ಮಾನ್ಯತೆ ಪಡೆದ ಪ್ರಯೋಗಾಲಯದಲ್ಲಿ ಮಾತ್ರ ಕೋವಿಡ್ ಪರೀಕ್ಷೆ
Team Udayavani, Jun 6, 2020, 5:22 AM IST
ಬೆಂಗಳೂರು: ಸೋಂಕು ಪರೀಕ್ಷೆ ವರದಿಗೆ ಸಂಬಂಧಿಸಿದಂತೆ ಉಂಟಾಗುತ್ತಿರುವ ಗೊಂದಲ ದಿಂದ ಎಚ್ಚೆತ್ತ ಬಿಬಿಎಂಪಿ, ಇನ್ಮುಂದೆ ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತಿನಿಂದ (ಐಸಿಎಂಆರ್) ಮಾನ್ಯತೆ ಪಡೆದ ಪ್ರಯೋಗಾಲಯಗಳಿಗೆ ಮಾತ್ರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲು ನಿರ್ಧರಿಸಿದೆ.
ಈಚೆಗೆ ಎರಡು-ಮೂರು ಪ್ರಕರಣಗಳಲ್ಲಿ ಮೊದಲು “ಪಾಸಿಟಿವ್’ ಎಂದು ಪ್ರಕಟಿಸಲಾಗಿತ್ತು. ತದನಂತರ ಅದು “ನೆಗೆಟಿವ್’ ಆಗಿರುವುದು ದೃಢಪಟ್ಟಿತ್ತು. ಖಾಸಗಿ ಪ್ರಯೋಗಾಲಯಗಳಿಂದ ಈ ಎಡವಟ್ಟು ಆಗಿತ್ತು. ಈ ಹಿ°ನೆಲೆಯಲ್ಲಿ ಐಸಿಎಂಆರ್ ಮಾನ್ಯತೆ ಪಡೆದ ಪ್ರಯೋ ಗಾಲಯಗಳಿಗಷ್ಟೇ ವರದಿ ನೀಡಬೇಕು. ಹಾಗೂ ಆ ವರದಿಯನ್ನೇ ಆಸ್ಪತ್ರೆಗಳೂ ಅನುಸರಿಸಬೇಕು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್ ತಿಳಿಸಿದ್ದಾರೆ.
ಮಾನ್ಯತೆ ಪಡೆಯದೆ ಪರೀಕ್ಷೆ?: ಐಸಿಎಂಆರ್ ಮಾನ್ಯತೆ ಪಡೆಯದೆ, ಕೆಲವು ಖಾಸಗಿ ಪ್ರಯೋಗಾಲಯಗಳು ಕೋವಿಡ್ - 19 ಪರೀಕ್ಷೆ ನಡೆಸುತ್ತಿರುವುದು ತಿಳಿದುಬಂದಿದೆ. ಅಂತಹವರ ವಿರುದ ಸರ್ಕಾರ ಕ್ರಮ ಕೈಗೊಳ್ಳಲಿದೆ. ಖಾಸಗಿ ಪ್ರಯೋಗಾಲಯಗಳಿಂದ ಬಂದ ಪರೀಕ್ಷೆ ಫಲಿತಾಂಶದ ಬಗ್ಗೆ ಅನುಮಾನ ವ್ಯಕ್ತವಾದರೆ, ಸರ್ಕಾರಿ ಪ್ರಯೋಗಾಲಯಗಳಲ್ಲಿ ಮರುಪರೀಕ್ಷೆ ನಡೆಸಬಹುದು ಎಂದರು. “ಎರಡು-ಮೂರು ಪ್ರಕರಣಗಳ ಪರೀಕ್ಷಾ ಫಲಿತಾಂಶದಲ್ಲಿ ಈಚೆಗೆ ವ್ಯತ್ಯಾಸ ಕಂಡುಬಂದಿದೆ.
ಕೋವಿಡ್-19ಗೆ ಸಂಬಂಧಿಸಿದಂತೆ ಪರೀಕ್ಷೆ ನಡೆ ಸಲು ಐಸಿಎಮ್‌ಆರ್ ಮಾನ್ಯತೆ ಪಡೆದ ಪ್ರಯೋಗಾಲಯಗಳು ಇಲ್ಲದೆ ಇದ್ದರೆ, ಅದನ್ನು ಪರೀಕ್ಷಾ ವರದಿ ಎಂದು ಪರಿಗಣಿಸಲು ಸಾಧ್ಯವಿಲ್ಲ. ಖಾಸಗಿ ಲ್ಯಾಬ್‌ನಲ್ಲಿ ಕೋವಿಡ್ ಪಾಸಿಟಿವ್ ಬಂದರೆ, ಮತ್ತೂಮ್ಮೆ ಖಚಿತಪಡಿಸಿಕೊಳ್ಳಲು ಸರ್ಕಾರಿ ಲ್ಯಾಬ್‌ಗ ಕಳಿಸಿಕೊಡುತ್ತೇವೆ. ಇಲ್ಲಿ ನೆಗೆಟಿವ್ ಬಂದರೆ ನೆಗೆಟಿವ್ ಅಂತ ನಿರ್ಧಾರ ಮಾಡಲಾಗುವುದು’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
New Year: ಎಂ.ಜಿ.ರಸ್ತೆ ಸುತ್ತ 15 ಮೆ.ಟನ್ ಕಸ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.