Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
ಅಪರಿಚಿತ ವ್ಯಕ್ತಿಗಳ ಜತೆಗೆ ಯಾವುದೇ ಮಾಹಿತಿ ಹಂಚಿಕೊಳ್ಳಬೇಡಿ: ಅನುಚೇತ್ ಸಲಹೆ
Team Udayavani, Nov 22, 2024, 3:34 PM IST
ಬೆಂಗಳೂರು: ಸಂಚಾರ ಪೊಲೀಸರ ಸೋಗಿನಲ್ಲಿ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡ ಪಾವತಿಗೆ ಬೇಡಿಕೆ ಇಡುವ ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ. ಎನ್.ಅನುಚೇತ್ ಮನವಿ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಅವರು, ಇತ್ತೀಚೆಗೆ ಸೈಬರ್ ವಂಚಕರು ಸಂಚಾರ ಪೊಲೀಸರ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಸಂಚಾರ ನಿಯಮ ಉಲ್ಲಂಘನೆಯ ದಂಡದ ಮೊತ್ತ ಪಾವತಿಸುವಂತೆ ಬೇಡಿಕೆ ಇಟ್ಟು ವಂಚನೆ ಮಾಡುತ್ತಿದ್ದಾರೆ. ಈ ಕುರಿತು ಹಲವಾರು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.
ಸಂಚಾರಿ ಪೊಲೀಸರೆಂದು ಸಾರ್ವಜನಿಕರಿಗೆ ಕರೆ ಮಾಡುತ್ತಿರುವ ವಂಚಕರು, ದಂಡದ ನಕಲಿ ಲಿಂಕ್ ಕಳುಹಿಸಿ ಪಾವತಿಗೆ ಒತ್ತಾಯಿಸುವುದು, ವಿಮೆ ನೀಡುವುದಾಗಿ ವಂಚನೆ, ಅಲ್ಲದೆ, ನಿಮ್ಮ ವಾಹನ ಹಿಟ್ ಆ್ಯಂಡ್ ರನ್ ಆಗಿರುವ ಬಗ್ಗೆ ಬೆದರಿಸುತ್ತಾರೆ. ಈ ಮೂಲಕ ವೈಯಕ್ತಿಕ ಮಾಹಿತಿ ದೋಚಲು ಯತ್ನಿಸಿ, ಮೊಬೈಲ್‌ನಲ್ಲಿ 1 ಅಥವಾ 2 ಸಂಖ್ಯೆಯನ್ನು ಒತ್ತಲು ಹೇಳಿ ವಂಚನೆ ಮಾಡುತ್ತಿದ್ದಾರೆ. ಈ ರೀತಿಯ ಕರೆಗಳನ್ನು ಪೊಲೀಸರು ಮಾಡುವುದಿಲ್ಲ ಎಂದರು.
ಸಾರ್ವಜನಿಕರಿಗೆ ಸಲಹೆ, ಸೂಚನೆಗಳು
ಅನುಮಾನಾಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ ಅಥವಾ ಲಗತ್ತುಗಳನ್ನು ಡೌನ್ ಲೋಡ್ ಮಾಡಬೇಡಿ.
ವೈಯಕ್ತಿಕ ಮಾಹಿತಿ ಕೊಡಬೇಡಿ ಅಥವಾ ಹಣ ಪಾವತಿ ಮಾಡದಿರಿ.
ಸಂಚಾರಿ ಪೊಲೀಸ್ ಇಲಾಖೆಯನ್ನು ನೇರವಾಗಿ ಸಂಪರ್ಕಿಸುವ ಮೂಲಕ ಕರೆಗಳು ಅಥವಾ ಸಂದೇಶಗಳ ವಿಶ್ವಾಸಾರ್ಹತೆಯನ್ನು ದೃಢಪಡಿಸಿಕೊಳ್ಳಿ.
ಸಂಚಾರಿ ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್ ಅಥವಾ ಸಹಾಯವಾಣಿ ಸಂಖ್ಯೆಗೆ (080-22868550 /22868444) ದೂರು ದಾಖಲಿಸಿ.
ಮಾಹಿತಿ ಒದಗಿಸುವ ಮೊದಲು ಅಧಿಕಾ ರಿಗಳ ಗುರುತುಗಳನ್ನು ಪರಿಶೀಲಿಸಿ. ದಂಡ ಅಥವಾ ಸೇವೆಗಳಿಗಾಗಿ, ದಂಡ ಪಾವತಿಗಾಗಿ ಅಧಿಕೃತ ವೆಬ್‌ಸೈಟ್‌ಗಳನ್ನು ಬಳಸಿ.
ಸಾಫ್ಟ್ವೇರ್ ಮತ್ತು ಆಪರೇಟಿಂಗ್ ಸಿಸ್ಟಂಗಳನ್ನು ನವೀಕೃತವಾಗಿರಿಸಿಕೊಳ್ಳಿ.
ಅನುಮಾನಾಸ್ಪದ ಚಟುವಟಿಕೆಗಳನ್ನು ಪೊಲೀಸರಿಗೆ ವರದಿ ಮಾಡುವ ಮೂಲಕ ಸುರಕ್ಷಿತ ಹಾಗೂ ಜಾಗರೂಕರಾಗಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.