Bengaluru: ಅವಶೇಷಗಳಡಿ ಒಬ್ಬ ಕಾರ್ಮಿಕನಿಗೆ ಶೋಧ
Team Udayavani, Oct 25, 2024, 11:54 AM IST
ಬೆಂಗಳೂರು: ಬಾಬುಸಾಬ್ ಪಾಳ್ಯದ 7 ಅಂತಸ್ತಿನ ಕಟ್ಟಡ ಕುಸಿತದಿಂದ ಅವಶೇಷ ಗಳಡಿ ಸಿಲುಕಿದ್ದ ಕಾರ್ಮಿಕನಿಗಾಗಿ ನಡೆಯುತ್ತಿದ್ದ ಶೋಧ ಕಾರ್ಯವನ್ನು ಗುರುವಾರ ರಾತ್ರಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಅಗ್ನಿಶಾಮಳ ದಳ, ಎನ್ ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಸಿಬ್ಬಂದಿ ಸತತ 3 ದಿನಗಳಿಂದ ಅವಶೇಷಗಳನ್ನು ತೆರವುಗೊಳಿಸಿ ಶೋಧಿಸಿದರು. ಏಳುಮಲೈ ಹಾಗೂ ಗಜೇಂದ್ರ ಎಂಬ ಇಬ್ಬರು ಕಾರ್ಮಿಕರಿಗಾಗಿ ಶೋಧ ನಡೆಸಲಾಗುತ್ತಿತ್ತು.
ಆದರೆ, ರಕ್ಷಣೆಯಾದ ಸಹ ಕಾರ್ಮಿಕರನ್ನು ವಿಚಾರಣೆ ನಡೆಸಲಾಗಿದ್ದು, ಗಜೇಂದ್ರ ಹೆಸರಿನ ಕಾರ್ಮಿಕ ಕಟ್ಟಡದಲ್ಲಿ ಕೆಲಸ ಮಾಡುತ್ತಿರಲಿಲ್ಲ ಎಂಬುದು ಗೊತ್ತಾಗಿದೆ. ಸದ್ಯಕ್ಕೆ ಮೇಸ್ತ್ರಿ ಏಳುಮಲೈಗಾಗಿ ಶೋಧ ನಡೆಸಲಾಗುತ್ತಿದೆ. ಕಟ್ಟಡ ಕುಸಿಯುವ ಸಂದರ್ಭದಲ್ಲಿ ಉಂಟಾದ ಜೋರು ಶಬ್ದದಿಂದ ಎಚ್ಚೆತ್ತು ವ್ಯಕ್ತಿಯೊಬ್ಬ ಓಡಿ ಹೋಗುತ್ತಿರುವ ದೃಶ್ಯ ಪಕ್ಕದ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸೆರೆಯಾದ ದೃಶ್ಯದಲ್ಲಿ ವ್ಯಕ್ತಿಯ ಚಹರೆ ಪತ್ತೆ ಆಗುತ್ತಿಲ್ಲ. ಕಟ್ಟಡ ಕುಸಿಯುವುದಕ್ಕೂ ಕೆಲವೇ ನಿಮಿಷಗಳ ಹಿಂದೆ ಏಳುಮಲೈ ಮೊಬೈಲ್ ಅನ್ನು ಕಟ್ಟಡದಲ್ಲಿಯೇ ಬಿಟ್ಟು ಹೊರಗೆ ತೆರಳಿರುವ ಸಾಧ್ಯತೆಯೂ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ಧಾರೆ. ಅವಶೇಷಗಳನ್ನು ಸಂಪೂರ್ಣ ತೆರವುಗೊಳಿಸದ ಬಳಿಕವಷ್ಟೇ ಏಳುಮಲೈ ತಪ್ಪಿಸಿಕೊಂಡಿದ್ಧಾರೆಯೇ ಅಥವಾ ಅವಶೇಷಗಳ ಅಡಿ ಸಿಲುಕಿಕೊಂಡಿದ್ಧಾರೆಯೇ ಎಂಬುದು ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.