ಪದಗ್ರಹಣಕ್ಕೆ ಅನುಮತಿ ನಿರಾಕರಣೆ: ಸಿದ್ದು ಖಂಡನೆ
Team Udayavani, Jun 10, 2020, 5:47 AM IST
ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಸರ್ಕಾರದ ಈ ನಿರ್ಧಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ. ಪದಗ್ರಹಣ ಸಮಾರಂಭಕ್ಕೆ ಎರಡನೇ ಬಾರಿ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ತೀರ್ಮಾನ ಕೈಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮ ಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಅನ್ವಯ ಆಗುವುದೇ ಎಂದು ಪ್ರಶಿಸಿದ್ದಾರೆ. ನಾವು ಕಾನೂನಿನ ಅಡಿಯಲ್ಲೇ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.