Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!
ಬಾಬುಸಾಪಾಳ್ಯ ಕಟ್ಟಡ ದುರಂತದಲ್ಲಿ ಸತ್ತವರ ಸಂಖ್ಯೆ 9ಕ್ಕೆ ಏರಿಕೆ ; 22 ಕಾರ್ಮಿಕರ ಪೈಕಿ 13 ಮಂದಿ ರಕ್ಷಣೆ
Team Udayavani, Oct 26, 2024, 3:25 PM IST
ಬೆಂಗಳೂರು: ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಉಂಟಾದ ದುರಂತದಲ್ಲಿ ಅವಶೇಷ ಗಳಡಿ ನಾಪತ್ತೆಯಾಗಿದ್ದ ಗುತ್ತಿಗೆದಾರ ಏಳುಮಲೈ ಶವ ಶುಕ್ರವಾರ ಪತ್ತೆಯಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ)ಯಿಂದ ಮೆಟಿರಿಯಲ್ ಸೈನ್ಸ್‌ನವರನ್ನು ಕರೆತಂದು ಕಟ್ಟಡದ ಅವಷೇಷಗಳ ಸ್ಯಾಂಪಲ್ ಸಂಗ್ರಹಿಸಿ ಕಾರ್ಯಾಚರಣೆ ಮಾಡಲಾಗಿದೆ. ಕಟ್ಟಡದೊಳಗೆ ಸಿಲುಕಿದ್ದ ಏಳುಮಲೈಗಾಗಿ ಶುಕ್ರವಾರ ಬೆಳಗ್ಗಿನಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಗುತ್ತಿಗೆದಾರ ಏಳುಮಲೈ ಮೊಬೈಲ್ ರಿಂಗ್ ಆಗುತ್ತಿತ್ತು. ಅವರ ಲೊಕೇಶನ್ ಟ್ರೇಸ್ ಮಾಡಿದಾಗ ಕಟ್ಟಡದ ಅವಶೇಷಗಳಡಿ ತೋರಿಸುತ್ತಿತ್ತು. ಇದರ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದಾಗ ಕಟ್ಟಡದ ಅವಶೇಷಗಳ ಒಳಗೆ ಏಳುಮಲೈ ಶವ ಪತ್ತೆಯಾಗಿದೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕಟ್ಟಡ ದುರಂತದಲ್ಲಿ ಇದುವರೆಗೆ ಏಳುಮಲೈ ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.
ಕಾರ್ಯಾಚರಣೆ ಮುಕ್ತಾಯ: ಇನ್ನುಳಿದಂತೆ ಕಟ್ಟಡದ ಒಳಗೆ ಬೇರೆ ಯಾರೂ ಸಿಲುಕಿರುವ ಸಾಧ್ಯತೆಗಳಿಲ್ಲ. ಹೀಗಾಗಿ ಕಾರ್ಯಾಚರಣೆಯನ್ನು ಮುಕ್ತಾಯಗೊ ಳಿಸಲಾಗಿದೆ ಎಂದು ಪೊಲೀಸ್ ಮೂಲ ಗಳು ತಿಳಿಸಿವೆ. ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡವರಿಗಾಗಿ 4 ದಿನಗಳಿಂದಲೂ 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಅಧಿ ಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. 13 ಮಂದಿಯನ್ನು ಇದುವರೆಗೂ ರಕ್ಷಿಸಲಾಗಿದೆ. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಿ ಶುಕ್ರವಾರ ಮುಂಜಾನೆಯಿಂದ ಮತ್ತೆ ಶೋಧ ಕಾರ್ಯ ಆರಂಭಿಸಲಾಗಿತ್ತು. ಸಂಬಂಧ ಕಟ್ಟಡ ಮಾಲಿಕ ಹಾಗೂ ಅವರ ಪುತ್ರ ಸೇರಿದಂತೆ ಮೂವರ ಮೇಲೆ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರನ್ನು ಬಂಧಿಸಲಾಗಿದೆ.
ಈ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ ಸುಮಾರು 22 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿ ದ್ದರು. ಕಟ್ಟಡ ಬಿದ್ದಿರುವ ವಿಚಾರ ಗೊತ್ತಾಗು ತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಎನ್‌ಡಿಆರ್ ಎಫ್, ಎಸ್‌ಡಿಆರ್‌ಎಫ್ ಪಡೆ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.
ನಂಜಪ್ಪ ಗಾರ್ಡನ್‌ನಲ್ಲಿ ವಾಲಿದ್ದ 5 ಅಂತಸ್ತಿನ ಕಟ್ಟಡ ನೆಲಸಮ!
ಬೆಂಗಳೂರು: ಮಹದೇವಪುರ ವಲಯದ ಹೊರಮಾವಿನ ನಂಜಪ್ಪ ಗಾರ್ಡನ್‌ನಲ್ಲಿ ಪುಟ್ಟಪ್ಪ ಎಂಬುವರು 10×25 ಅಡಿಯಲ್ಲಿ ಜಾಗದಲ್ಲಿ ನಿರ್ಮಿಸಿದ್ದ 5 ಅಂತಸ್ತಿನ ಕಟ್ಟಡ ವಾಲಿದ್ದರಿಂದ ಆ ಮನೆಯನ್ನೂ ಶುಕ್ರವಾರ ನೆಲಸಮ ಮಾಡಲಾಗಿದೆ. ಅಕ್ಕಪಕ್ಕದಲ್ಲಿ ಮನೆಗಳು ಇರುವ ಕಾರಣ ಕೆಲಸಗಾರರು ಸುತ್ತಿಗೆಯಿಂದ ಬಡಿದು ಕಟ್ಟಡವನ್ನು ಒಡೆದರು. ಮೇಲ್ಭಾಗ ಕಟ್ಟಡ ತೆರವು ಮುಗಿದ ಬಳಿಕ ಜೆಸಿಬಿ ಯಂತ್ರದಿಂದ ಕಾರ್ಯಾಚರಣೆ ಮಾಡಲಾಯಿತು.
ಕಟ್ಟಡ ತೆರವು ಮಾಡದಿದ್ದರೆ ಕ್ರಿಮಿನಲ್ ಪ್ರಕರಣ ದಾಖಲಿಸುವುಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ಮಾಲಿಕರೇ ಈ ಕಟ್ಟಡವನ್ನು ತೆರವು ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.