Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
ಬಿಐಎಎಲ್‌ನಿಂದ 30 ಅಡಿ ಎತ್ತರ, 160 ಅಡಿ ಅಗಲದ 2 ಗೋಡೆ ಮೇಲೆ ದೇಶದಲ್ಲೇ ಅತಿದೊಡ್ಡ ಉದ್ಯಾನ ನಿರ್ಮಾಣ
Team Udayavani, Nov 8, 2024, 3:41 PM IST
ಬೆಂಗಳೂರು: ಕರ್ನಾಟಕ ಸೇರಿದಂತೆ ಸುತ್ತಮುತ್ತಲಿನ ಪಶ್ಚಿಮ ಘಟ್ಟಗಳ ಕಾಡುಗಳಿಗೆ ತೆರಳಿ, ಅಪರೂಪದ ಆಯ್ದ ಸಸ್ಯ ಪ್ರಭೇದಗಳನ್ನು ಸಂಗ್ರಹಿಸಿ, 30 ಅಡಿ ಎತ್ತರ ಹಾಗೂ 160 ಅಡಿ ಅಗಲದ (80 ಅಡಿಯ ಎರಡು ಗೋಡೆ) ಬೃಹತ್ ವರ್ಟಿಕಲ್ ಗಾರ್ಡನ್ ಅನ್ನು “ಟೈಗರ್ ವಿಂಗ್ಸ್’ ಶೀರ್ಷಿಕೆಯಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಿರ್ಮಿಸಲಾಗಿದೆ.
ಫ್ರೆಂಚ್‌ನ ರಾಷ್ಟ್ರೀಯ ವೈಜ್ಞಾನಿಕ ಸಂಶೋಧನಾ ಕೇಂದ್ರದೊಂದಿಗೆ ಗುರುತಿಸಿಕೊಂಡಿರುವ ವಿಶ್ವದರ್ಜೆಯ ಸಸ್ಯಶಾಸ್ತ್ರಜ್ಞ ಪ್ಯಾಟ್ರಿಕ್ ಬ್ಲಾಂಕ್ ಅವರ ಸಹಯೋಗದೊಂದಿಗೆ ಈ ವರ್ಟಿಕಲ್ ಗಾರ್ಡನ್ ಅನ್ನು ನಿರ್ಮಿಸಿದ್ದು, ಇದು ದೇಶದಲ್ಲಿಯೇ ಅತಿದೊಡ್ಡ ವರ್ಟಿಕಲ್ ಗಾರ್ಡನ್ ಆಗಿದೆ. ಇದರಲ್ಲಿ ಮಣ್ಣು ರಹಿತವಾಗಿ 153 ವಿವಿಧ ಜಾತಿಯ 15 ಸಾವಿರಕ್ಕೂ ಹೆಚ್ಚು ಸಸ್ಯಗಳಿಂದ ವಿನ್ಯಾಸಗೊಳಿಸಲಾಗಿದೆ.
ಜತೆಗೆ ರಾಷ್ಟ್ರೀಯ ಪ್ರಾಣಿ ಹುಲಿಯ ಶಕ್ತಿ ಮತ್ತು ಅದರ ಗಾಂಭೀರ್ಯತೆಯನ್ನು ಪ್ರತಿಬಿಂಬಿಸುವಂತೆ ಈ ಗಾರ್ಡನ್ ಅನ್ನು ರಚಿಸಿ, “ಟೈಗರ್ ವಿಂಗ್ಸ್’ ಎಂದು ಹೆಸರಿಡಲಾಗಿದೆ. ಶತಾವರಿ ಸಸ್ಯಗಳು ವಿಮಾನದ ರೆಕ್ಕೆಗಳ ಸಿಲೂಯೆಟ್ ಅನ್ನು ಗುರುತಿಸುತ್ತದೆ. ಇನ್ನು, ಕೆಂಪು, ಕಿತ್ತಳೆ, ಹಳದಿ ಮತ್ತು ಬಿಳಿ ಇಕ್ಸೋರಾ ಹೂವುಗಳು ಹುಲಿ ಬಣ್ಣಗಳನ್ನು ಪ್ರತಿನಿಧಿಸುತ್ತವೆ.
ಈ ಕುರಿತು ಮಾತನಾಡಿದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಹರಿ ಮರಾರ್, ಬೆಂಗಳೂರಿನಲ್ಲಿ ಸುಸ್ಥಿರತೆ, ಕಲಾತ್ಮಕತೆ ಮತ್ತು ತಾಂತ್ರಿಕ ಪ್ರಗತಿಯಲ್ಲಿ ಹೊಸ ದೃಷ್ಟಿಕೋನವನ್ನು ತರಲು ಬಯಸಿದ್ದೇವೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ಯಾಟ್ರಿಕ್ ಅವರ ಹೊಸ ವಿಧಾನದಿಂದ ಪ್ರಕೃತಿಯ ಮಡಿಲಿನಲ್ಲಿ ಸಸ್ಯಗಳನ್ನು ಬೆಳೆಯುವಂತೆಯೇ ಇಲ್ಲಿ ಬೆಳೆಯಲು ಅನುವು ಮಾಡಿಕೊಟ್ಟಿದೆ. ಟರ್ಮಿನಲ್ 2ನ ಉದ್ಯಾನವದಲ್ಲಿ ಟರ್ಮಿನಲ್, ತಂತ್ರಜ್ಞಾನ, ಕಲೆ ಮತ್ತು ಸುಸ್ಥಿರತೆ ಎಂಬ ನಾಲ್ಕು ತತ್ವಗಳ ಮೂಲಕ ಬೆಂಗಳೂರಿನ ನೈಜ ಸೌಂದರ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ತಿಳಿಸಿದರು.
“ಟೈಗರ್ ವಿಂಗ್ಸ್’, ಪ್ರಕೃತಿ ಮತ್ತು ವಾಸ್ತುಶಿಲ್ಪದ ಸಂಬಂಧವನ್ನು ತಿಳಿಸಿಕೊಡುತ್ತದೆ. ಪ್ರಕೃತಿಯ ಮಡಿಲಲ್ಲಿ ಸಸ್ಯಗಳು ಬೆಳೆಯುವ ವಾತಾವರಣವನ್ನು ಇಲ್ಲಿ ನಿರ್ಮಿಸಲಾಗಿದೆ. ಈ ವರ್ಟಿಕಲ್ ಉದ್ಯಾನವು ಹೆಚ್ಚು ನೀರಿನ ಸಾಮರ್ಥ್ಯ ಹೊಂದಿದೆ. ನೈಸರ್ಗಿಕ ಬಂಡೆ ಅಥವಾ ಕಲ್ಲಿನ ಗೋಡೆಗಳ ಮೇಲೆ ಸಸ್ಯಗಳು ಹೇಗೆ ಬೆಳೆಯುತ್ತವೆ ಎಂಬುದನ್ನು ತೋರಿಸುತ್ತದೆ. ಇಂತಹ ಸ್ಥಳಗಳಲ್ಲಿ ನೀರು ಮತ್ತು ಪೋಷಕಾಂಶಗಳು ಕಡಿಮೆ ಇದ್ದರೂ ಸಸ್ಯಗಳು ಸೊಂಪಾಗಿ ಬೆಳೆಯುತ್ತವೆ. ●ಹರಿ ಮರಾರ್, ಬಿಐಎಎಲ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.