Bengaluru: ಕೌಟುಂಬಿಕ ವಿಚಾರಕ್ಕೆ ವೃದ್ಧ ದಂಪತಿ ಆತ್ಮಹತ್ಯೆ
ಮಗನ ಮಧ್ಯೆ ಮನಸ್ತಾಪ ಬಂದು ಅವರಿದ್ದ ಕಟ್ಟಡ 3ನೇ ಮಹಡಿಯಲ್ಲಿ ಪ್ರತ್ಯೇಕ ವಾಸ
Team Udayavani, Feb 23, 2024, 2:51 PM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ವೃದ್ಧ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.
ಬನಶಂಕರಿ 3ನೇ ಹಂತದ ಇಟ್ಟಮಡು ಮುಖ್ಯರಸ್ತೆಯ ಕೃಷ್ಣಯ್ಯ ಲೇಔಟ್ ನಿವಾಸಿ ಕೃಷ್ಣನಾಯ್ಡು(84) ಮತ್ತು ಅವರ ಪತ್ನಿ ಸರೋಜಮ್ಮ(74) ಆತ್ಮಹತ್ಯೆ ಮಾಡಿಕೊಂಡವರು.
ಘಟನೆಗೆ ಕೌಟುಂಬಿಕ ಕಾರಣ ಎಂದು ಹೇಳಲಾಗಿದ್ದು, ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ತಮಿಳುನಾಡು ಮೂಲದ ಕೃಷ್ಣನಾಯ್ಡು ಮತ್ತು ಸರೋಜಮ್ಮ ಹತ್ತಾರು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಕೃಷ್ಣಯ್ಯ ಲೇಔಟ್‌ನಲ್ಲಿ ಸ್ವಂತ ಮೂರು ಅಂತಸ್ತಿನ ಕಟ್ಟಡದಲ್ಲಿ ನೆಲ ಮಾಳಿಗೆಯಲ್ಲಿ ವಾಸವಾಗಿದ್ದರು.
ದಂಪತಿಗೆ ಒಬ್ಬ ಗಂಡು ಮತ್ತು ಒಬ್ಬ ಮಗಳು ಇದ್ದಾರೆ. ಮಗಳಿಗೆ ಮದುವೆಯಾಗಿದ್ದು, ಪ್ರತ್ಯೇಕವಾಗಿ ಕುಟುಂಬದ ಜತೆ ಬೇರೆಡೆ ವಾಸವಾಗಿದ್ದಾರೆ. ಪುತ್ರ ಅಶೋಕ್ ಎಲೆಕ್ಟ್ರಿಷಿಯನ್ ಕೆಲಸ ಮಾಡಿಕೊಂಡಿದ್ದು, ಪತ್ನಿ ಮತ್ತು ಪೋಷಕರ ಜತೆ ಒಟ್ಟಿಗೆ ವಾಸವಾಗಿದ್ದರು.
ಈ ಮಧ್ಯೆ ಕೆಲ ತಿಂಗಳಿಂದ ಪುತ್ರ ಅಶೋಕ್ ಮತ್ತು ಪೋಷಕರ ನಡುವೆ ಕೌಟುಂಬಿಕ ವಿಚಾರವಾಗಿ ಜಗಳವಾಗಿತ್ತು. ಹೀಗಾಗಿ ವೃದ್ಧ ದಂಪತಿ ಕಟ್ಟಡದ ಮೂರನೇ ಮಹಡಿಯಲ್ಲಿರುವ ರೂಮ್ ನಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದು, ದಂಪತಿ ನಡುವೆಯೂ ಸಣ್ಣ-ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.
ಸೊಸೆ ಬಂದಾಗ ಬೆಳಕಿಗೆ: ಗುರುವಾರ ಬೆಳಗ್ಗೆ ಪುತ್ರ ಅಶೋಕ್ ಪತ್ನಿ ನೀರು ಹಿಡಿಯಲು ಮೂರನೇ ಮಹಡಿಗೆ ಹೋದಾಗ ರೂಮ್‌ನ ಕಿಟಕಿಗೆ ಪಂಚೆ ಕಟ್ಟಿರುವುದು ಪತ್ತೆಯಾಗಿದೆ. ಅನುಮಾನಗೊಂಡು ಸಮೀಪ ಹೋಗಿ ನೋಡಿದಾಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಪತಿ ಅಶೋಕ್‌ಗೆ ಮಾಹಿತಿ ನೀಡಿದ್ದಾರೆ. ನಂತರ ಅಶೋಕ್ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ತೆರಳಿದ ಪೊಲೀಸರು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೌಟುಂಬಿಕ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆತ್ಮಹತ್ಯೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆಂದು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Havyaka Mahasabha: ಡಿ.27ರಿಂದ ಬೆಂಗಳೂರಿನಲ್ಲಿ ತೃತೀಯ ವಿಶ್ವ ಹವ್ಯಕ ಸಮ್ಮೇಳನ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.