ. ಮತ್ತು ಮಕ್ಕಳಿಗೆ 20 ರೂ.ಗಳಿಗೆ ಏರಿಸಲಾಗಿದೆ. ಅದೇ ರೀತಿ, ವಾಹನ ನಿಲುಗಡೆ ದರದಲ್ಲಿಯೂ ಏರಿಕೆ ಮಾಡಿದ್ದು, ಕಾರು ನಿಲುಗಡೆಗೆ 40ರೂ. ಇದ್ದದ್ದನ್ನು 60ರೂ.ಗೆ, ಟೆಂಪೋ ಟ್ರಾವೆಲ್ 80ರಿಂದ 100ರೂ.ಗಳಿಗೆ ಮತ್ತು ಬಸ್‌ಗಳಿಗೆ 120ರಿಂದ 200ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ದ್ವಿಚಕ್ರ ವಾಹನ ನಿಲುಗಡೆ ದರ ಬದಲಾಯಿಸಿಲ್ಲ.
ನಿರ್ವಹಣಾ ಕಾರ್ಯ, ನೀರಿನ ನಿರ್ವಹಣೆ, ವಿದ್ಯುತ್ ಬಳಕೆ, ಭದ್ರತಾ ವ್ಯವಸ್ಥೆಯ ವೆಚ್ಚ ವರ್ಷದಿಂದ ವರ್ಷಕ್ಕೆ ದುಬಾರಿಯಾಗುತ್ತಿದೆ. ಜತೆಗೆ ಲಾಲ್‌ಬಾಗ್‌ಗೆ ಭೇಟಿ ನೀಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಹೀಗಾಗಿ ಉದ್ಯಾನದ ಸ್ವತ್ಛತೆ ಕಾರ್ಯವೂ ಅಧಿಕವಾಗುತ್ತದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಪ್ರವೇಶ ದರ ಹೆಚ್ಚಳ ಮಾಡಲಾಗಿದೆ ಎಂದು ತೋಟಗಾರಿಕೆ ಇಲಾಖೆ (ಲಾಲ್‌ಬಾಗ್) ಜಂಟಿ ನಿರ್ದೇಶಕ ಡಾ. ಎಂ.ಜಗದೀಶ್ ತಿಳಿಸಿದ್ದಾರೆ.
ವಾದ್ಯರಂಗ ನವೀಕರಣಕ್ಕೆ ತಜ್ಞರ ಸಭೆ: ಪರಿಸರ ತಜ್ಞ ಯಲ್ಲಪ್ಪ ರೆಡ್ಡಿ ಅಧ್ಯಕ್ಷತೆಯಲ್ಲಿ ಮೊದಲ ಸಭೆ ನಡೆಸಲಾ ಗಿದ್ದು, ಫ್ಲೈವುಡ್ ಸಂಶೋಧನಾ ಕೇಂದ್ರದಿಂದಲೂ ವರದಿ ಸಲ್ಲಿಸುವುದು ಬಾಕಿಯಿದೆ. ಬಳಿಕ ಪುರಾತತ್ವ ಇಲಾಖಾ ತಜ್ಞರಿಂದ ಸಭೆ ಜರುಗಲಿದೆ. ಅವರ ಅಭಿಪ್ರಾಯವನ್ನು ಪಡೆದು ಮುಂದಿನ ವಾರದಲ್ಲಿ 2ನೇ ಸಭೆ ನಡೆಯಲಿದ್ದು, ಒಟ್ಟಾರೆ ತಜ್ಞರ ಸಲಹೆ ಮೇರೆಗೆ ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಜಗದೀಶ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ
Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ
Bengaluru: ನಗರದ ಐಬಿಸ್ ಹೋಟೆಲ್‌ಗೆ ಬಾಂಬ್ ಬೆದರಿಕೆ; ಗ್ರಾಹಕರ ಆತಂಕ
Bengaluru: ಕುಡಿದು ಸ್ಕೂಲ್ ಬಸ್ ಓಡಿಸಿದ ಚಾಲಕರ ಲೈಸೆನ್ಸ್ ಅಮಾನತು
Bengaluru: ಬಸ್ ಚೇಸ್ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ
MUST WATCH
ಹೊಸ ಸೇರ್ಪಡೆ
Ripponpete: ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
Gangolli: ಪಿಸ್ತೂಲ್ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು
Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್.ಎಸ್.ಬಲ್ಲಾಳ್
Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್ ಸಿ. ಡಿ’ಸೋಜಾ ಇನ್ನಿಲ್ಲ
Brahmavara: ಲಾಕ್‌ಅಪ್ ಡೆತ್ ಪ್ರಕರಣ: ಮರಣೋತ್ತರ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.