ಸಂವಿಧಾನ ಓದಿದ್ದರೂ ಅರ್ಥೈಸಿಕೊಂಡಿಲ್ಲ: ನಾಗಮೋಹನದಾಸ

ಡಾ| ಬಿ.ಆರ್‌. ಅಂಬೇಡ್ಕರ್‌-ಮಾನವತಾವಾದಿ ಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮ

Team Udayavani, May 23, 2022, 11:42 AM IST

6

ಬೆಂಗಳೂರು: ದೇಶದಲ್ಲಿ ರಾಜಕೀಯ, ಆರ್ಥಿಕ ಹಾಗೂ ಸಾಮಾಜಿಕ ವಿಷಯಗಳ ಅಭಿವೃದ್ಧಿಯ ಕುರಿತು ಚರ್ಚೆಗಳು ನಡೆಯಬೇಕು. ಆದರೆ, ನಮ್ಮಲ್ಲಿ ಕೇವಲ ಸ್ವಹಿತಾಸಕ್ತಿಗಾಗಿ ರಾಜಕೀಯ ಕುರಿತ ಚರ್ಚೆಗಳು ಮಾತ್ರ ನಡೆಯುತ್ತಿದೆ. ಇದು ಉತ್ತಮ ಬೆಳವಣಿಗೆಯಲ್ಲ ಎಂದು ಹೈಕೋರ್ಟ್‌ ನಿವೃತ್ತ ನ್ಯಾಯಾಧೀಶ ನಾಗಮೋಹನ್‌ ದಾಸ್‌ ತಿಳಿಸಿದರು.

ಅಬಕಾರಿ ಇಲಾಖೆ ವತಿಯಿಂದ ನಗರದ ಯವನಿಕಾ ಸಭಾಂಗಣದಲ್ಲಿ ಹಮ್ಮಿಕೊಂಡ ಡಾ. ಬಿ.ಆರ್‌. ಅಂಬೇಡ್ಕರ್‌ ಹಾಗೂ ಮಾನವತಾವಾದಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ 72 ವರ್ಷದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಸಿಕ್ಕಿರುವುದು ಕೇವಲ ರಾಜಕೀಯ ಪ್ರಜಾಪ್ರಭುತ್ವ. ಚುನಾವಣೆ ಸಂದರ್ಭದಲ್ಲಿ ಜಾತಿ, ಧರ್ಮ, ಆಚಾರ, ವಿಚಾರಗಳ ಬಗ್ಗೆ ಗಮನ ಹರಿಸಲಾಗುತ್ತಿದೆ ಹೊರತು ಸಾಮಾಜಿಕ, ಆರ್ಥಿಕ ಅಭಿವೃದ್ಧಿ ವಿಚಾರದ ಮೇಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಹಲವರು ಸಂವಿಧಾನವನ್ನು ಓದಿಕೊಂಡಿದ್ದಾರೆ. ಆದರೆ, ಸರಿಯಾದ ರೀತಿಯಲ್ಲಿ ಅರ್ಥೈಸಲ್ಲಿಲ್ಲ. ಕೆಲವರು ಅರ್ಥೈಸಿದರೂ, ಅದರ ಆಧಾರದಂತೆ ನಡೆದುಕೊಳ್ಳುತ್ತಿಲ್ಲ. ಇದರ ಪರಿಣಾಮವಾಗಿ ಹಲವು ಸಮಸ್ಯೆಗಳು ಮುಂದುವರೆದು, ಹೊಸ ಸಮಸ್ಯೆಗಳು ಹಾಗೂ ಸವಾಲು ಹುಟ್ಟಿಕೊಳ್ಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಸಂವಿಧಾನದ ಮೂಲ ತತ್ವಗಳನ್ನೇ ಮರು ಪರಿಶೀಲನೆ ಮಾಡಬೇಕು ಎಂಬು ಕೂಗು ಕೇಳಿ ಬರುತ್ತಿದ್ದು, ಮತ್ತೂಂದೆಡೆಯಲ್ಲಿ ಸಂವಿಧಾನವನ್ನು ಬದಲಾಯಿಸಬೇಕು ಎನ್ನುವ ಕೂಗು ಸಹ ಕೇಳಿ ಬರುತ್ತಿದೆ ಎಂದರು.

