Bengaluru:ಮಹಿಳೆಯರ ಸುರಕ್ಷತೆಗಾಗಿ ರಾತ್ರಿ ಪಾಳಿಯಲ್ಲಿ ಸಂಚಾರ ಠಾಣೆ ಲೇಡಿ ಪೊಲೀಸ್ ಕರ್ತವ್ಯ
ರಾತ್ರಿ 100 ಮಹಿಳಾ ಪೊಲೀಸರಿಂದ ಕರ್ತವ್ಯ: ಅನುಚೇತ್
Team Udayavani, Aug 23, 2024, 2:32 PM IST
ಬೆಂಗಳೂರು: ನಗರದಲ್ಲಿ ರಾತ್ರಿ ವೇಳೆ ಮಹಿಳೆಯರ ನೆರವಿಗೆ ಮತ್ತು ಮಹಿಳಾ ಚಾಲಕರ ಅಪಘಾತ ಪ್ರಕರಣಗಳನ್ನು ನಿಯಂತ್ರಿಸಲು ಇನ್ನು ಮುಂದೆ ಮಹಿಳಾ ಸಂಚಾರ ಪೊಲೀಸರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಮಾಹಿತಿ ನೀಡಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರತಿ ಠಾಣೆಯಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಸೇರಿ ನಗರದಲ್ಲಿರುವ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ 100 ಮಂದಿ ಮಹಿಳಾ ಪೊಲೀಸರು ರಾತ್ರಿ ವೇಳೆ ಪಾಳಿ ರೀತಿಯಲ್ಲಿ ಕೆಲಸ ಮಾಡಲಿದ್ದಾರೆ.
ರಾತ್ರಿ ಮಹಿಳೆಯರ ಮೇಲಾಗುವ ದೌರ್ಜನ್ಯ ಹಾಗೂ ಅಪಘಾತ ಹಿನ್ನೆಲೆಯಲ್ಲಿ ನ್ಯಾಯ ಅರಸಿ ಠಾಣೆಗಳಿಗೆ ಬರುವ ಮಹಿಳೆಯರಿಗೆ ಠಾಣೆಯಲ್ಲೇ ಕೂತು ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸಿದರೆ, ಮತ್ತೂಬ್ಬ ಮಹಿಳಾ ಸಿಬ್ಬಂದಿ ಅಪಘಾತ ಸ್ಥಳದ ಪರಿಶೀಲನೆ, ಜನಸಂದಣಿ ಪ್ರದೇಶಗಳಲ್ಲಿ ಗಸ್ತು ಹಾಗೂ ಡ್ರಂಕ್ ಆ್ಯಂಡ್ ಡ್ರೈವ್ ತಪಾಸಣೆ ಮಾಡುವ ಪುರುಷ ಟ್ರಾಫಿಕ್ ಸಿಬ್ಬಂದಿಗೆ ಸಹಾಯಕರಾಗಿ ಕೆಲಸ ಮಾಡಲಿದ್ದಾರೆ.
ಡ್ರಂಕ್ ಆ್ಯಂಡ್ ಡ್ರೈವ್ನಿಂದ ಅಪಘಾತ ಪ್ರಕರಣಗಳ ಸಂಖ್ಯೆ ಕಳೆದ ಎರಡು ತಿಂಗಳಿಂದ ಹೆಚ್ಚಾಗಿರುವುದು ಕಂಡುಬಂದಿದೆ. ಇದನ್ನು ತಹಬದಿಗೆ ತರಲು ರಾತ್ರಿ ಪಾಳಿಯಲ್ಲಿ ಇಬ್ಬರು ಮಹಿಳಾ ಸಿಬ್ಬಂದಿ ಕಾರ್ಯನಿರ್ವಹಿಸಲು ನಿರ್ದೇಶನ ನೀಡಲಾಗಿದೆ ಎಂದು ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.