Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
40 ಸಾಕ್ಷ್ಯ, 60 ಹೇಳಿಕೆ ಒಳಗೊಂಡ 900 ಪುಟಗಳ ಆರೋಪಪಟ್ಟಿ ಕೋರ್ಟ್‌ಗೆ ಸಲ್ಲಿಸಲು ಪೊಲೀಸರ ತಯಾರಿ
Team Udayavani, Nov 8, 2024, 12:33 PM IST
ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಗುರುವಾರ ಸಂತ್ರಸ್ತೆಯನ್ನು ವಿಕಾಸಸೌಧಕ್ಕೆ ಕರೆದೊಯ್ದು ಸ್ಥಳ ಮಹಜರು ನಡೆಸಿದರು.
ಮತ್ತೂಂದೆಡೆ ಪ್ರಕರಣದ ತನಿಖೆ ಕೊನೆಯ ಹಂತಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ಕೆಲವೇ ದಿನಗಳಲ್ಲಿ ಎಸ್ ಐಟಿ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಿದ್ದಾರೆ.
ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ವಿಕಾಸಸೌಧಕ್ಕೆ ಸಂತ್ರಸ್ತೆಯನ್ನು ಕರೆತಂದ ಎಸ್‌ಐಟಿ ಅಧಿಕಾರಿಗಳ ತಂಡ, ಈ ಹಿಂದೆ ತೋಟಗಾರಿಕೆ ಸಚಿವರಾಗಿದ್ದ ಸಂದರ್ಭದಲ್ಲಿ ಮುನಿರತ್ನಗೆ ನೀಡಿದ್ದ, ಸದ್ಯ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್‌ಗೆ ನೀಡಿರುವ 3ನೇ ಮಹಡಿಯ 334ನೇ ಕೋಣೆಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದರು.
ಸಂತ್ರಸ್ತೆಯಿಂದ ಲಿಖಿತ ಮತ್ತು ಮೌಖಿಕ ಹೇಳಿಕೆ: ಯಾವ ಸ್ಥಳದಲ್ಲಿ ನಿಮ್ಮ ಮೇಲೆ ಶಾಸಕ ಮುನಿರತ್ನ ಲೈಂಗಿಕ ದೌರ್ಜನ್ಯ ಎಸಗಿದರು? ಎಂಬುದು ಸೇರಿ ವಿವಿಧ ಪ್ರಶ್ನೆಗಳನ್ನು ಕೇಳಿ, ಸಂತ್ರಸ್ತೆಯಿಂದ ಲಿಖಿತ ಮತ್ತು ಮೌಖಿಕ ಹೇಳಿಕೆ ಪಡೆದುಕೊಂಡರು. ಬಳಿಕ ಅದನ್ನು ವಿಡಿಯೋ ಕೂಡ ಮಾಡಿಕೊಳ್ಳಲಾಯಿತು. ಹೀಗೆ ಮಧ್ಯಾಹ್ನ 1.30ರವರೆಗೆ ಕೋಣೆಯಲ್ಲೇ ಸ್ಥಳ ಮಹಜರು ನಡೆಸಿದ ಅಧಿಕಾರಿಗಳು, ಬಳಿಕ ಸಿಐಡಿ ಕಚೇರಿಗೆ ಕರೆದೊಯ್ದು ಮತ್ತೂಮ್ಮೆ ವಿಚಾರಣೆ ನಡೆಸಿ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ವಿಕಾಸಸೌಧದಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪ ಮಾಡಿದ್ದ ಸಂತ್ರಸ್ತೆ: ಈ ಹಿಂದೆ ಸಂತ್ರಸ್ತೆ ಕಗ್ಗಲೀಪುರ ಠಾಣೆಯಲ್ಲಿ ದೂರು ನೀಡುವಾಗ, ಶಾಸಕ ಮುನಿರತ್ನ ಸಚಿವರಾಗಿದ್ದಾಗ ವಿಕಾಸಸೌಧದಲ್ಲಿ ನೀಡಲಾಗಿದ್ದ ಅವರ ಕೊಠಡಿಯಲ್ಲೂ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದರು. ಅಲ್ಲಿಯಿಂದಲೇ ತನಗೆ ವಿಡಿಯೋ ಕಾಲ್ ಮಾಡಿ ನಗ್ನವಾಗುವಂತೆ ಪೀಡಿಸುತ್ತಿದ್ದರು ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯನ್ನು ಕರೆ ತಂದು ಮಹಜರು ಮಾಡಲಾಗಿದೆ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.
