ಬಿಬಿಎಂಪಿ ಅಧಿಕಾರಿಗಳಿಗೂ ಕೋವಿಡ್ ಸೋಂಕು: ಸಾರ್ವಜನಿಕ ಭೇಟಿಗೆ ತಾತ್ಕಾಲಿಕ ನಿರ್ಬಂಧ
Team Udayavani, Jun 1, 2020, 12:10 PM IST
ಬೆಂಗಳೂರು: ಪಾದರಾಯನಪುರ ಪಾಲಿಕೆ ಸದಸ್ಯ ಇಮ್ರಾನ್ ಪಾಷಾ ಅವರ ಸಂಪರ್ಕದಲ್ಲಿದ್ದ ಪಾಲಿಕೆಯ ಶಿಕ್ಷಣ ವಿಭಾಗದ ಸಹಾಯಕ ಆಯುಕ್ತರಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ. ಪಾಲಿಕೆ ಸದಸ್ಯನ ಪ್ರಾಥಮಿಕ ಸಂಪರ್ಕದಲ್ಲಿದ್ದ ಇದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಕ್ವಾರಂಟೈನ್ ಮಾಡಲಾಗಿತ್ತು.
ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಕೊವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಇವರು ಕೇಂದ್ರ ಕಚೇರಿಗೂ ಓಡಾಡಿದ್ದರು, ವಾರ್ ರೂಂ ನಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ. ಇವರ ಸಂಪರ್ಕದಲ್ಲಿ ಬಂದವರನ್ನು ಪತ್ತೆಹಚ್ಚಲಾಗುತ್ತಿದ್ದು, ಇನ್ನಿಬ್ಬರು ಅಧಿಕಾರಿಗಳಿಗೂ ಕೋವಿಡ್ ಸೋಂಕಿರುವುದು ದೃಢಪಟ್ಟಿದ್ದು, ಮತ್ತೊಮ್ಮೆ ಪರಿಶೀಲನೆ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ ತಿಳಿಸಿದರು. ಮತ್ತಿಬ್ಬರು ಅಧಿಕಾರಿಗಳು ಯಾರು ಎನ್ನುವುದು ಇನ್ನು ಬಹಿರಂಗವಾಗಿಲ್ಲ.
ಇಂದು ಬೆಳಗ್ಗೆ ಸುಬ್ರಹ್ಮಣ್ಯ ನಗರದ 25 ವರ್ಷದ ಯುವತಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇದ್ದ ಹಿನ್ನಲೆ ಹೊರಗೆ ಓಡಾಡಿದಾಗ ಸೋಂಕು ತಗುಲಿದೆ. ಸದ್ಯ ಈ ಪ್ರದೇಶವನ್ನು ಕಂಟೈನ್ ಮೆಂಟ್ ಮಾಡಲು ನಿರ್ಧರಿಸಲಾಗಿದೆ. ಮನೆಯಲ್ಲಿದ್ದ ಅಜ್ಜಿ ,ಇಬ್ಬರು ಸಹೋದರು ಹಾಗೂ ತಾಯಿಯನ್ನು ಕ್ವಾರಂಟೈನ್ ಮಾಡಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.
ಸಾರ್ವಜನಿಕ ಭೇಟಿಗೆ ತಾತ್ಕಾಲಿಕ ನಿರ್ಬಂಧ: ಪಾಲಿಕೆಯ ಅಧಿಕಾರಿಗಳಲ್ಲಿ ಸೋಂಕು ದೃಢವಾದ ಹಿನ್ನಲೆಯಲ್ಲಿ ಅಧಿಕಾರಿ ಕರ್ತವ್ಯ ನಿರ್ವಹಿಸುತ್ತಿರುವ ಕಛೇರಿಯ ಆವರಣ ಹಾಗೂ ಕಚೇರಿಯ ನೆಲಮಹಡಿ ಮತ್ತು ಮೊದಲನೆ ಮಹಡಿಯನ್ನು ಸಂಪೂರ್ಣ ಸ್ಯಾನಿಟೇಷನ್ (ಔಷದ ಸಿಂಪಡಣೆ ಹಾಗೂ ಸ್ವಚ್ಚತೆ) ಗೊಳಿಸಲಾಗುತ್ತಿದೆ. ಹಾಗೂ ಈ ಸಂಬಂಧ ಕಛೇರಿ ಸುತ್ತ ಮುತ್ತ ಸಾರ್ವಜನಿಕ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಭಂದಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
MUST WATCH
ಹೊಸ ಸೇರ್ಪಡೆ
Shirva: ಹಿಂದೂ ಜೂನಿಯರ್ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ
Kerala: ಆ್ಯಂಬುಲೆನ್ಸ್ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್ ರದ್ದು!
Anmol Bishnoi: ಅಮೆರಿಕದಲ್ಲಿ ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಬಂಧನ
Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.