Bengaluru: ಚಿತ್ರಮಂದಿರ ಶೌಚಗೃಹದಲ್ಲಿ ಯುವತಿ ಅಶ್ಲೀಲ ದೃಶ್ಯ ಸೆರೆ: ಬಾಲಕರಿಬ್ಬರು ವಶಕ್ಕೆ
ಊರ್ವಶಿ ಚಿತ್ರಮಂದಿರದಲ್ಲಿ ನಡೆದ ಕೃತ್ಯ ; ಕಿಟಕಿ ಬಳಿ ಮೊಬೈಲ್ ಇಟ್ಟು ಚಿತ್ರೀಕರಣ
Team Udayavani, Aug 16, 2024, 2:47 PM IST
ಬೆಂಗಳೂರು: ಭೀಮಾ ಸಿನಿಮಾ ವೀಕ್ಷಣೆಗೆ ಹೋಗಿದ್ದ ಯುವತಿಯೊಬ್ಬಳು ಶೌಚಾಲಯಕ್ಕೆ ಹೋದಾಗ ಆಕೆಯ ಅಶ್ಲೀಲ ವಿಡಿಯೋ ಚಿತ್ರೀಕರಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಅಪ್ರಾಪ್ತ ರನ್ನು ಕಲಾಸಿಪಾಳ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಗಿರಿನಗರ ನಿವಾಸಿ 23 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಜಯ ನಗರ ಮೊದಲ ಹಂತದ ನಿವಾಸಿಗಳಾದ 14 ವರ್ಷದ ಇಬ್ಬರು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ. ಇಬ್ಬರ ಹೇಳಿಕೆ ದಾಖಲಿಸಿಕೊಂಡು ಬಾಲ ನ್ಯಾಯಮಂಡಳಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಆ.10ರಂದು ಸಂತ್ರಸ್ತೆ ಭೀಮಾ ಸಿನಿಮಾ ವೀಕ್ಷಣೆಗೆ ಠಾಣೆ ವ್ಯಾಪ್ತಿಯ ಉರ್ವಶಿ ಚಿತ್ರಮಂದಿರಕ್ಕೆ ಹೋಗಿದ್ದಾರೆ. ಇಂಟರ್‌ವಲ್ ಸಮಯದಲ್ಲಿ ಶೌಚಾಲಯಕ್ಕೆ ತೆರಳಿದ್ದಾರೆ. ಅದೇ ಸಮಯಕ್ಕೆ ಆರೋಪಿಗಳು ಶೌಚಾಲಯದ ಕಿಟಕಿ ಬಳಿ ಮೊಬೈಲ್ ಇಟ್ಟು, ಸಂತ್ರಸ್ತೆಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿಕೊಂಡಿದ್ದಾರೆ. ಈ ವೇಳೆ ಕೈಯ ನೆರಳು ಕಂಡು ಗಾಬರಿಕೊಂಡ ಸಂತ್ರಸ್ತೆ ಕಿಟಕಿ ಬಳಿ ಇಣುಕಿ ನೋಡಿದಾಗ ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿರುವುದು ಕಂಡು ಬಂದಿದೆ. ಕೂಡಲೇ ಹೊರಗಡೆ ಬಂದು ನೋಡಿದಾಗ ಯಾರು ಇರಲಿಲ್ಲ. ಈ ಸಂಬಂಧ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.