Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ
ಖಾಸಗಿ ಸಂಸ್ಥೆ, ಪಾಲಿಕೆಯಿಂದ ಜಂಟಿಯಾಗಿ ಕಟ್ಟಡ ಸರ್ವೆ ; ಅಕ್ರಮ ಕಟ್ಟಡ ನಿರ್ಮಾಣ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ
Team Udayavani, Oct 25, 2024, 2:25 PM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳ ಬಗ್ಗೆ ಅ.28ರಿಂದ (ಸೋಮವಾರ) ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಯಲಿದ್ದು, ಯಾವುದಾದರೂ ಕಟ್ಟಡ ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆ ಹಚ್ಚಲಾಗುವುದು ಎಂದು ಬೆಂಗಳೂರು ಉಸ್ತು ವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಅತಿವೃಷ್ಟಿ ಯಿಂದ ಉದ್ಬವಿಸುವ ಸಮಸ್ಯೆ ಗಳ ಶಾಶ್ವತ ಪರಿಹಾರದ ಸಂಬಂಧ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಬಿಬಿಎಂಪಿ ಹಿರಿಯ ಅಧಿ ಕಾರಿಗಳ ಸಭೆ ನಡೆಸಿ ಬಳಿಕ ಮಾತನಾಡಿದರು. ಅಕ್ರಮ ಕಟ್ಟಡ ನಿರ್ಮಾಣ ತಡೆಯುವ ನಿಟ್ಟಿನಲ್ಲಿ ಕೆಲಸ ನಡೆಯಲಿದೆ. ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುವುದು. ಜಂಟಿ ಆಯುಕ್ತರ ನೇತೃತ್ವದಲ್ಲಿ ಡ್ರೋನ್ ಮೂಲಕ ಇದರ ಮೇಲ್ವಿಚಾರಣೆ ಮಾಡಲಾಗುವುದು ಎಂದರು.
ಬಿಎಂಆರ್‌ಡಿಎ ಹಾಗೂ ಬಿಎಂಟಿಎಫ್ ವ್ಯಾಪ್ತಿ ಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ಸೇರಲಿದ್ದು, ಈ ಪ್ರದೇಶಗಳಲ್ಲಿ ಅಕ್ರಮ ಕಟ್ಟಡ ನಿರ್ಮಾಣ ನಿಲ್ಲಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲಾ ಚರಂಡಿಗಳ ಹೂಳೆತ್ತಲಾಗುವುದು. ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಪರ್ಯಾಯ ವ್ಯವಸ್ಥೆ ಕಲ್ಪಿಸುತ್ತೇವೆ ಎಂದು ತಿಳಿಸಿದರು.
ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ: ಎಲ್ಲೆಲ್ಲಿ ಮಳೆ ನೀರು ವಸತಿ ಪ್ರದೇಶಗಳಿಗೆ ನುಗ್ಗಿ ಸಮಸ್ಯೆ ಎದುರಾಗುತ್ತಿದೆಯೋ ಅಲ್ಲಿ ಪರಿಹಾರಕ್ಕೆ ಯೋಜನೆ ರೂಪಿಸಿ, ಅದಕ್ಕೆ ಅಗತ್ಯವಿರುವ ಹಣಕಾಸಿನ ಅಂದಾಜನ್ನು ನೀಡಲು ವಲಯವಾರು ಆಯುಕ್ತರು, ಮುಖ್ಯ ಎಂಜಿನಿಯರ್ ಹಾಗೂ ಮಳೆನೀರುಗಾಲುವೆ ನಿರ್ವಹಣೆ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸಮಿತಿ ರಚಿಸಲಾಗಿದೆ. ಒಂದು ವಾರದ ಒಳಗಾಗಿ ವರದಿ ನೀಡುವಂತೆ ಸೂಚಿಸಲಾಗಿದೆ ಎಂದರು.
ರಾಜಕಾಲುವೆ ಅಕ್ಕಪಕ್ಕದಲ್ಲಿ 50 ಅಡಿಗಳಷ್ಟು ಅಂತರದಲ್ಲಿ ಯಾರೂ ಕಟ್ಟಡ ಕಟ್ಟು ವಂತಿಲ್ಲ. ಇಂತಹ ಜಾಗವನ್ನು ಗುರುತಿಸಿದ್ದು, ಇಲ್ಲಿ 300 ಕಿ.ಮೀ. ಉದ್ದದ ರಸ್ತೆ ನಿರ್ಮಿಸಲಾಗುವುದು ಎಂದರು.
ಅಧಿಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಅಗತ್ಯ ಕ್ರಮ ಕೈಗೊಳ್ಳಲು ನಮಗೆ ಸಂಪೂರ್ಣ ಅಧಿಕಾರವಿದೆ. ಈ ಪರಿಸ್ಥಿತಿಯಲ್ಲಿ ಸರ್ಕಾರ ಯಾವುದೇ ಆಸ್ತಿಯನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಂಡು ಕ್ರಮಕೈಗೊಳ್ಳಲು ಅಧಿಕಾರವಿದೆ. ಬಿಎಂಟಿಎಫ್, ಬಿಡಿಎ, ಬಿಬಿಎಂಪಿ, ಬಿಎಂಆರ್ ಡಿಎಗೆ ಕೆಲವು ತಿದ್ದುಪಡಿ ತಂದು ಅವರಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು. ಈ ಹಿಂದೆಯೂ ಅಧಿಕಾರ ವನ್ನು ಸಂಸ್ಥೆಗಳಿಗೆ ನೀಡಲಾಗಿತ್ತು. ಆದರೆ 2020-21ರ ಸಮಯದಲ್ಲಿ ಅದನ್ನು ಹಿಂಪಡೆ ಯಲಾಗಿತ್ತು. ಈಗ ಮತ್ತೆ ನೀಡಲಾಗುತ್ತಿದೆ, ಸುಗ್ರೀವಾಜ್ಞೆ ತರಲು ಗೃಹ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇವೆ. ಈ ವಿಚಾರವಾಗಿ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ ಅಧಿ ಕಾರಿಗಳಿಗೆ ಸಂಪೂರ್ಣ ಅಧಿಕಾರ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.