ಕಾಯಕ ಜೀವಿಗಳು, ದಲಿತರು, ದಮನಿತರು, ಮಹಿಳೆಯರನ್ನು ಒಳಗೊಂಡಂತೆ ದೇಶದ ಎಲ್ಲ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ದುರ್ಬಲ ಜನಸಮುದಾಯದ ಪಾಲಿಗೆ ಸಂವಿಧಾನದ ಆಶ್ರಯ ಇನ್ನೂ ಕನಸಿನ ಗಂಟಾಗಿದೆ. ಇತ್ತೀಚಿನ ದಿನಗಳಲ್ಲಿ ಸಂವಿಧಾನ ಆಶಯದ ಮೇಲೆ ಗದಾಪ್ರಹಾರ ನಡೆಯುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಂವಿಧಾನದ ರಚನೆಯ ಹಿಂದಿನ ಆಶಯದೊಂದಿಗೆ ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸಿದ ಸಂದರ್ಭದಲ್ಲಿ ಹುಟ್ಟಿಕೊಂಡ ಅತೃಪ್ತಿಗಳನ್ನು ಬಳಸಿ, ಹುಸಿ ಸಂಸ್ಕೃತಿಯನ್ನು ಪ್ರಚಾರ ಮಾಡುವ ಮೂಲಕ ಸಂವಿಧಾನದ ಮೂಲ ಆಶಯಗಳ ಮೇಲೆ ದಾಳಿ ಮಾಡುತ್ತಾ, ಯುವ ಪೀಳಿಗೆಯನ್ನು ದಿಕ್ಕುಗೆಡಿಸುವ ಪ್ರಯತ್ನ ಇಂದು ವ್ಯವಸ್ಥಿತವಾಗಿ ನಡೆಯುತ್ತಿದೆ ಎಂದು ಆಂತಕ ವ್ಯಕ್ತಪಡಿಸಿದರು.

ಮೈಸೂರು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ, ಬೀದರ್‌ ಬುದ್ಧವಿಹಾರ್‌ ಬಂತೆ ವರಜ್ಯೋತಿ ಅಣದೂರ್‌, ಚಿಂತಕ ಪ್ರೊ. ಕಾಳೇಗೌಡ ನಾಗವಾರ, ದಸಂಸ ರಾಜ್ಯಸಂಚಾಲಕ ಮಾವಳ್ಳಿ ಶಂಕರ್‌, ರಾಜ್ಯ ಎಸ್ಸಿ -ಎಸ್ಟಿ ಚಂದ್ರಶೇಖರಯ್ಯ, ಪ್ರಜಾಪರಿವರ್ತನ ವೇದಿಕೆ ಅಧ್ಯಕ್ಷ ಬಿ.ಗೋಪಾಲ್‌, ದಸಂಸ ರಾಜ್ಯ ಸಂಚಾಲಕರು ಬಿ. ರಾಜಶೇಖರ್‌ ಮೂರ್ತಿ, ಸಿನಿಮಾ ನಟ ನವೀನ್‌ ಶಂಕರ್‌ ಹಾಗೂ ಅಬಕಾರಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್‌ ಬಸ್‌ ನಿಲ್ದಾಣ!

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ಇವಿ ಬೈಕ್‌ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್‌ ಬಂಧನ, ಬಿಡುಗಡೆ

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

Bengaluru: ನಗರದಲ್ಲಿ ನಿಷೇಧಿತ ಕಲರ್‌ ಕಾಟನ್‌ ಕ್ಯಾಂಡಿ ತಯಾರಿಕಾ ಘಟಕ ಬಂದ್‌

3

Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ 

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

Arrested: ನಕಲಿ ದಾಖಲೆ ನೀಡಿ ಟಿಡಿಎಸ್‌ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.