ಕೋವಿಡ್ 19 ಸೋಂಕಿಗೆ ಯುವಕ ಬಲಿ
Team Udayavani, Jun 14, 2020, 5:21 AM IST
ಬೆಂಗಳೂರು: ನಗರದಲ್ಲಿ ಕೋವಿಡ್ 19 ಸೋಂಕಿನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವ ನಡುವೆಯೇ ಇದೇ ಮೊದಲ ಬಾರಿಗೆ 23 ವರ್ಷದ ಯುವಕರೊಬ್ಬರು ಕೋವಿಡ್ 19 ಸೋಂಕಿನಿಂದ ನಗರದಲ್ಲಿ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಸೋಂಕಿನ ಲಕ್ಷಣಗಳು ಹಾಗೂ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜೆಪಿ ನಗರದ 23 ವರ್ಷದ ಯುವಕನನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರು ಜ್ವರ, ವಾಂತಿ, ಭೇದಿಯಿಂದ ಸಮಸ್ಯೆಯನ್ನು ಎದುರಿಸುತ್ತಿದ್ದರು. ಚಿಕಿತ್ಸೆ ವೇಳೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ತಡರಾತ್ರಿ (ಜೂನ್.12)ಕ್ಕೆ ಮೃತಪಟ್ಟಿದ್ದು, ಆರೋಗ್ಯ ಇಲಾಖೆಯ ಮಾರ್ಗಸೂಚಿ ಅನುಸಾರ ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.
ಭಯದಿಂದ ಹೃದಯಾಘಾತ?: ಶಿವಾಜಿನಗರದಲ್ಲಿ ನೆಲೆಸಿದ್ದ ಯುವಕ ಅಲ್ಲಿ ಬಾಡಿಗೆ ಜಾಸ್ತಿ ನೀಡಬೇಕು ಎಂದು ಹದಿನೈದು ದಿನಗಳ ಹಿಂದಷ್ಟೇ ಜೆ.ಸಿ ನಗರಕ್ಕೆ ಮನೆ ಬದಲಾಯಿಸಿಕೊಂಡು ವಾಸವಾಗಿದ್ದರು. ಕೋವಿಡ್ 19 ಸೋಂಕಿನ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸೋಂಕು ತಗುಲಿತು ಎಂದು ಆತಂಕಕ್ಕೆ ಒಳಗಾದ ಹಿನ್ನೆಲೆಯಲ್ಲಿ ಹೃದಯಾಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.