ಬಿಐಇಸಿಯಲ್ಲಿ ಆರೈಕೆ ಕೇಂದ್ರ ಸಿದ್ಧ
Team Udayavani, Jul 3, 2020, 5:37 AM IST
ಬೆಂಗಳೂರು: ಕೋವಿಡ್ 19 ಸೋಂಕಿತರ ಚಿಕಿತ್ಸೆಗೆ ಕೋವಿಡ್ ಆರೈಕೆ ಕೇಂದ್ರವನ್ನಾಗಿ ಪರಿವರ್ತಿಸಿರುವ ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (ಬಿಐಇಸಿ) ಸೋಮವಾರದಿಂದ ಸೇವೆಗೆ ಮುಕ್ತವಾಗಲಿದೆ. ಇದನ್ನು ಪಾಲಿಕೆ ಆದ್ಯತೆಯ ಮೇರೆಗೆ ಸಿದ್ಧಪಡಿಸಿಕೊಳ್ಳುತ್ತಿದೆ.
ಈ ಸಂಬಂಧ ಪ್ರತಿಕ್ರಿಯಿಸಿದ ದಾಸರಹಳ್ಳಿ ವಲಯದ ಜಂಟಿ ಆಯುಕ್ತ ಕೆ. ನರಸಿಂಹಮೂರ್ತಿ ಅವರು, ಕೇಂದ್ರದಲ್ಲಿ ಅಂದಾಜು 5ರಿಂದ 7 ಸಾವಿರ ಜನ ಸೋಂ ಕಿತರಿಗೆ (ಕೋವಿಡ್ 19 ಸೋಂಕಿನ ಲಕ್ಷಣ ಇಲ್ಲದವರಿಗೆ) ಚಿಕಿತ್ಸೆ ನೀಡಬಹುದಾಗಿದೆ. ಮೊದಲ ಹಂತದಲ್ಲಿ ಐದು ಸಾವಿರ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.
ಸೋಂಕಿತರ ಸಂಖ್ಯೆಗೆ ಅನು ಗುಣವಾಗಿ 40, 45 ಹಾಗೂ 50 ಜನರಿಗೆ ಒಂದು ಕೇಂದ್ರದಂತೆ ಪ್ರತ್ಯೇಕ ಕ್ಯಾಬಿನ್ ರೀತಿ ಹಾಸಿಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದ್ದು, ಅಗತ್ಯ ಸೌಲಭ್ಯ ಗಳಿರಲಿವೆ. ಚಿಕಿತ್ಸೆ ನೀಡುವ ವೈದ್ಯರು ಹಾಗೂ ಸಹಾಯಕ ಸಿಬ್ಬಂದಿ ಏಳು ದಿನಗಳ ಕಾಲ ಇಲ್ಲೇ ಇರಲಿದ್ದು, ಇವರಿಗೂ ಪ್ರತ್ಯೇಕ ಕ್ಯಾಬಿನ್ ವ್ಯವಸ್ಥೆ ಮಾಡಲಾಗು ತ್ತಿದೆ. ಈಗಾಗಲೇ 50 ಶೌಚಾಲಯಗಳಿದ್ದು, ಹೆಚ್ಚುವರಿ ಇ- ಶೌಚಾಲಯ ಹಾಗೂ ಸ್ನಾನದ ಗೃಹಗಳನ್ನು ತಾತ್ಕಾಲಿಕವಾಗಿ ಬಳಸಿಕೊಳ್ಳಲಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.