Bengaluru: ಸಿಎಂ ವಿರುದ್ಧ ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಖಾಸಗಿ ದೂರು
Team Udayavani, Sep 14, 2024, 12:14 PM IST
ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯ, ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಶುಕ್ರವಾರ ಜನಪ್ರತಿನಿಧಿ ನ್ಯಾಯಾಲಯದಲ್ಲಿ ಖಾಸಗಿ ದೂರು ನೀಡಿದ್ದಾರೆ.
2013-2018ರ ಅವಧಿಯಲ್ಲಿ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಪಾಲಿಕೆ ಒಡೆತನದ 493 ಬಸ್ ತಂಗುದಾಣಗಳನ್ನು ಬಳಸಿಕೊಂಡಿದ್ದರು. ಆದರೆ ಪಾಲಿಕೆಗೆ ರಾಜ್ಯ ಸರ್ಕಾರವು ಪಾವತಿಸಬೇಕಿದ್ದ 68.14 ಕೋಟಿ ರೂ. ಪಾವತಿಸದೆ ವಂಚಿಸಲಾಗಿದೆ ಎಂದು ದೂರಿದ್ದಾರೆ.
2015-2017ರ ವರ್ಷಗಳ ಅವಧಿಯಲ್ಲಿ ಬಿಬಿಎಂಪಿಯ 493 ಬಸ್ ಶೆಲ್ಟರ್‌ಗಳನ್ನು ತಮ್ಮ ಸರ್ಕಾರದ ಸಾಧನೆಗಳ ಪ್ರಚಾರ ಕಾರ್ಯಗಳಿಗೆಂದು ಬಳಸಿಕೊಂಡಿದ್ದಾರೆ. ಆದರೆ ಜಾಹೀರಾತು ಶುಲ್ಕ ಪಾವತಿಸಿಲ್ಲ. ಆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಲೋಕಾಯುಕ್ತದಲ್ಲಿ ದಾಖಲೆ ಸಹಿತ ದೂರು ದಾಖಲಿಸಲಾಗಿತ್ತು. ಆದರೆ ಪ್ರಕರಣ ವನ್ನು ಲೋಕಾಯುಕ್ತ ಮುಕ್ತಾಯಗೊಳಿಸಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.