Bengaluru: ಶ್ರೀಗಳ ಪ್ರತಿಮೆ ವಿರೂಪ ಖಂಡಿಸಿ ವೀರಶೈವ ಸಭಾದಿಂದ ಪ್ರತಿಭಟನೆ
Team Udayavani, Dec 6, 2024, 2:41 PM IST
ಬೆಂಗಳೂರು: ಗಿರಿನಗರದ ವೀರಭದ್ರನಗರ ವೃತ್ತದ ಸಮೀಪದಲ್ಲಿರುವ ತುಮಕೂರು ಸಿದ್ಧಗಂಗಾ ಮಠದ ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಪ್ರತಿಮೆ ವಿರೂಪಗೊಳಿಸಿರುವುದನ್ನು ಖಂಡಿಸಿ ಅಖೀಲ ಭಾರತ ವೀರಶೈವ ಮಹಾಸಭಾದ ಬೆಂಗಳೂರು ಘಟಕದ ಕಾರ್ಯಕರ್ತರು ಪ್ರತಿಮೆ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.
ಅನುಮತಿ ಇಲ್ಲದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರತಿಭಟನಾ ನಿರತ 20ಕ್ಕೂ ಹೆಚ್ಚಿನ ಜನರನ್ನು ಪೊಲೀಸರು ವಶಕ್ಕೆ ಪಡೆದು ಬಿಎಂಟಿಸಿ ಬಸ್‌ನಲ್ಲಿ ಕರೆದೊಯ್ದು ಬಿಡುಗಡೆಗೊಳಿಸಿದ ಪ್ರಸಂಗವೂ ನಡೆಯಿತು. ಡಾ.ಶಿವಕುಮಾರ ಸ್ವಾಮೀಜಿ ಪ್ರತಿಮೆಯಯನ್ನು ನ.30ರಂದು ಕಿಡಿಗೇಡಿಗಳು ಹಾಗೂ ವಿಕೃತ ಮನಸ್ಸಿನವರು ವಿರೂಪಗೊಳಿಸಿದ್ದಾರೆ. ಇನ್ನು ಮುಂದೆ ಈ ರೀತಿಯ ಘಟನೆ ನಡೆಯದಂತೆ ತಡೆಯಲು, ಕಾನೂನು ಕ್ರಮ ಜರುಗಿಸಬೇಕು ಎಂದರು.
ಈ ವೇಳೆ ಮಾಜಿ ಉಪ ಮಹಾಪೌರ ಬಿ.ಎಸ್. ಪುಟ್ಟರಾಜು, ವೀರಶೈವ ಸಮುದಾಯದ ಮುಖಂಡ ಮಲ್ಲಿಕಾರ್ಜುನ್, ಬಿಜೆಪಿ ಮುಖಂಡ ಎಚ್.ಆರ್. ಮಲ್ಲಿಕಾರ್ಜುನ್, ಬೆಂಗಳೂರು ಘಟಕದ ಅಧ್ಯಕ್ಷ ಬಿ.ಆರ್. ನವೀನ್ ಕುಮಾರ್, ಎಂ.ಗುರುಮೂರ್ತಿ, ಪಿ.ವಿಜಯ್ ಕುಮಾರ್, ಎಚ್.ಆರ್.ಸ್ವರ್ಣಗೌರಿ, ಬಿ.ಎಂ.ಶಿವಕುಮಾರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.