Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ
ಅನುಮತಿ ಪಡೆಯದೆ ಆಯೋಜನೆ ; ಲೈಸೆನ್ಸ್ ರದ್ದು
Team Udayavani, Jan 10, 2025, 3:41 PM IST
ನೆಲಮಂಗಲ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ರಿಯಾಲಿಟಿ ಶೋ “ಬಿಗ್ ಬಾಸ್’ ಸೆಟ್ ಹಾಕಿರುವ ರಾಮೋಹಳ್ಳಿ ಗ್ರಾಮ ಪಂಚಾಯಿತಿಯ ಮಾಳಿಗೊಂಡನಹಳ್ಳಿ ಸರ್ವೇ ನಂ.128/1ರ ಸ್ಥಳದ ವಾಣಿಜ್ಯ, ವ್ಯಾಪಾರ ವಸತೀಯೇತರ ವ್ಯವಹಾರದ ಲೈಸೆನ್ಸ್ ರದ್ದು ಮಾಡಿದ್ದು, ಶೋ ಸ್ಥಗಿತಗೊಳಿಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಜಿಪಂ ಸಿಇಒ ಲತಾ ಕುಮಾರಿ ಸೂಚನೆ ನೀಡಿದ್ದಾರೆ.
ಬೆಂಗಳೂರು ದಕ್ಷಿಣ ತಾಲೂಕಿನ ಮಾಳಿಗೊಂಡನಹಳ್ಳಿಯಲ್ಲಿ ವಾಣಿಜ್ಯ ಕಾರ್ಯಕ್ರಮ ರಿಯಾಲಿಟಿ ಶೋ “ಬಿಗ್‌ಬಾಸ್’ ಕಾರ್ಮಿಕ ಇಲಾಖೆ, ಸ್ಥಳೀಯ ಗ್ರಾಪಂ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದೇ ಅಕ್ರಮ, ಕಾನೂನು ಬಾಹಿರವಾಗಿ ನಡೆಸಲಾಗುತ್ತಿದ್ದು, ಇದರ ಬಗ್ಗೆ ಜಿಲ್ಲಾಧಿಕಾರಿಗಳಿಗೆ ರಾಘವೇಂದ್ರಚಾರ್ ಎಂಬ ವ್ಯಕ್ತಿ ದೂರು ನೀಡಿದ್ದು, ಜಿಲ್ಲಾಧಿಕಾರಿಗಳು ಭೂಪರಿವರ್ತನೆ ಆದೇಶ ರದ್ದು ಮಾಡಿದ್ದಾರೆ.
ರಾಮೋಹಳ್ಳಿ ಗ್ರಾಪಂ ನವರು “ಬಿಗ್‌ಬಾಸ್’ ಶೋ ನಡೆಸಲು ಅನುಮತಿ ನೀಡಿಲ್ಲ ಎಂಬುದಾಗಿ ತಿಳಿಸಿರುವ ಕಾರಣ ಕೂಡಲೇ ಪರಿಶೀಲಿಸಿ ನಿಯಮಾನುಸಾರ ಅಗತ್ಯ ಕ್ರಮಕ್ಕೆ ಸಿಇಒ ಲತಾ ಕುಮಾರಿ ಸೂಚನೆ ನೀಡಿದ್ದು, ಅದರಂತೆ ರಾಮೋಹಳ್ಳಿ ಪಿಡಿಒ, ಜಮೀನಿನ ಮಾಲಿಕ ಪಡೆದಿದ್ದ ವಾಣಿಜ್ಯ, ವ್ಯಾಪಾರ ವಸತೀಯೇತರ ವ್ಯವಹಾರದ ಲೈಸೆನ್ಸ್ ರದ್ದು ಮಾಡಿದ್ದು, ಬಿಗ್‌ಬಾಸ್ ಶೋ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ.
ಬಿಗ್‌ಬಾಸ್ ನಡೆಯುತ್ತಿರುವ ಜಾಗದ ಲೈಸೆನ್ಸ್, ಭೂಪರಿವರ್ತನೆ ಆದೇಶ ಸಹ ರದ್ದು ಮಾಡಿದ್ದು, ಬಿಗ್ ಬಾಸ್ ಶೋ ನಿಲ್ಲಿಸಲು ಬೆಂಗಳೂರು ನಗರ ಜಿಪಂ ಸಿಇಒ ಸೂಚನೆ ನೀಡಿದ್ದಾರೆ. ●ರಾಘವೇಂದ್ರಚಾರ್, ರಾಜ್ಯಾಧ್ಯಕ್ಷ, ಪ್ರಸ್‌ಕ್ಲಬ್ ಕೌನ್ಸಿಲ್ ದೂರುದಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.