Bengaluru: ಬೈಕ್‌ಗೆ ಲಾರಿ ಡಿಕ್ಕಿ : ಮೂವರು ವಿದ್ಯಾರ್ಥಿಗಳು ಸಾವು
ಪರಾರಿಯಾಗಿದ್ದ ಲಾರಿ ಚಾಲಕನ ಬಂಧನ
Team Udayavani, Sep 13, 2024, 8:24 AM IST
ಬೆಂಗಳೂರು: ಚಿಕ್ಕಜಾಲ ಏರ್‌ಪೋರ್ಟ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ಮೂವರು ಬಿಎಸ್ಸಿ ವಿದ್ಯಾರ್ಥಿಗಳಿಗೆ ಲಾರಿ ಡಿಕ್ಕಿ ಹೊಡೆದು ಅವರ ಮೇಲೆ ಹರಿದ ಪರಿಣಾಮ ದುರ್ಮರಣ ಹೊಂದಿದ್ದಾರೆ.
ಹೆಬ್ಟಾಳದ ಕೆಂಪಾಪುರದ ನಿವಾಸಿ ಸುಚಿತ್ (22), ಕೋಲಾರ ಜಿಲ್ಲೆಯ ಕೆಜಿಎಫ್ನ ಹರ್ಷವರ್ಧನ್ (21) ಹಾಗೂ ಚಿಕ್ಕಬಳ್ಳಾಪುರದ ರೋಹಿತ್(21) ಮೃತಪಟ್ಟ ವಿದ್ಯಾರ್ಥಿಗಳು.
ಈ ಮೂವರು ವಿದ್ಯಾರ್ಥಿಗಳೂ ಸ್ನೇಹಿತರಾಗಿದ್ದಾರೆ. ಜಿಕೆವಿಕೆಯಲ್ಲಿ ಬಿಎಸ್ಸಿ (ತೋಟಗಾರಿಕೆ)ಯ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಬುಧವಾರ ತಡರಾತ್ರಿ 1 ಗಂಟೆ ಸುಮಾರಿನಲ್ಲಿ ಮೂವರು ವಿದ್ಯಾರ್ಥಿಗಳೂ ಒಂದೇ ಬೈಕ್‌ನಲ್ಲಿ ಜಾಲಿರೈಡ್ ಹೋಗುತ್ತಿದ್ದರು. ಮಾರ್ಗಮಧ್ಯೆ ಏರ್‌ಪೋರ್ಟ್ ರಸ್ತೆಯ ಕೋಟೆ ಕ್ರಾಸ್ ಬಳಿ ಬಂದ ಲಾರಿ ಇವರ ಬೈಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಜೊತೆಗೆ ಮೂವರು ವಿದ್ಯಾರ್ಥಿಗಳು ರಸ್ತೆಗೆ ಬಿದ್ದಿದ್ದರು. ಆ ವೇಳೆ ಭಾರೀ ವಾಹನವು ಈ ಮೂವರು ವಿದ್ಯಾರ್ಥಿಗಳ ಮೇಲೆ ಹರಿದ ಪರಿಣಾಮ ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಹಿಂದಿನ ಚಕ್ರ ಮೂವರ ಮೇಲೆ ಹರಿದ ಪರಿಣಾಮ ದೇಹ ಛಿದ್ರಗೊಂಡಿರುವುದು ಕಂಡು ಬಂದಿದೆ.
ಲಾರಿ ನಂಬರ್ ಪತ್ತೆಹಚ್ಚಿ ಚಾಲಕ ವಶಕ್ಕೆ:
ಅಪಘಾತ ವೆಸಗಿದ ಬಳಿಕ ಲಾರಿ ಚಾಲಕ ವಾಹನ ನಿಲ್ಲಿಸದೇ ಪರಾರಿಯಾಗಿದ್ದಾನೆ. ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಮೂವರ ಮೃತ ದೇಹಗಳನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿ ಪ್ರಕ ರಣ ದಾಖಲಿಸಿಕೊಂಡಿದ್ದಾರೆ. ಅಪಘಾತ ಎಸಗಿದ ವಾಹನ ಹಾಗೂ ಚಾಲಕನ ಪತ್ತೆಗಾಗಿ ದುರ್ಘಟನೆ ನಡೆದ ಸ್ಥಳದ ಸುತ್ತಮುತ್ತಲಿರುವ ಸಿಸಿ ಕ್ಯಾಮೆರಾ ಗಳನ್ನು ಪೊಲೀಸರು ಪರಿಶೀಲಿಸಿದ್ದರು.