ಕೆಲವೇ ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಕೆ
ಸೆ.18ರಂದು ಸಂತ್ರಸ್ತೆ ದೂರಿನ ಅನ್ವಯ ಕಗ್ಗಲೀಪುರ ಠಾಣೆ ಪೊಲೀಸರು ಸೆ.21ರಂದು ಮುನಿರತ್ನರನ್ನು ಬಂಧಿಸಿದ್ದರು. ಬಳಿಕ ಆರೋಪಿ ಹಾಗೂ ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿದ್ದರು. ಬಳಿಕ ಮೊಬೈಲ್ ಗಳನ್ನು ಜಪ್ತಿ ಮಾಡಿ, ವಿಧಿವಿಜ್ಞಾನ ಪ್ರಯೋಗಾಲಯಕ್ಕೂ ಕಳುಹಿಸಿದ್ದರು. ಅಲ್ಲದೆ, ಮುನಿರತ್ನರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದರು. ಇದೀಗ ವಿಧಿವಿಜ್ಞಾನ ಪ್ರಯೋಗಾಲಯದ ವರದಿಗಳು ಹಾಗೂ ವೈದ್ಯಕೀಯ ವರದಿಗಳು ತನಿಖಾ ತಂಡಕ ಕೈ ಸೇರಿದೆ. ಜತೆಗೆ ಸಂತ್ರಸ್ತೆ ಆರೋಪಿಸಿದಂತೆ ಮುನಿರತ್ನ ಮತ್ತು ತಂಡ ಯಾವ ರೀತಿ ಹನಿಟ್ರ್ಯಾಪ್ ಮಾಡುತ್ತಿದ್ದರು. ಅದಕ್ಕಾಗಿ ಯಾವ ಕೋಣೆಯಲ್ಲಿ, ಯಾವ ಭಾಗದಲ್ಲಿ ರಹಸ್ಯ ಕ್ಯಾಮೆರಾ ಇಡುತ್ತಿದ್ದರು ಸೇರಿ ಸಾಕಷ್ಟು ಮಾಹಿತಿ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಭಾಗಶಃ ತನಿಖೆ ಪೂರ್ಣಗೊಳಿಸಿರುವ ಎಸ್‌ಐಟಿ ಅಧಿಕಾರಿ ಗಳು, ಸುಮಾರು 60ಕ್ಕೂ ಹೆಚ್ಚು ಸಾಕ್ಷಿಗಳ ಹೇಳಿಕೆ, 40ಕ್ಕೂ ಹೆಚ್ಚು ಸಾಕ್ಷ್ಯಗಳು ಸೇರಿ ಅಂದಾಜು 900ಕ್ಕೂ ಹೆಚ್ಚು ಪುಟಗಳ ಆರೋಪಪಟ್ಟಿಯನ್ನು ಇನ್ನು 20 ದಿನಗಳಲ್ಲಿ ಕೋರ್ಟ್‌ಗೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
Bengaluru: ಮಾದಾವರ ವಿಸ್ತರಿತ ಮೆಟ್ರೊದಲ್ಲಿ ಮೊದಲ ದಿನ 16000 ಜನ ಪ್ರಯಾಣ
Bengaluru: ಅಪರಾಧ, ರೌಡಿಸಂ ನಿಯಂತ್ರಣಕ್ಕೆ ಕಠಿಣ ಕ್ರಮಕೈಗೊಳ್ಳಿ: ಡಿಜಿಪಿ ಸೂಚನೆ
MUST WATCH
ಹೊಸ ಸೇರ್ಪಡೆ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Cricket: ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Aligarh ಮುಸ್ಲಿಮ್ ವಿವಿ ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.