ಕೆಎಸ್‌ಆರ್‌ಪಿಯಲ್ಲಿ ಕೋವಿಡ್ 19 ಅಬ್ಬರ
Team Udayavani, Jun 23, 2020, 5:24 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಸೀಲ್‌ಡೌನ್, ಲಾಕ್‌ಡೌನ್ ಹಾಗೂ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆಎಸ್‌ಆರ್‌ಪಿ ಸಿಬ್ಬಂದಿಯಲ್ಲಿ ಮತ್ತೆ ಕೋವಿಡ್ 19 ಆರ್ಭಟಿಸಿದೆ. ಕೋರಮಂಗಲದ ನಾಲ್ಕನೇ ಬೆಟಾಲಿಯನ್ ನಲ್ಲಿ ಞಮವಾರ ಆರು ಜನ ಸಿಬ್ಬಂದಿಯಲ್ಲಿ ಕಾಣಿಸಿಕೊಂಡಿದ್ದು, 230ಕ್ಕೂ ಅಧಿಕ ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ, ಸೋಂಕಿತರು ಪಾದರಾಯನಪುರ ಹಾಗೂ ಇನ್ನಿತರೆ ಸೂಕ್ಷ್ಮ ಪ್ರದೇಶಗಳಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ಕೆಎಸ್‌ಆರ್‌ಪಿ ಅಧಿಕಾರಿಗಳು ಮಾಹಿತಿ ನೀಡಿದರು.
ಈ ಹಿನ್ನೆಲೆಯಲ್ಲಿ ನಾಲ್ಕನೇ ಬೆಟಾಲಿಯನ್ ಕ್ವಾರ್ಟರ್ಸ್ ನ ಪ್ರತಿಯೊಂದು ಮನೆ ಹಾಗೂ ರಸ್ತೆಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಕ್ವಾರಂಟೈನ್ ನಲ್ಲಿರುವ ಮನೆಗಳಿಗೆ ದಿನಸಿ ವಸ್ತುಗಳನ್ನು ಪೂರೈಸಲಾಗುತ್ತಿದೆ. ಸೋಂಕಿತರು ಹಾಗೂ ಅವರ ಕುಟುಂಬ ಸದಸ್ಯರ ಬಗ್ಗೆ ಹೆಚ್ಚು ಕಾಳಜಿ ವಹಿಸಲಾಗಿದೆ ಎಂದು ಕೆಎಸ್‌ಆರ್‌ಪಿ ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೆ 3 ಠಾಣೆ ಸೀಲ್‌ಡೌನ್: ನಗರ ಪೊಲೀಸರಲ್ಲಿ ಕೋವಿಡ್ 19 ದಿನೇ ದಿನೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಆರು ಮಂದಿಗೆ ಸೋಂಕು ದೃಢಪಟ್ಟಿದೆ. ಹಲಸೂರು ಗೇಟ್ ಠಾಣೆ, ಕುಮಾರ ಸ್ವಾಮಿ ಲೇಔಟ್, ಕಬ್ಬನ್ ಪಾರ್ಕ್ ಹಾಗೂ ಸಿಸಿಬಿಯಲ್ಲಿ ಕೆಲಸ ಮಾಡುತ್ತಿದ್ದ ಆರು ಮಂದಿಗೆ ಸೋಂಕು ತಗುಲಿದೆ. ಸೋಂಕು ತಗುಲಿದ್ದವರ ಜತೆ ಸಂಪರ್ಕದಲ್ಲಿದ್ದ ಸುಮಾರು 50 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಸದ್ಯ ಮೂರು ಠಾಣೆಗಳನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿದೆ. ಇದೀಗ ಸೋಂಕು ದೃಢಪಟ್ಟವರನ್ನು ಹಿಂದೆಯೇ ಕ್ವಾರಂಟೈನ್ ಮಾಡಲಾಗಿದ್ದು, ಅವರಲ್ಲಿ ಇದೀಗ ಸೋಂಕು ಪತ್ತೆಯಾಗಿದೆ. ಇದುವರೆಗೆ ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 75 ಪೊಲೀಸರಿಗೆ ಸೋಂಕು ತಗುಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.