ನಂತರ ಟೋಲ್ ಸೇರಿದಂತೆ ವಿವಿಧೆಡೆಯ ಸಿಸಿ ಕ್ಯಾಮೆರಾ ಗಳಲ್ಲಿ ಸೆರೆಯಾಗಿದ್ದ ದೃಶ್ಯಾವಳಿ ಆಧರಿಸಿ ವಾಹನದ ನೋಂದಣಿ ಸಂಖ್ಯೆಯ ಸುಳಿವು ಸಿಕ್ಕಿತ್ತು. ಇದರ ಆಧಾರದ ಮೇಲೆ ಲಾರಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.
ವಿದ್ಯಾರ್ಥಿಗಳ ಪರ್ಸ್‌ನಲ್ಲಿದ್ದ ಗುರುತಿನ ಚೀಟಿ ಪರಿಶೀಲಿಸಿ ಪೊಲೀಸರು, ವಿದ್ಯಾರ್ಥಿಗಳ ವಿಳಾಸ ಪತ್ತೆ ಹಚ್ಚಿ ಅವರ ಪೋಷಕರಿಗೆ ಮಾಹಿತಿ ನೀಡಿದ್ದರು. ಅಪಘಾತದಲ್ಲಿ ತಮ್ಮ ಮಕ್ಕಳು ಮೃತಪಟ್ಟಿದ್ದಾರೆಂಬ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಪೋಷಕರು ಅಂಬೇಡ್ಕರ್ ಆಸ್ಪತ್ರೆ ಬಳಿ ದೌಡಾಯಿಸಿದರು. ಮಕ್ಕಳ ಮೃತದೇಹ ಕಂಡು ಪಾಲಕರು ರೋದಿಸುತ್ತಿದ್ದ ದೃಶ್ಯ ಮನಕುಲುಕುವಂತಿತ್ತು.
ಸೇಹಿತನ ಬರ್ತ್‌ಡೇ ಪಾರ್ಟಿ ಮುಗಿಸಿಕೊಂಡು ಜಾಲಿರೈಡ್
ಮೂಲಗಳ ಪ್ರಕಾರ, ಮೃತಪಟ್ಟಿರುವ ಮೂವರು ವಿದ್ಯಾರ್ಥಿಗಳು ಸೇರಿದಂತೆ ಐವರು ವಿದ್ಯಾರ್ಥಿಗಳು ಬುಧವಾರ ತಡರಾತ್ರಿ ಏರ್‌ಪೋರ್ಟ್ ರಸ್ತೆ ಬಳಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಿದ್ದರು. ತಡರಾತ್ರಿ ವರೆಗೂ ನಡೆದ ಪಾರ್ಟಿ ಮುಗಿಸಿಕೊಂಡು ಜಾಲಿ ರೈಡ್ ಹೊರಟಿದ್ದರು ಎನ್ನಲಾಗಿದೆ. ಈ ಪೈಕಿ ಒಂದು ಬೈಕ್‌ನಲ್ಲಿ ಮೂವರು ಹಾಗೂ ಮತ್ತೂಂದು ಬೈಕ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ಲಾಂಗ್‌ಡ್ರೈವ್ ಹೋಗುತ್ತಿದ್ದಾಗ ದುರ್ಘಟನೆ ನಡೆಸಿದೆ ಎಂಬ ಶಂಕೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Dhanashree Verma: ಯಶ್ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.